MS Dhoni News: ನಾಳೆ ಯಾವ ಮಹತ್ವದ ನಿರ್ಧಾರ ಕೈಗೊಳ್ಳಲಿದ್ದಾರೆ MSD? ಸಾಮಾಜಿಕ ಮಾಧ್ಯಮದ ಮೇಲೆ ಘೋಷಣೆ

MS Dhoni Social Media Post:ಸಾಮಾಜಿಕ ಮಾಧ್ಯಮದ ಮೇಲೆ ಪೋಸ್ಟ್ ವೊಂದನ್ನು ಹಂಚಿಕೊಂಡಿರುವ ಮಾಹಿ, ಸೆಪ್ಟೆಂಬರ್ 25 ರಂದು ತಾವು ಮಹತ್ವದ ನಿರ್ಧಾರ ಕೈಗೊಳ್ಳುತ್ತಿರುವುದಾಗಿ ಹೇಳಿದ್ದಾರೆ.  

Written by - Nitin Tabib | Last Updated : Sep 24, 2022, 08:13 PM IST
  • ಎಂಎಸ್ ಧೋನಿ ತಮ್ಮ ಫೇಸ್ ಬುಕ್ ಪ್ರೊಫೈಲ್ ನಲ್ಲಿ ಪೋಸ್ಟ್ ಮಾಡುವ ಮೂಲಕ ಲೈವ್ ಬರುವ ಬಗ್ಗೆ ಈ ಮಾಹಿತಿ ನೀಡಿದ್ದಾರೆ.
  • ಈ ಸಂದರ್ಭದಲ್ಲಿ ಮಾಹಿ ಮಹತ್ವದ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ನಂಬಲಾಗಿದೆ.
  • ಈ ವೇಳೆ ಮಹೇಂದ್ರ ಸಿಂಗ್ ಧೋನಿ ತಮ್ಮ ಅಭಿಮಾನಿಗಳೊಂದಿಗೆ ನೇರ ಸಂಪರ್ಕದಲ್ಲಿರಲಿದ್ದಾರೆ.
MS Dhoni News: ನಾಳೆ ಯಾವ ಮಹತ್ವದ ನಿರ್ಧಾರ ಕೈಗೊಳ್ಳಲಿದ್ದಾರೆ MSD? ಸಾಮಾಜಿಕ ಮಾಧ್ಯಮದ ಮೇಲೆ ಘೋಷಣೆ title=
MS Dhoni Live (Photo Courtesy - MSD Facebook)

MSD Social Media Post: ಭಾರತೀಯ ಕ್ರಿಕೆಟ್‌ನ ಅತ್ಯಂತ ಯಶಸ್ವಿ ನಾಯಕರಲ್ಲಿ ಒಬ್ಬರಾದ ಮಹೇಂದ್ರ ಸಿಂಗ್ ಧೋನಿ ನಾಳೆ ಅಂದರೆ ಸೆಪ್ಟೆಂಬರ್ 25 ರಂದು ಮಹತ್ವದ  ನಿರ್ಧಾರವೊಂದನ್ನು ಪ್ರಕಟಿಸಲಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕರಾಗಿರುವ ಧೋನಿ ತಾವು ನಾಳೆ (ಭಾನುವಾರ) ಮಧ್ಯಾಹ್ನ 2 ಗಂಟೆಗೆ ಫೇಸ್‌ಬುಕ್ ಲೈವ್‌ನಲ್ಲಿ ಸ್ವಾರಸ್ಯಕರ ಸುದ್ದಿಯೊಂದನ್ನು ನೀಡಲಿರುವುದಾಗಿ ಸಾಮಾಜಿಕ ಮಾಧ್ಯಮದಲ್ಲಿ ಘೋಷಿಸಿದ್ದಾರೆ.

