ಬೆಂಗಳೂರು: ಆಹಾರ ಮತ್ತು ನಾಗರಿಕ ಪೂರೈಕೆ ಹಾಗೂ ಅರಣ್ಯ ಇಲಾಖೆ ಸಚಿವ ಉಮೇಶ್ ಕತ್ತಿ ಹಠಾತ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಬುಧವಾರ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ‘ಉಮೇಶ್ ಕತ್ತಿ ಅವರು ಕರ್ನಾಟಕದ ಅಭಿವೃದ್ಧಿಗೆ ಸಮೃದ್ಧ ಕೊಡುಗೆಗಳನ್ನು ನೀಡಿದ ಅನುಭವಿ ನಾಯಕರಾಗಿದ್ದರು. ಅವರ ನಿಧನದಿಂದ ನೋವಾಗಿದೆ. ಈ ದುಃಖಕರ ಸಮಯದಲ್ಲಿ ಅವರ ಕುಟುಂಬ ಮತ್ತು ಬೆಂಬಲಿಗರಿಗೆ ನನ್ನ ಸಂತಾಪಗಳು. ಓಂ ಶಾಂತಿ’ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.
ಶ್ರೀ ಉಮೇಶ್ ಕತ್ತಿ ಜಿ ಅವರು ಕರ್ನಾಟಕದ ಅಭಿವೃದ್ಧಿಗೆ ಸಮೃದ್ಧ ಕೊಡುಗೆಗಳನ್ನು ನೀಡಿದ ಅನುಭವಿ ನಾಯಕರಾಗಿದ್ದರು. ಅವರ ನಿಧನದಿಂದ ನೋವಾಗಿದೆ. ಈ ದುಃಖಕರ ಸಮಯದಲ್ಲಿ ಅವರ ಕುಟುಂಬ ಮತ್ತು ಬೆಂಬಲಿಗರಿಗೆ ನನ್ನ ಸಂತಾಪಗಳು. ಓಂ ಶಾಂತಿ.
— Narendra Modi (@narendramodi) September 7, 2022
ಇದನ್ನೂ ಓದಿ: Umesh Katti: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ, ಸಿಎಂ ಆಗುವ ಕನಸು ಕಂಡಿದ್ದ ಉಮೇಶ್ ಕತ್ತಿ
ಬಿಜೆಪಿ ರಾಷ್ಟ್ರೀಯ ಅಧ‍್ಯಕ್ಷ ಜೆ.ಪಿ.ನಡ್ಡಾ ಕೂಡ ಉಮೇಶ್ ಕತ್ತಿ ನಿಧನಕ್ಕೆ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ. ‘ಉಮೇಶ ಕತ್ತಿಯವರ ನಿಧನದ ಸುದ್ದಿ ಕೇಳಿ ಅತೀವ ದುಃಖವಾಯಿತು. ಅವರ ನಿಧನ ಕರ್ನಾಟಕಕ್ಕೆ ತುಂಬಲಾರದ ನಷ್ಟ. ಕರ್ನಾಟಕದ ಅಭಿವೃದ್ಧಿಯಲ್ಲಿ ಅವರ ಕೊಡುಗೆ ಸದಾ ಸ್ಮರಣೀಯ. ಈ ಕಷ್ಟದ ಸಮಯದಲ್ಲಿ ಅವರ ಕುಟುಂಬ ಮತ್ತು ಹಿತೈಷಿಗಳಿಗೆ ನನ್ನ ಸಂತಾಪ. ಓಂ ಶಾಂತಿ’ ಎಂದು ಹೇಳಿದ್ದಾರೆ.
ಹೃದಯಾಘಾತದಿಂದ ಉಮೇಶ್ ಕತ್ತಿಯವರು ಬೆಂಗಳೂರಿನ ತಮ್ಮ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಮಂಗಳವಾರ ರಾತ್ರಿ 10.30ಕ್ಕೆ ನಿಧನರಾಗಿದ್ದರು. ದಿಢೀರ್ ಎದೆನೋವು ಕಾಣಿಸಿಕೊಂಡಿದ್ದರಿಂದ ಸಚಿವರು ತಮ್ಮ ನಿವಾಸದ ಬಾತ್‍ರೂಂನಲ್ಲಿ ಕುಸಿದುಬಿದ್ದಿದ್ದರು. ಕೂಡಲೇ ಕುಟುಂಬಸ್ಥರು ಉಮೇಶ್ ಕತ್ತಿಯವರನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದರು.
ಇದನ್ನೂ ಓದಿ: ಆರಿತು ಉತ್ತರ ಕರ್ನಾಟಕ ಅಭಿವೃದ್ಧಿಯ ಆಶಾದೀಪ
Deeply saddened to hear about the demise of Shri Umesh Katti Ji. His demise is a huge loss for Karnataka. His contributions in the development of Karnataka will always be remembered. My condolences to his family and well wishers in this difficult time.
Om Shanti.— Jagat Prakash Nadda (@JPNadda) September 7, 2022
ತೀವ್ರ ನಿಗಾ ಘಟಕದಲ್ಲಿ ತಜ್ಞ ವೈದ್ಯರು ಉಮೇಶ್ ಕತ್ತಿಯವರಿಗೆ ಚಿಕಿತ್ಸೆ ನೀಡಿದರೂ ಪ್ರಯೋಜನವಾಗಿರಲಿಲ್ಲ. ಚಿಕಿತ್ಸೆ ಫಲಕಾರಿಯಾಗದೆ ಉಮೇಶ್ ಕತ್ತಿ ಕೊನೆಯುಸಿರು ಎಳೆದಿದ್ದರು. ಸಿಎಂ ಬಸವರಾಜ್ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಅನೇಕ ಗಣ್ಯರು ಉಮೇಶ್ ಕತ್ತಿಯವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.