ಬೆಂಗಳೂರು: ಖ್ಯಾತ ರಂಗಕರ್ಮಿ ಹೆಗ್ಗೋಡು ಪ್ರಸನ್ನ ಅವರನ್ನು 2018ರ ಮಹಾತ್ಮಾ ಗಾಂಧಿ ಸೇವಾ ಪ್ರಶಸ್ತಿಗೆ ಆಯ್ಕೆ ಮಾಡಿರುವುದಾಗಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರಕಟಿಸಿದ್ದಾರೆ.
ವಾರ್ತಾ ಮತ್ತು ಪ್ರಚಾರ ಇಲಾಖೆಯಿಂದ ನೀಡಲಾಗುವ ಈ ಪ್ರಶಸ್ತಿಯನ್ನು ಅಕ್ಟೋಬರ್ 2ರ ಗಾಂಧೀ ಜಯಂತಿಯಂದು ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಹಿರಿಯ ರಂಗಕರ್ಮಿ ಹೆಗ್ಗೋಡು ಪ್ರಸನ್ನ ಅವರಿಗೆ 5 ಲಕ್ಷ ರೂ. ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು ಎಂದು ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ.
ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡ ಅವರ ಅಧ್ಯಕ್ಷತೆಯ ಸಮಿತಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಸಂಯುಕ್ತ ಕರ್ನಾಟಕ ಪತ್ರಿಕೆಯ ಸಂಪಾದಕ ಹುಣಸವಾಡಿ ರಾಜನ್, ಗಾಂಧೀ ಸ್ಮಾರಕ ನಿಧಿ ಅಧ್ಯಕ್ಷ ವೂಡೆ ಪಿ. ಕೃಷ್ಣ ಈ ಸಮಿತಿಯ ಸದಸ್ಯರಾಗಿದ್ದು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ದೇಶಕ ಎನ್.ಆರ್. ವಿಶುಕುಮಾರ್ ಸದಸ್ಯ ಕಾರ್ಯದರ್ಶಿಗಳಾಗಿದ್ದರು.
2018ನೇ ಸಾಲಿನ ಮಹಾತ್ಮಾಗಾಂಧಿ ಸೇವಾ ಪ್ರಶಸ್ತಿಗೆ ರಂಗಕರ್ಮಿ ಪ್ರಸನ್ನ ಅವರನ್ನು ಆಯ್ಕೆ ಮಾಡಲಾಗಿದೆ.
ಸುಪ್ರೀಂಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ವಿ ಗೋಪಾಲಗೌಡ ಅವರ ಅಧ್ಯಕ್ಷತೆಯ ಸಮಿತಿ ಪ್ರಸನ್ನ ಅವರನ್ನು ಆಯ್ಕೆ ಮಾಡಿದೆ ಎಂದು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ತಿಳಿಸಿದರು.
ಈ ಪ್ರಶಸ್ತಿ 5 ಲಕ್ಷ ರೂ. ಬಹುಮಾನ ಒಳಗೊಂಡಿದೆ. pic.twitter.com/XQ3riIbgTz
— CM of Karnataka (@CMofKarnataka) September 25, 2018