ಅಧಿಕ ರಕ್ತದೊತ್ತಡದ ಕಾಯಿಲೆಯನ್ನು ಎದುರಿಸಲು ಕೆಲವರು ಔಷಧಿಯನ್ನು ತೆಗೆದುಕೊಳ್ಳಬೇಕಾಗುತ್ತದೆ. ಆದರೆ ಔಷಧಿಯನ್ನು ತೆಗೆದುಕೊಳ್ಳದೆಯೇ ರಕ್ತದೊತ್ತಡವನ್ನು ನಿಯಂತ್ರಿಸುವುದು ಸಾಧ್ಯ. ಅದಕ್ಕಾಗಿ ಕೆಲವೊಂದು ಕ್ರಮಗಳನ್ನು ಅನುಸರಿಸಬೇಕಾಗುತ್ತದೆ.
ಬೆಂಗಳೂರು : ಅಧಿಕ ರಕ್ತದೊತ್ತಡದ ಸಮಸ್ಯೆ ಗಂಭೀರ ಕಾಯಿಲೆಯಾಗಿದೆ. ಹೆಚ್ಚಿನ ಸಂಖ್ಯೆಯ ಜನರು ಅಧಿಕ ರಕ್ತದೊತ್ತಡದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅಧಿಕ ರಕ್ತದೊತ್ತಡದಿಂದ ಎದೆನೋವು ಮತ್ತು ತಲೆನೋವಿನ ಸಮಸ್ಯೆ ಕೂಡಾ ಕಾಡುತ್ತದೆ. ಅಧಿಕ ರಕ್ತದೊತ್ತಡದ ಸಮಸ್ಯೆಗೆ ನಾವು ಅನುಸರಿಸುವ ಜೀವನ ಶೈಲಿಯೇ ಕಾರಣ. ರಕ್ತದೊತ್ತಡವು 120/80mmHg ಗಿಂತ ಹೆಚ್ಚಿದ್ದರೆ ಅದನ್ನು ಅಧಿಕ ರಕ್ತದೊತ್ತಡ ಎಂದು ಕರೆಯಲಾಗುತ್ತದೆ. ಅಧಿಕ ರಕ್ತದೊತ್ತಡದ ಕಾಯಿಲೆಯನ್ನು ಎದುರಿಸಲು ಕೆಲವರು ಔಷಧಿಯನ್ನು ತೆಗೆದುಕೊಳ್ಳಬೇಕಾಗುತ್ತದೆ. ಆದರೆ ಔಷಧಿಯನ್ನು ತೆಗೆದುಕೊಳ್ಳದೆಯೇ ರಕ್ತದೊತ್ತಡವನ್ನು ನಿಯಂತ್ರಿಸುವುದು ಸಾಧ್ಯ. ಅದಕ್ಕಾಗಿ ಕೆಲವೊಂದು ಕ್ರಮಗಳನ್ನು ಅನುಸರಿಸಬೇಕಾಗುತ್ತದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಅಧಿಕ ರಕ್ತದೊತ್ತಡ ಕಾಯಿಲೆಯಿಂದ ಬಳಲುತ್ತಿದ್ದರೆ, ದಿನಚರಿಯಲ್ಲಿ ವ್ಯಾಯಾಮವನ್ನು ಸೇರಿಸಿಕೊಳ್ಳಲೇಬೇಕು. ವ್ಯಾಯಾಮ ಮಾಡುವುದರಿಂದ ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು. ಅಧಿಕ ರಕ್ತದೊತ್ತಡದ ಸಮಸ್ಯೆಯನ್ನು ಹೋಗಲಾಡಿಸಲು, ಪ್ರತಿದಿನ 25-30 ನಿಮಿಷಗಳ ಕಾಲ ವ್ಯಾಯಾಮ ಮಾಡಬಹುದು. ವ್ಯಾಯಾಮವು ನಿಮ್ಮ ರಕ್ತದೊತ್ತಡವನ್ನು ನಿಯಂತ್ರಿಸುವುದು ಮಾತ್ರವಲ್ಲ, ಇಡೀ ದೇಹದ ಆರೋಗ್ಯವನ್ನು ಉತ್ತಮಗೊಳಿಸುತ್ತದೆ.
ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವ ರೋಗಿಗಳು ಕಡಿಮೆ ಉಪ್ಪು ಸೇವಿಸಬೇಕು. ಕಡಿಮೆ ಪ್ರಮಾಣದಲ್ಲಿ ಉಪ್ಪನ್ನು ಸೇವಿಸಿದರೆ ಅದು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಅಧಿಕ ರಕ್ತದೊತ್ತಡ ಹೊಂದಿರುವ ರೋಗಿಗಳು ಹೆಚ್ಚಿನ ಉಪ್ಪಿನಂಶ ಹೊಂದಿರುವ ಆಹಾರ ಪದಾರ್ಥಗಳು, ಪ್ಯಾಕ್ ಮಾಡಿದ ಚಿಪ್ಸ್ನಂತಹ ಜಂಕ್ ಫುಡ್ಗಳನ್ನು ಸೇವಿಸಬಾರದು.
ನೀವು ಅಧಿಕ ರಕ್ತದೊತ್ತಡದ ಸಮಸ್ಯೆಯಿಂದ ಬಳಲುತ್ತಿದ್ದರೆ, ನೀವು ಆಲ್ಕೊಹಾಲ್ ಸೇವಿಸಬಾರದು. ಆಲ್ಕೋಹಾಲ್ ಸೇವಿಸುವುದರಿಂದ ಸಮಸ್ಯೆ ಇನ್ನಷ್ಟು ಹೆಚ್ಚಬಹುದು. ಅಧಿಕ ರಕ್ತದೊತ್ತಡದ ಸಂದರ್ಭದಲ್ಲಿ ಆಲ್ಕೋಹಾಲ್ ಕುಡಿಯುವುದು ಮಾರಣಾಂತಿಕವಾಗಿ ಪರಿಣಮಿಸಬಹುದು.
ಅಧಿಕ ರಕ್ತದೊತ್ತಡ ರೋಗಿಗಳು ಒತ್ತಡವನ್ನು ತೆಗೆದುಕೊಳ್ಳಬಾರದು. ಉದ್ವೇಗಕ್ಕೆ ಒಳಗಾಗುವ ಜನರು ಹೆಚ್ಚು ಅನಾರೋಗ್ಯಕ್ಕೆ ಒಳಗಾಗುತ್ತಾರೆ. ಒತ್ತಡವು ಅನೇಕ ಗಂಭೀರ ಸಮಸ್ಯೆಗಳಿಗೆ ಕಾರಣವಾಗಬಹುದು. ಒತ್ತಡವನ್ನು ಕಡಿಮೆ ಮಾಡಲು ಕುಟುಂಬ ಮತ್ತು ಸ್ನೇಹಿತರೊಂದಿಗೆ ಸಮಯ ಕಳೆಯಿರಿ.
ಔಷಧ ತಿನ್ನದೆ ಅಧಿಕ ರಕ್ತದೊತ್ತಡದ ಸಮಸ್ಯೆಯಿಂದ ಮುಕ್ತಿ ಪಡೆಯಬೇಕಾದರೆ ದಿನಚರಿಯಲ್ಲಿ ಆರೋಗ್ಯಕರ ಆಹಾರ ಕ್ರಮವನ್ನು ಸೇರಿಸಿಕೊಳ್ಳಬೇಕು. ಆಹಾರದಲ್ಲಿರುವ ಪೋಷಕಾಂಶಗಳು ನಿಮ್ಮ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ. ವಿಟಮಿನ್ಗಳು ಮತ್ತು ಪೋಷಕಾಂಶಗಳು ರಕ್ತದೊತ್ತಡವನ್ನು ನಿಯಂತ್ರಿಸುವುದರ ಜೊತೆಗೆ ನಿಮ್ಮ ಇಡೀ ದೇಹವನ್ನು ಆರೋಗ್ಯವಾಗಿರಿಸುತ್ತದೆ.