ಎಂಎಸ್ ಧೋನಿ ತಮ್ಮ ಫೇಸ್ ಬುಕ್ ಪ್ರೊಫೈಲ್ ನಲ್ಲಿ ಪೋಸ್ಟ್ ಮಾಡುವ ಮೂಲಕ ಲೈವ್ ಬರುವ ಬಗ್ಗೆ ಈ ಮಾಹಿತಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಮಾಹಿ ಮಹತ್ವದ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ನಂಬಲಾಗಿದೆ. ಈ ವೇಳೆ ಮಹೇಂದ್ರ ಸಿಂಗ್ ಧೋನಿ ತಮ್ಮ ಅಭಿಮಾನಿಗಳೊಂದಿಗೆ ನೇರ ಸಂಪರ್ಕದಲ್ಲಿರಲಿದ್ದಾರೆ. ಸೆಪ್ಟೆಂಬರ್ 25 ರಂದು ಧೋನಿ ತಮ್ಮ ಅಭಿಮಾನಿಗಳೊಂದಿಗೆ ಮಾತನಾಡಲಿದ್ದಾರೆ ಮತ್ತು ಅವರು ದೊಡ್ಡ ನಿರ್ಧಾರವನ್ನು ತೆಗೆದುಕೊಳ್ಳಲಿದ್ದಾರೆ ಎಂದು ನಿರೀಕ್ಷಿಸಲಾಗುತ್ತಿದೆ.

ಇದನ್ನೂ ಓದಿ-ಲೆಜೆಂಡ್ಸ್ ಲೀಗ್ ಕ್ರಿಕೆಟ್ 2022ರ ಫೈನಲ್ ಡೇಟ್ ಫಿಕ್ಸ್: ಟಿಕೆಟ್-ಸ್ಥಳದ ಬಗ್ಗೆ ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್

ಈ ಕುರಿತು ತಮ್ಮ ಸಾಮಾಜಿಕ ಮಾಧ್ಯಮ ಪೋಸ್ಟ್ ನಲ್ಲಿ ಬರೆದುಕೊಂಡಿರುವ ಎಂಎಸ್ ಧೋನಿ, "ನಾನು ನಿಮ್ಮೊಂದಿಗೆ ಸುದ್ದಿಯೊಂದನ್ನು ಹಂಚಿಕೊಳ್ಳುವನಿದ್ದೇನೆ. ನಾನು ಈ ಮಾಹಿತಿಯನ್ನು ಸೆಪ್ಟೆಂಬರ್ 25 ರಂದು ಮಧ್ಯಾಹ್ನ 2 ಗಂಟೆಗೆ ಲೈವ್ ಬರುವ ಮೂಲಕ ನೀಡುತ್ತೇನೆ. ನೀವೆಲ್ಲರೂ ಇರುತ್ತೀರಿ ಎಂದು ಭಾವಿಸುತ್ತೇವೆ" ಎಂದು ಬರೆದಿದ್ದಾರೆ.

ಇದನ್ನೂ ಓದಿ-ಆರ್‌ಸಿಬಿ...ಆರ್‌ಸಿಬಿ... ಎಂದು ಕೂಗಿದ ಫ್ಯಾನ್ಸ್‌ ಮೇಲೆ ಕಿಂಗ್‌ ಕೊಹ್ಲಿ ಗರಂ..

ಅಂತರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿರುವ ಎಂಎಸ್ ಧೋನಿ, ಎಲ್ಲಾ ಮಾದರಿಯ ಐಸಿಸಿ ಪಂದ್ಯಾವಳಿಗಳಲ್ಲಿ (ODI ವಿಶ್ವಕಪ್, T20 ವಿಶ್ವಕಪ್ ಮತ್ತು ಚಾಂಪಿಯನ್ಸ್ ಟ್ರೋಫಿ) ಗೆದ್ದ ವಿಶ್ವದ ಏಕೈಕ ನಾಯಕರಾಗಿದ್ದಾರೆ. ಐಪಿಎಲ್‌ನಲ್ಲಿ ತಮ್ಮ ನಾಯಕತ್ವದಲ್ಲಿ ನಾಲ್ಕು ಬಾರಿ ಚೆನ್ನೈ ಸೂಪರ್ ಕಿಂಗ್ಸ್ ಅನ್ನು ಅವರು ಚಾಂಪಿಯನ್ ಆಗಿಸಿದ್ದಾರೆ.

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News