ಬೆಂಗಳೂರು: ಪಿಎಫ್ಐ, ಎಸ್ಡಿಪಿಐ ಈ ಯಾವುದೇ ಸಂಘಟನೆಗಳಾಗಲಿ ಸಮಾಜದ ಸಾಮರಸ್ಯ ಹಾಳುಮಾಡುವ & ಗಲಭೆಗಳಿಗೆ ಕಾರಣವಾಗುತ್ತಿವೆ ಎಂಬುದಕ್ಕೆ ಸೂಕ್ತ ಸಾಕ್ಷ್ಯಾಧಾರವಿದ್ದರೆ ಬಿಜೆಪಿ ಸರ್ಕಾರ ಅಂತಹ ಸಂಘಟನೆಗಳನ್ನು ನಿಷೇಧ ಮಾಡಲಿ. ರಾಜ್ಯ ಮತ್ತು ಕೇಂದ್ರದಲ್ಲಿ ಎರಡೂ ಕಡೆ ನಿಮ್ಮದೆ ಸರ್ಕಾರ ಇದೆ. ಆದರೂ ಯಾಕೆ ಸುಮ್ಮನಿದ್ದೀರಿ? ಎಂದು ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಈ ಹಿಂದೆ ಪ್ರಶ್ನಿಸಿದ್ದರು.
ಸಿದ್ದರಾಮಯ್ಯನವರ ಈ ಪ್ರಶ್ನೆಗೆ ತಿರುಗೇಟು ನೀಡಿರುವ ಬಿಜೆಪಿ, ‘ನಾವು ನುಡಿದಂತೆ ನಡೆದಿದ್ದೇವೆ. ನೀವು "ಉಗ್ರಭಾಗ್ಯ" ಯೋಜನೆಯಡಿ ಸಾಕಿದ ರಣಹದ್ದುಗಳನ್ನು ಬೇಟೆಯಾಡಿದ್ದೇವೆ’ ಅಂತಾ ಟೀಕಿಸಿದೆ.
√ DONE!!!
ಮಾನ್ಯ @siddaramaiah ಅವರೇ, ನಾವು ನುಡಿದಂತೆ ನಡೆದಿದ್ದೇವೆ.
ನೀವು "ಉಗ್ರಭಾಗ್ಯ" ಯೋಜನೆಯಡಿ ಸಾಕಿದ ರಣಹದ್ದುಗಳನ್ನು ಬೇಟೆಯಾಡಿದ್ದೇವೆ.#PFIbanned https://t.co/BVaOddS34f
— BJP Karnataka (@BJP4Karnataka) September 28, 2022
ಇದನ್ನೂ ಓದಿ: ಹುಬ್ಬಳ್ಳಿ-ಧಾರವಾಡ ಪಾಲಿಕೆ ಮೇಯರ್ ವಿರುದ್ಧ Pay Mayor ಅಭಿಯಾನ..!
‘ದೇಶದ ಆಂತರಿಕ ಭದ್ರತೆಗೆ ಸವಾಲೆಸೆದಿದ್ದ ಪಿಎಫ್ಐ ಮತ್ತು ಅದರ ಸಹವರ್ತಿ ಸಂಘಟನೆಗಳನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮುಂದಿನ 5 ವರ್ಷಗಳ ಅವಧಿಗೆ ನಿಷೇಧ ಮಾಡಿದೆ. ಮೋದಿ ಸರ್ಕಾರದ ಈ ನಿರ್ಧಾರ ಅತ್ಯಂತ ಸ್ವಾಗತಾರ್ಹ. ಮತಾಂಧ ಶಕ್ತಿಗಳ ವಿರುದ್ಧ ಬಿಜೆಪಿಯ ಸಮರ ಮುಂದುವರೆಯಲಿದೆ’ ಅಂತಾ ಬಿಜೆಪಿ ಎಚ್ಚರಿಕೆ ನೀಡಿದೆ.
ಪಿಎಫ್ಐ ಸೇರಿದಂತೆ ಅದರ ಸಹವರ್ತಿ ಸಂಘಟನೆಗಳು ಮಾಡುತ್ತಿದ್ದ ಎಲ್ಲಾ ದೇಶ ವಿರೋಧಿ ಚಟುವಟಿಕೆಗಳಿಗೆ @siddaramaiah ಮತ್ತು @INCKarnataka ಪಕ್ಷ ಬೆಂಗಾವಲಾಗಿ ನಿಂತಿತ್ತು.
ನಿಷೇಧದ ಕುರಿತು ಕೆಪಿಸಿಸಿ ಅಧ್ಯಕ್ಷ @DKShivakumar, ಸಿದ್ದರಾಮಯ್ಯ ಏಕೆ ಇನ್ನೂ ಬಾಯಿ ತೆರೆದಿಲ್ಲ?
ಮತಬ್ಯಾಂಕ್ ಕಳೆದುಕೊಳ್ಳುವ ಭಯವೇ?#PFIbanned
— BJP Karnataka (@BJP4Karnataka) September 28, 2022
‘ಪಿಎಫ್ಐ ಸೇರಿದಂತೆ ಅದರ ಸಹವರ್ತಿ ಸಂಘಟನೆಗಳು ಮಾಡುತ್ತಿದ್ದ ಎಲ್ಲಾ ದೇಶ ವಿರೋಧಿ ಚಟುವಟಿಕೆಗಳಿಗೆ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷ ಬೆಂಗಾವಲಾಗಿ ನಿಂತಿತ್ತು. ನಿಷೇಧದ ಕುರಿತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಏಕೆ ಇನ್ನೂ ಬಾಯಿ ತೆರೆದಿಲ್ಲ? ಮತ ಬ್ಯಾಂಕ್ ಕಳೆದುಕೊಳ್ಳುವ ಭಯವೇ?’ ಎಂದು ಬಿಜೆಪಿ ವ್ಯಂಗ್ಯವಾಗಿ ಪ್ರಶ್ನಿಸಿದೆ.
ಇದನ್ನೂ ಓದಿ: ಅಚ್ಚರಿಯಾದರೂ ಸತ್ಯ.! ಮರದ ಕಡ್ಡಿ ಬದಲು ತಂತಿ ಬಳಸಿ ಗೂಡು ಕಟ್ಟಿದ ಕಾಗೆ
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.