Murugha Matta: ಮುರುಘಾ ಶ್ರೀ ಲೈಂಗಿಕರ ಕಿರುಕುಳ ಪ್ರಕರಣ : 2ನೇ ಆರೋಪಿ ಬಂಧನ

ಮುರುಘಾ ಶ್ರೀಗಳಿಂದ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ಸಂಬಂಧಿಸಿ 2ನೇ ಆರೋಪಿ ವಾರ್ಡನ್‌ ರಶ್ಮಿಯನ್ನು ಪೊಲೀಸರು ಬಂಧಿಸಿದ್ದಾರೆ. ಮುರುಘಾಮಠದಲ್ಲೇ ವಾಸ್ತವ್ಯ ಹೂಡಿದ್ದ A-1 ಮುರುಘಾ ಶ್ರೀ ಅವರನ್ನು ಗುರುವಾರ ರಾತ್ರಿ ಬಂಧಿಸಲಾಗಿತ್ತು.

Written by - Krishna N K | Last Updated : Sep 2, 2022, 02:08 PM IST
  • ಮುರುಘಾ ಶ್ರೀಗಳಿಂದ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ಆರೋಪ
  • 2ನೇ ಆರೋಪಿ ವಾರ್ಡನ್‌ ರಶ್ಮಿಯನ್ನು ಪೊಲೀಸರು ಬಂಧಿಸಿದ್ದಾರೆ.
  • A- 2 ಲೇಡಿ ವಾರ್ಡನ್ ರಶ್ಮಿಯನ್ನು ವಶಕ್ಕೆ ಪಡೆದಿದ್ದ ಪೊಲೀಸರು ಸಾಂತ್ವನ ಕೇಂದ್ರದಲ್ಲಿರಿಸಿದ್ದರು.
Murugha Matta: ಮುರುಘಾ ಶ್ರೀ ಲೈಂಗಿಕರ ಕಿರುಕುಳ ಪ್ರಕರಣ : 2ನೇ ಆರೋಪಿ ಬಂಧನ title=

ಚಿತ್ರದುರ್ಗ: ಮುರುಘಾ ಶ್ರೀಗಳಿಂದ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ಸಂಬಂಧಿಸಿ 2ನೇ ಆರೋಪಿ ವಾರ್ಡನ್‌ ರಶ್ಮಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮುರುಘಾಮಠದಲ್ಲೇ ವಾಸ್ತವ್ಯ ಹೂಡಿದ್ದ A-1 ಮುರುಘಾ ಶ್ರೀ ಅವರನ್ನು ಗುರುವಾರ ರಾತ್ರಿ ಬಂಧಿಸಲಾಗಿತ್ತು. A- 2 ಲೇಡಿ ವಾರ್ಡನ್ ರಶ್ಮಿಯನ್ನು ವಶಕ್ಕೆ ಪಡೆದಿದ್ದ ಪೊಲೀಸರು ಸಾಂತ್ವನ ಕೇಂದ್ರದಲ್ಲಿರಿಸಿದ್ದರು. ಸದ್ಯ A-3 ಮಠದ ಉತ್ತರಾಧಿಕಾರಿ ಬಸವಾದಿತ್ಯ, A-4 ಮಠದ ಕಾರ್ಯದರ್ಶಿ ಪರಮಶಿವಯ್ಯ, A-5 ವಕೀಲ ಗಂಗಾಧರಯ್ಯ ನಾಪತ್ತೆಯಾಗಿದ್ದಾರೆ. ಆರೋಪಿ ರಶ್ಮಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ವೈದ್ಯಕೀಯ ತಪಾಸಣೆಗೆ ಕರೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಮುರುಘಾ ಶ್ರೀ ಅರೆಸ್ಟ್.. ಚಿತ್ರದುರ್ಗದಲ್ಲಿ ಹೈ ಅಲರ್ಟ್..!

ಮುರುಘಾ ಶ್ರೀಗಳು ಸೇರಿದಂತೆ ಮೂವರು ಆರೋಪಿಗಳ ವಿರುದ್ಧ ಪೋಕ್ಸೋ, ಸುಮೋಟೋ ಕೇಸ್, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಇನ್ನು ಪೊಲೀಸರ ಬಂಧನದಲ್ಲಿರುವ ಮುರುಘಾ ಶ್ರೀಗಳ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯ ಐಸಿಯು ವಾರ್ಡ್‌ಗೆ ಕರೆದೊಯ್ಯಲಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News