ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶವನ್ನು ಸೆಪ್ಟೆಂಬರ್ 12ರಂದು ಪ್ರಕಟಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಮಾಹಿತಿ ನೀಡಿದ್ದಾರೆ.
ಈ ಕುರಿತು ಟ್ಟೀಟ್ ಮಾಡಿರುವ ಅವರು, ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶವನ್ನು ಸೆಪ್ಟೆಂಬರ್ 12ರಂದು ಪ್ರಕಟಿಸಲಾಗುತ್ತದೆ. ಬೆಳಗ್ಗೆ 11 ಗಂಟೆ ನಂತರ ವೆಬ್ಸೈಟ್ನಲ್ಲಿ ಫಲಿತಾಂಶ ಲಭ್ಯವಾಗಲಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ʼಕೃಷಿ ಸಚಿವರು ಮಿಸ್ಸಿಂಗ್ ಗೋದಿಬಣ್ಣ, ಕಟ್ಟುಮಸ್ತಾದ ಮೈಕಟ್ಟು, ದಪ್ಪ ಮೀಸೆʼ
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶವನ್ನು ಸೆಪ್ಟೆಂಬರ್ 12ರಂದು ಪ್ರಕಟಿಸಲಾಗುತ್ತದೆ.
ಬೆಳಗ್ಗೆ 11 ಗಂಟೆ ನಂತರ ವೆಬ್ಸೈಟ್ನಲ್ಲಿ ಫಲಿತಾಂಶ ಲಭ್ಯವಾಗಲಿದೆ.https://t.co/KfXLW0iMAQ
— B.C Nagesh (@BCNagesh_bjp) September 8, 2022
ದಿನಾಂಕ 12-08-2022 ರಿಂದ 25-08-2022ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆದಿತ್ತು. ಒಟ್ಟು 1,85,270 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಸದ್ಯ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು https://karresults.nic.in ಜಾಲತಾಣಕ್ಕೆ ಭೇಟಿ ನೀಡುವ ಮೂಲಕ ಫಲಿತಾಂಶ ವೀಕ್ಷಿಸಬಹುದಾಗಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.