ನವದೆಹಲಿ : ಭಾರತ ಕ್ರಿಕೆಟ್ ತಂಡದ ಆಲ್ ರೌಂಡರ್ ರವೀಂದ್ರ ಜಡೇಜಾ ಏಷ್ಯಾಕಪ್ ಗಾಗಿ ಹೊಸ ಕ್ರಿಕೆಟ್ ಕಿಟ್ ಪಡೆದ ಮೊದಲ ಆಟಗಾರನಾಗಿದ್ದರೆ. ಭಾರತ ತಂಡದ ಹೊಸ ಜೆರ್ಸಿಯಲ್ಲಿರುವ ಫೋಟೋವನ್ನು ಜಡೇಜಾ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ದುಬೈನಲ್ಲಿ ಆಗಸ್ಟ್ 27, 2022 ರಿಂದ ಸೆಪ್ಟೆಂಬರ್ 11, 2022 ರವರೆಗೆ ನಡೆಯಲಿರುವ ಏಷ್ಯಾ ಕಪ್‌ಗಾಗಿ ಹೊಸ ಜೆರ್ಸಿಯನ್ನು ಅನಾವರಣಗೊಳಿಸಿದ್ದಾರೆ.
ಈ ಬಾರಿಯ ಏಷ್ಯಾಕಪ್‌ನಲ್ಲಿ ಟೀಂ ಇಂಡಿಯಾದ ಮೊದಲ ಪಂದ್ಯ ಆಗಸ್ಟ್ 28 ರಂದು ಪಾಕಿಸ್ತಾನದ ವಿರುದ್ಧ ನಡೆಯಲಿದ್ದು, ಎರಡನೇ ಪಂದ್ಯದಲ್ಲಿ ಭಾರತ ತಂಡವು ಆಗಸ್ಟ್ 31 ರಂದು ಹಾಂಕಾಂಗ್ ಅನ್ನು ಎದುರಿಸಲಿದೆ. ಭಾರತ ತಂಡವು ಸಧ್ಯ ದುಬೈ ತಲುಪಿ, ಬುಧವಾರ ಅಭ್ಯಾಸವನ್ನು ಪ್ರಾರಂಭಿಸಿದೆ. ಈ ಅಭ್ಯಾಸದ ಫೋಟೋಗಳು ಮತ್ತು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ. ಇಂದು ಕೂಡ ಭಾರತ ತಂಡ ಸಂಜೆ ಅಭ್ಯಾಸ ನಡೆಸಿತು.
ಇದನ್ನೂ ಓದಿ : Asia Cup 2022 : ರೋಹಿತ್ ಜೊತೆ ಓಪನರ್ ಆಗಿ ರಾಹುಲ್ ಅಲ್ಲ ಈ ಆಟಗಾರನಿಗೆ ಚಾನ್ಸ್!
ಶನಿವಾರದಿಂದ ಆರಂಭವಾಗಲಿರುವ ಏಷ್ಯಾಕಪ್‌ಗೆ ಭಾರತ ತಂಡದ ಹಂಗಾಮಿ ಮುಖ್ಯ ಕೋಚ್ ಆಗಿ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಅವರನ್ನು ಬಿಸಿಸಿಐ ನೇಮಿಸಿದೆ. ಕೋವಿಡ್ -19 ಪಾಸಿಟಿವ್ ಬಂದ ಕಾರಣ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಯುಎಇಗೆ ಪ್ರಯಾಣಿಸಲು ಸಾಧ್ಯವಾಗದ ಕಾರಣ ಲಕ್ಷ್ಮಣ್ ಅವರನ್ನು ನೇಮಕ ಮಾಡಲಾಗಿದೆ.
ವಿವಿಎಸ್ ಲಕ್ಷ್ಮಣ್ ಈಗಾಗಲೇ ದುಬೈನಲ್ಲಿ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡವನ್ನು ಸೇರಿಕೊಂಡಿದ್ದಾರೆ. ಲಕ್ಷ್ಮಣ್ ಅವರು ಜಿಂಬಾಬ್ವೆ ವಿರುದ್ಧ ನಡೆದ ಮೂರು ODI ಸರಣಿಯಲ್ಲಿ ಭಾರತ ತಂಡದ ಕೋಚ್ ಆಗಿ ಕೆಲಸ ಮಾಡಿದ್ದಾರೆ.
ಇದನ್ನೂ ಓದಿ : IND vs Pak : ಪಾಕ್ ವಿರುದ್ಧ ಟೀಂ ಇಂಡಿಯಾ Playing 11ನಲ್ಲಿ ಈ ಆಟಗಾರನಿಗಿಲ್ಲ ಸ್ಥಾನ!
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.