ಬೆಂಗಳೂರು: ಸೆಪ್ಟೆಂಬರ್ 12 ರಿಂದ 10 ದಿನಗಳ ಕಾಲ ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನವನ್ನು ನಡೆಸಲು ಕರ್ನಾಟಕ ಕ್ಯಾಬಿನೆಟ್ ಗುರುವಾರ ನಿರ್ಧರಿಸಿದೆ. ಶನಿವಾರ ಮತ್ತು ಭಾನುವಾರ ಹೊರತುಪಡಿಸಿ 2 ವಾರಗಳ ಕಾಲ ಬೆಂಗಳೂರಿನ ವಿಧಾನಸೌಧದಲ್ಲಿ ಅಧಿವೇಶನ ನಡೆಯಲಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಸಂಪುಟದ ನಿರ್ಧಾರಗಳ ಕುರಿತು ತಿಳಿಸಿದರು.
ಬೆಂಗಳೂರಿನ ಸಿಂಗೇನ ಅಗ್ರಹಾರ ಹಣ್ಣಿನ ಮಾರುಕಟ್ಟೆ ಬಳಿಯ ಗೂಳಿಮಂಗಲ ಗ್ರಾಮದ 42.31 ಎಕರೆ ಜಾಗದಲ್ಲಿ ತರಕಾರಿ ಮಾರುಕಟ್ಟೆ ಅಭಿವೃದ್ಧಿಗೆ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ. ಕಲಾಸಿಪಾಳ್ಯ ಮಾರುಕಟ್ಟೆಯನ್ನು ನಗರದ ಹೃದಯ ಭಾಗದಿಂದ ಸ್ಥಳಾಂತರಿಸುವ ಗುರಿ ಹೊಂದಲಾಗಿದ್ದು, ಇದಕ್ಕಾಗಿ 100 ಕೋಟಿ ರೂ.ಗಳನ್ನು ಮಂಜೂರು ಮಾಡಲಾಗಿದೆ. ಈ ಪೈಕಿ ಭೂಸ್ವಾಧೀನಕ್ಕೆ 48 ಕೋಟಿ ರೂ. ಮತ್ತು ಮಾರುಕಟ್ಟೆಯ ಅಭಿವೃದ್ಧಿಗೆ 52 ಕೋಟಿ ರೂ. ವೆಚ್ಚವಾಗಲಿದೆ ಎಂದು ಮಾಧುಸ್ವಾಮಿ ಹೇಳಿದ್ದಾರೆ. ಬೆಂಗಳೂರಿನ ಜನದಟ್ಟಣೆಯನ್ನು ಕಡಿಮೆ ಮಾಡಲು ನಗರದ 4 ದಿಕ್ಕುಗಳಲ್ಲಿ ಇಂತಹ ಮಾರುಕಟ್ಟೆಗಳನ್ನು ಅಭಿವೃದ್ಧಿಪಡಿಸುವ ಅವಶ್ಯಕತೆಯಿದೆ ಎಂದು ಸಚಿವರು ಇದೇ ವೇಳೆ ತಿಳಿಸಿದರು.
ಇದನ್ನೂ ಓದಿ: DK Shivakumar : ಡಿಕೆಶಿ ಆಪ್ತರಿಗೆ ನೋಟಿಸ್ ; 'ಕಿರುಕುಳ ಕೊಡಕ್ಕೂ ಲಿಮಿಟ್ ಇರಬೇಕು'
ರೈತರ ಮಕ್ಕಳಿಗಾಗಿ 'ರೈತ ವಿದ್ಯಾ ನಿಧಿ' ಯೋಜನೆಯನ್ನು ಭೂರಹಿತ ಕೃಷಿ ಕಾರ್ಮಿಕರಿಗೂ ವಿಸ್ತರಿಸಲು ಸಂಪುಟ ನಿರ್ಧರಿಸಿದೆ. ಶಿಕ್ಷಣವನ್ನು ಉತ್ತೇಜಿಸುವ ಉದ್ದೇಶದಿಂದ, ‘ಮುಖ್ಯಮಂತ್ರಿಗಳ ರೈತ ವಿದ್ಯಾ ನಿಧಿ ಯೋಜನೆ’ಯು ದೇಶದಲ್ಲೇ ಮೊದಲನೆಯದು. ಇದರಡಿ 10.03 ಲಕ್ಷ ಮಕ್ಕಳಿಗೆ 439.95 ಕೋಟಿ ರೂ.ಗಳ ವಿದ್ಯಾರ್ಥಿವೇತನ ವಿತರಿಸಲಾಗಿದೆ. ಈ ಯೋಜನೆಯನ್ನು ನಂತರ ನೇಕಾರರು, ಮೀನುಗಾರರು ಮತ್ತು ಹಳದಿ ಬೋರ್ಡ್ ಟ್ಯಾಕ್ಸಿ ಡ್ರೈವರ್ಗಳ ಮಕ್ಕಳಿಗೆ ವಿಸ್ತರಿಸಲಾಯಿತು.
ಬಜೆಟ್ನಲ್ಲಿ ಘೋಷಿಸಿದಂತೆ ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ ಮತ್ತು ಬಾಗಲಕೋಟೆಯ 7 ಜಿಲ್ಲಾ ಕೇಂದ್ರಗಳಲ್ಲಿ 7 ವಿಶ್ವವಿದ್ಯಾಲಯಗಳನ್ನು ಆರಂಭಿಸಲು ಸಚಿವ ಸಂಪುಟವು ಆಡಳಿತಾತ್ಮಕ ಅನುಮೋದನೆ ನೀಡಿದೆ. ಗುಡೇಕೋಟೆ ಸ್ಲಾಟ್ ಬೇರ್ ಅಭಯಾರಣ್ಯ, ಶರಾವತಿ ಕಣಿವೆ ವನ್ಯಜೀವಿ ಅಭಯಾರಣ್ಯ, ಭೀಮಗಡ ವನ್ಯಜೀವಿ ಅಭಯಾರಣ್ಯ ಮತ್ತು ಕಪ್ಪತಗುಡ್ಡ ವನ್ಯಜೀವಿ ಅಭಯಾರಣ್ಯದ ಸುತ್ತಮುತ್ತಲಿನ ಪ್ರದೇಶಗಳನ್ನು ಪರಿಸರ ಸೂಕ್ಷ್ಮ ವಲಯಗಳಾಗಿ ಘೋಷಿಸಲು ಕೇಂದ್ರಕ್ಕೆ ಹೊಸ ಪ್ರಸ್ತಾವನೆಯನ್ನು ಕಳುಹಿಸಲು ನಿರ್ಧರಿಸಲಾಗಿದೆ.
ಇದನ್ನೂ ಓದಿ: ಮುನಿರತ್ನ ವಿರುದ್ಧ ಅಬ್ಬರಿಸಿದ್ದ ಪ್ರಧಾನಿ ಮೋದಿ ‘ಮೌನವ್ರತ’ ಪಾಲಿಸುತ್ತಿರುವುದೇಕೆ?: ಕಾಂಗ್ರೆಸ್
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.