ನವದೆಹಲಿ: ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಕಾಂಗ್ರೆಸ್‍ನ ನೂತನ ಅಧ್ಯಕ್ಷರಾಗಿ ಅಕ್ಟೋಬರ್ 26ರಂದು ಅಧಿಕಾರ ಸ್ವೀಕರಿಸಲಿದ್ದಾರೆ. ದೆಹಲಿಯ ಎಐಸಿಸಿ ಕೇಂದ್ರ ಕಚೇರಿಯಲ್ಲಿ ಅಧಿಕಾರ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಟ್ವೀಟ್ ಮಾಡಿದ್ದಾರೆ.
ಈ ಸಮಾರಂಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಇನ್ನುಳಿದ ನಾಯಕರು ಭಾಗವಹಿಸಲಿದ್ದಾರೆ. ‘ಭಾರತ್ ಜೋಡೋ ಯಾತ್ರೆ’ ಆರಂಭವಾದ ಬಳಿಕ ಇದೇ ಮೊದಲ ಬಾರಿ ರಾಹುಲ್ ದೆಹಲಿಗೆ ಮರಳುತ್ತಿದ್ದಾರೆ.
ಇದನ್ನೂ ಓದಿ: Big News: ಎಐಸಿಸಿ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ್ ಖರ್ಗೆ ಆಯ್ಕೆ
ಆ ದಿನದ ಸಮಾರಂಭದಲ್ಲಿ ಖರ್ಗೆಯವರಿಗೆ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ಪ್ರಮಾಣಪತ್ರವನ್ನು ನೀಡಿ ಗೌರವಿಸಲಾಗುವುದು. ಅಂದಿನಿಂದ ಖರ್ಗೆಯವರು ತಮ್ಮ ಹೊಸ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ. 80ರ ಹರೆಯದ ಖರ್ಗೆಯವರ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ರಾಜ್ಯದ ಪ್ರಮುಖ ಕಾಂಗ್ರೆಸ್ ನಾಯಕರು ಸಹ ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ.
Function for the presentation of certificate of election to the newly elected @INCIndia President Shri Mallikarjun Kharge will be held on Wednesday the 26th October 2022 at 10.30 a.m. at AICC Headquarters, 24 Akbar Road, New Delhi.
— K C Venugopal (@kcvenugopalmp) October 20, 2022
ಈ ಬಗ್ಗೆ ಟ್ವೀಟ್ ಮಾಡಿರುವ ಕೆ.ಸಿ.ವೇಣುಗೋಪಾಲ್, ‘ಎಐಸಿಸಿ ಅಧ್ಯಕ್ಷರಾಗಿ ಹೊಸದಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆಯವರಿಗೆ ಚುನಾವಣಾ ಪ್ರಮಾಣ ಪತ್ರ ನೀಡುವ ಕಾರ್ಯಕ್ರಮ ಅ. 26ರ ಬುಧವಾರ ನಡೆಯಲಿದೆ. ದೆಹಲಿಯ 24 ಅಕ್ಬರ್ ರಸ್ತೆಯಲ್ಲಿರುವ ಎಐಸಿಸಿ ಪ್ರಧಾನ ಕಚೇರಿಯಲ್ಲಿ ಬೆಳಗ್ಗೆ 10.30ಕ್ಕೆ ಸಮಾರಂಭ ನಡೆಯಲಿದೆ’ ಅಂತಾ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ವಿಡಿಯೋ ನೋಡಿ : ಪ್ಯಾಕೇಜ್ ಸ್ಟಾರ್ ಅಂದ್ರೆ ಚಪ್ಪಲಿಯಲ್ಲಿ ಹೊಡೆಯುವೆ ಎಂದ ಪವನ್ ಕಲ್ಯಾಣ್!
ಅ.17ರಂದು ನಡೆದಿದ್ದ ಎಐಸಿಸಿಯ ಅಧ್ಯಕ್ಷೀಯ ಚುನಾವಣೆಯ ಮತ ಏಣಿಕೆ ಬುಧವಾರ(ಅ.19) ನಡೆದು ಫಲಿತಾಂಶ ಪ್ರಕಟವಾಗಿತ್ತು. ಕಾಂಗ್ರೆಸ್‍ನ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಒಟ್ಟು 7,897 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರೆ, ಅವರ ಪ್ರತಿಸ್ಪರ್ಧಿ ಶಶಿ ತರೂರ್ 1,072 ಮತಗಳನ್ನು ಪಡೆದಿದ್ದಾರೆ. 416 ಮತಗಳು ಅಸಿಂಧುವಾಗಿದ್ದವು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