ಬೆಂಗಳೂರು: ವಿಧಾನಸಭೆಯಿಂದ ನಾಮನಿರ್ದೇಶನಗೊಳ್ಳುವ ಎರಡು ವಿಧಾನಪರಿಷತ್ ಸ್ಥಾನಗಳಿಗೆ ಎಂ.ಸಿ. ವೇಣುಗೋಪಾಲ್ ಹಾಗೂ ನಜೀರ್ ಅಹಮದ್ ಇಬ್ಬರು ಕಾಂಗ್ರೆಸ್ ನಾಯಕರೊಂದಿಗೆ ಇಂದು ನಾಮಪತ್ರ ಸಲ್ಲಿಸಿದರು.
ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ನಾಮನಿರ್ದೇಶನಗೊಳ್ಳುವ ಎರಡು ಸ್ಥಾನಗಳಿಗೆ ಎಂ.ಸಿ. ವೇಣುಗೋಪಾಲ್ ಹಾಗೂ ನಜೀರ್ ಅಹಮದ್ ಈ ಇಬ್ಬರು ಇಂದು ನಾಮಪತ್ರವನ್ನು ಸಲ್ಲಿಸಿದ್ದಾರೆ. ಈ ಇಬ್ಬರಿಗೂ ನನ್ನ ಆತ್ಮೀಯ ಶುಭಾಶಯಗಳು. pic.twitter.com/fne48lk5uB
— Dr. G Parameshwara (@DrParameshwara) September 24, 2018
ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್, ವಿಧಾನಪರಿಷತ್ನ ಎರಡು ಸ್ಥಾನಗಳಿಗೆ ನಾಮಪತ್ರ ಸಲ್ಲಿಸಲಾಗಿದೆ. ಅ.4 ರಂದು ನಡೆಯಲಿರುವ ಚುನಾವಣೆಯಲ್ಲಿ ಈ ಇಬ್ಬರು ಆಯ್ಕೆಯಾಗಲಿದ್ದಾರೆ. ಬಿಜೆಪಿಯವರು 104 ಸ್ಥಾನ ಹೊಂದಿದ್ದರೂ ಅಭ್ಯರ್ಥಿ ಕಣಕ್ಕಿಳಿಸುವ ಪ್ರಯತ್ನದ ಬಗ್ಗೆ ಮಾಹಿತಿ ಇಲ್ಲ. ಅವರು ಇಳಿಸಿದರೂ ನಮ್ಮ ಪಕ್ಷದವರೇ ಆಯ್ಕೆಯಾಗುವುದರಲ್ಲಿ ಸಂಶಯವಿಲ್ಲ ಎಂದರು.
ನಾಮಪತ್ರ ಸಲ್ಲಿಕೆ ವೇಳೆ ಸಚಿವರುಗಳಾದ ಡಿ.ಕೆ. ಶಿವಕುಮಾರ್, ಕೃಷ್ಣಭೈರೇಗೌಡ, ಪ್ರಿಯಾಂಕ ಖರ್ಗೆ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಸೇರಿದಂತೆ ಇತರೆ ಶಾಸಕರು ಉಪಸ್ಥಿತರಿದ್ದರು.