ಕೋಲ್ಕತಾ: ಕೋಲ್ಕತಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಔಷಧಾಲಯ ವಿಭಾಗದಲ್ಲಿ ಇಂದು ಬೆಳಿಗ್ಗೆ ಅಗ್ನಿ ದುರಂತ ಸಂಭವಿಸಿದೆ. ಹತ್ತು ಅಗ್ನಿಶಾಮಕ ದಳಗಳು ಮತ್ತು ಕೋಲ್ಕತಾ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.
ಆರಂಭಿಕ ವರದಿಗಳ ಪ್ರಕಾರ, ಆಸ್ಪತ್ರೆಯಲ್ಲಿರುವ ಎಲ್ಲ ರೋಗಿಗಳು ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ.
#Visuals: Fire breaks out in the pharmacy department of Kolkata Medical College and Hospital. 10 fire engines and Kolkata police rushed to the spot. All the patients are safe. #Kolkata pic.twitter.com/IX7ENRRpUu
— ANI (@ANI) October 3, 2018
ಅಪಘಾತ ಸಂಭವಿಸಿದ ಸಮಯದಲ್ಲಿ ಆಸ್ಪತ್ರೆಯಲ್ಲಿ ಸುಮಾರು 250 ರೋಗಿಗಳು ದಾಖಲಾಗಿದ್ದರು ಎಂದು ತಿಳಿದುಬಂದಿದೆ. ಆಸ್ಪತ್ರೆಯ ಹೊರಗೆ ರೋಗಿಗಳು ಮಲಗಿರುವುದನ್ನು ಫೋಟೋಗಳಲ್ಲಿ ಕಾಣಬಹುದಾಗಿದೆ. ಅಧಿಕಾರಿಗಳು ಇನ್ನೂ ಆಸ್ಪತ್ರೆಯಲ್ಲಿ ಸಿಲುಕಿರುವವರಿಗೆ ಸ್ಥಳಾಂತರಿಸಲು ಪ್ರಯತ್ನಿಸುತ್ತಿದ್ದಾರೆ.