ಕರಾಚಿ: ನ್ಯಾಷನಲ್ ಸ್ಟೇಡಿಯಂ ನಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ ಪಾಕ್ ವಿರುದ್ಧ ಇಂಗ್ಲೆಂಡ್ ತಂಡವು ಭರ್ಜರಿ ಗೆಲುವನ್ನು ಸಾಧಿಸಿದೆ.
ಟಾಸ್ ಗೆದ್ದು ಮೊದಲು ಕ್ಷೇತ್ರರಕ್ಷಣೆಯನ್ನು ಆಯ್ದುಕೊಂಡ ಪಾಕಿಸ್ತಾನ ತಂಡವು ಆರಂಭದಲ್ಲಿ ಸಾಲ್ಟ್ ಅವರ ಆರಂಭಿಕ ವಿಕೆಟ್ ಕಬಳಿಸುವ ಮೂಲಕ ಮೇಲುಗೈ ಸಾಧಿಸಿದರೂ ಕೂಡ ನಂತರ ಡಕೆಟ್ 70,ಹಾಗೂ ಹ್ಯಾರಿ ಬ್ರೂಕ್ ಅವರ 81 ರನ್ ಗಳ ಅಬ್ಬರದ ಬ್ಯಾಟಿಂಗ್ ಪ್ರದರ್ಶನದಿಂದಾಗಿ ಕೇವಲ ಮೂರು ವಿಕೆಟ್ ನಷ್ಟಕ್ಕೆ 20 ಓವರ್ ಗಳಲ್ಲಿ 221 ಗಳ ಬೃಹತ್ ಮೊತ್ತವನ್ನು ಪೇರಿಸಿತು.
ಇದನ್ನೂ ಓದಿ- Bank Locker Rules: ಬ್ಯಾಂಕ್ ಲಾಕರ್ಗೆ ಸಂಬಂಧಿಸಿದ ಪ್ರಮುಖ ನಿಯಮಗಳಲ್ಲಿ ಮಹತ್ವದ ಬದಲಾವಣೆ
ಇನ್ನೊಂದೆಡೆಗೆ ಇಂಗ್ಲೆಂಡ್ ತಂಡವು ನೀಡಿದ ಬೃಹತ್ ಮೊತ್ತದ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ ತಂಡಕ್ಕೆ ಆರಂಭದಲ್ಲಿಯೇ ಮಾರ್ಕ್ ವುಡ್ ಹಾಗೂ ತೋಪ್ಲೆ ಮಾರಕ ಬೌಲಿಂಗ್ ದಾಳಿಯ ಮೂಲಕ ಆಘಾತ ನೀಡಿದರು. ಇದರಿಂದಾಗಿ ಪಾಕ್ ತಂಡವು ತಂಡದ ಮೊತ್ತ 28 ರನ್ ಗಳಾಗುವಷ್ಟರಲ್ಲಿ ನಾಲ್ಕು ವಿಕೆಟ್ ಗಳನ್ನು ಕಳೆದುಕೊಂಡಿತು.
England take a lead in the series with a big win in Karachi 🙌🏻#PAKvENG | https://t.co/7OqaLW83qr pic.twitter.com/j2DUyaSSYt
— ICC (@ICC) September 23, 2022
ಇದನ್ನೂ ಓದಿ- Affordable Cars: 4 ಲಕ್ಷಕ್ಕಿಂತ ಕಡಿಮೆ ಬೆಲೆಯಲ್ಲಿ ಲಭ್ಯವಿರುವ ಅದ್ಭುತ ಕಾರುಗಳಿವು
ಪಾಕ್ ಪರವಾಗಿ ಶಾನ್ ಮಸೂದ್ ಅವರು 61 ರನ್ ಹಾಗೂ ಖುಷ್ದಿಲ್ ಶಾ 29 ರನ್ ಗಳಿಸಿದ್ದು ಬಿಟ್ಟರೆ ಉಳಿದವರು ಯಾರೂ ಕೂಡ ಅಂತಹ ನಿರೀಕ್ಷಿತ ಪ್ರದರ್ಶನ ನೀಡಲಿಲ್ಲ.ಅಂತಿಮವಾಗಿ 20 ಓವರ್ ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 145 ರನ್ ಗಳಿಸಲಷ್ಟೇ ಶಕ್ತವಾಯಿತು. ಇಂಗ್ಲೆಂಡ್ ಪರವಾಗಿ ಮಾರಕ ಬೌಲಿಂಗ್ ದಾಳಿ ನಡೆಸಿದ ಮಾರ್ಕ್ ವುಡ್ ಹಾಗೂ ಆದಿಲ್ ರಶಿದ್ ತಲಾ ಎರಡು ವಿಕೆಟ್ ಗಳನ್ನು ಕಬಳಿಸುವ ಮೂಲಕ ಪಾಕ್ ತಂಡದ ಬ್ಯಾಟಿಂಗ್ ಬೆನ್ನೆಲುಬನ್ನು ಮುರಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.