ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬೆಂಗಾವಲು ಪಡೆ ಮೇಲೆ ಕಲ್ಲು ತೂರಾಟ

ಭಾನುವಾರ ಪಾಟ್ನಾದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬೆಂಗಾವಲು ಪಡೆ ಮೇಲೆ ಕಲ್ಲು ತೂರಲಾಗಿದ್ದು, 11 ಜನರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೋಮವಾರ ಅವರ ನಿಗದಿತ ಭೇಟಿಗಾಗಿ ಗಯಾಗೆ ತೆರಳುತ್ತಿದ್ದ ಬೆಂಗಾವಲು ವಾಹನದಲ್ಲಿ ನಿತೀಶ್ ಕುಮಾರ್ ಅವರು ಇರಲಿಲ್ಲ ಎನ್ನಲಾಗಿದೆ.

Written by - Zee Kannada News Desk | Last Updated : Aug 21, 2022, 11:21 PM IST
  • ಗೌರಿ ಚೌಕ ಪೊಲೀಸ್ ಠಾಣಾ ವ್ಯಾಪ್ತಿಯ ಸೊಹ್ದಿ ಮೋಡ್‌ನಲ್ಲಿ ಸ್ಥಳೀಯ ವ್ಯಕ್ತಿಯೊಬ್ಬರ ಸಾವಿನ ಕುರಿತು ರಸ್ತೆ ತಡೆ ನಡೆಸುತ್ತಿದ್ದಾಗ ಸಂಜೆ 5 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ.
ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬೆಂಗಾವಲು ಪಡೆ ಮೇಲೆ ಕಲ್ಲು ತೂರಾಟ title=

ನವದೆಹಲಿ: ಭಾನುವಾರ ಪಾಟ್ನಾದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬೆಂಗಾವಲು ಪಡೆ ಮೇಲೆ ಕಲ್ಲು ತೂರಲಾಗಿದ್ದು, 11 ಜನರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೋಮವಾರ ಅವರ ನಿಗದಿತ ಭೇಟಿಗಾಗಿ ಗಯಾಗೆ ತೆರಳುತ್ತಿದ್ದ ಬೆಂಗಾವಲು ವಾಹನದಲ್ಲಿ ನಿತೀಶ್ ಕುಮಾರ್ ಅವರು ಇರಲಿಲ್ಲ ಎನ್ನಲಾಗಿದೆ.

ಗೌರಿ ಚೌಕ ಪೊಲೀಸ್ ಠಾಣಾ ವ್ಯಾಪ್ತಿಯ ಸೊಹ್ದಿ ಮೋಡ್‌ನಲ್ಲಿ ಸ್ಥಳೀಯ ವ್ಯಕ್ತಿಯೊಬ್ಬರ ಸಾವಿನ ಕುರಿತು ರಸ್ತೆ ತಡೆ ನಡೆಸುತ್ತಿದ್ದಾಗ ಸಂಜೆ 5 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ.

ಈಗ ಈ ಘಟನೆಯ ಕುರಿತಾಗಿ ಪ್ರತಿಕ್ರಿಯಿಸಿರುವ ಪಾಟ್ನಾ ಜಿಲ್ಲಾ ಮ್ಯಾಜಿಸ್ಟ್ರೇಟ್ ಚಂದ್ರಶೇಖರ್ ಸಿಂಗ್  "ಮುಖ್ಯಮಂತ್ರಿಯವರ ಬೆಂಗಾವಲು ವಾಹನವನ್ನು ಕಂಡ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದರು, ಮೂರು-ನಾಲ್ಕು ವಾಹನಗಳಿಗೆ ಸಣ್ಣ ಪ್ರಮಾಣದ ಹಾನಿಯನ್ನುಂಟುಮಾಡಿದರು" ಎಂದು ಪಿಟಿಐಗೆ ತಿಳಿಸಿದ್ದಾರೆ.

ಇದನ್ನೂ ಓದಿ: PNB ಗ್ರಾಹಕರೇ ಆಗಸ್ಟ್ 31ರ ಮೊದಲು ಈ ಕೆಲಸವನ್ನು ತಪ್ಪದೇ ಪೂರ್ಣಗೊಳಿಸಿ 

'15 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಮತ್ತು ಪೊಲೀಸರು ಈಗಾಗಲೇ 11 ಜನರನ್ನು ಬಂಧಿಸಿದ್ದಾರೆ. ನಾವು ಸಿಸಿಟಿವಿ ದೃಶ್ಯಗಳನ್ನು ವಿಶ್ಲೇಷಿಸುತ್ತಿದ್ದೇವೆ ಮತ್ತು ಉಳಿದ ನಾಲ್ವರನ್ನು ಶೀಘ್ರದಲ್ಲೇ ಬಂಧಿಸುತ್ತೇವೆ" ಎಂದು ಅವರು ಹೇಳಿದರು.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಇತ್ತೀಚಿನ "ರಾಜಕೀಯ ನಡೆಯನ್ನು" ಜೆಡಿಯು ಮುಂದಿನ ತಿಂಗಳ ಆರಂಭದಲ್ಲಿ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಮತ್ತು ರಾಷ್ಟ್ರೀಯ ಮಂಡಳಿಯ ಸಭೆಗಳಲ್ಲಿ ಅಂಗೀಕರಿಸಲಿದೆ ಎಂದು ಉನ್ನತ ಪದಾಧಿಕಾರಿಯೊಬ್ಬರು ಭಾನುವಾರ ಇಲ್ಲಿ ತಿಳಿಸಿದ್ದಾರೆ.

ಜೆಡಿಯು ರಾಷ್ಟ್ರೀಯ ಅಧ್ಯಕ್ಷ ರಾಜೀವ್ ರಂಜನ್ ಸಿಂಗ್ ಅಲಿಯಾಸ್ ಲಾಲನ್ ಪ್ರಕಾರ, ಸೆಪ್ಟೆಂಬರ್ 3 ಮತ್ತು 4 ರಂದು ಇಲ್ಲಿ ಸಭೆಗಳು ನಡೆಯಲಿವೆ.ಸೆಪ್ಟೆಂಬರ್ 3 ರಂದು ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಒಂದು ದಿನದ ನಂತರ ರಾಷ್ಟ್ರೀಯ ಮಂಡಳಿ ಸಭೆ ನಡೆಯಲಿದೆ ಎಂದು ಅವರು ಹೇಳಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News