ಬೆಣ್ಣೆನಗರಿ ದಾವಣಗೆರೆಯಲ್ಲೂ ಕಾಂತಾರ ಹವಾ...

 ಬೆಣ್ಣೆನಗರಿ ದಾವಣಗೆರೆಯಲ್ಲೂ ಕಾಂತಾರ ಹವಾ ಜೋರಾಗಿದೆ. ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಹಾಗೂ ಎಸ್ ಪಿ ಸಿಬಿ ರಿಷ್ಯಂತ್ ಪೊಲೀಸ್ ಸಿಬ್ಬಂದಿ ಇಡೀ ಶೋ ಅನ್ನು ಬುಕ್ ಮಾಡಿಕೊಂಡು  ಕುಟುಂಬ ಸಮೇತರಾಗಿ ಕಾಂತಾರ ಸಿನಿಮಾ ನೋಡಿ ಖುಷಿಪಟ್ಟಿದ್ದಾರೆ.

Written by - Zee Kannada News Desk | Last Updated : Oct 22, 2022, 10:04 PM IST
  • ಸಿನಿಮಾ ಮುಗಿಯುವವರೆಗೆ ಸಮಯ ಕಳೆದಿದ್ದೆ ಗೊತ್ತಾಗಲಿಲ್ಲ.
  • ಅದರಲ್ಲಿಯೂ ಕುಟುಂಬದ ಸಮೇತ ಪೊಲೀಸ್ ಸಿಬ್ಬಂದಿ ವೀಕ್ಷಣೆ ಮಾಡಿದ್ದು ತುಂಬಾ ಖುಷಿ ಕೊಟ್ಟಿದೆ
  • ಕರಾವಳಿ ಜನರ ನಂಬಿಕೆಯಾಗಿರುವ ಭೂತಕೋಲದ ಬಗ್ಗೆ ಸಿನಿಮಾದಲ್ಲಿ ಅದ್ಭುತವಾಗಿ ತೋರಿಸಲಾಗಿದೆ.
ಬೆಣ್ಣೆನಗರಿ ದಾವಣಗೆರೆಯಲ್ಲೂ ಕಾಂತಾರ ಹವಾ...  title=

ದಾವಣಗೆರೆ: ಬೆಣ್ಣೆನಗರಿ ದಾವಣಗೆರೆಯಲ್ಲೂ ಕಾಂತಾರ ಹವಾ ಜೋರಾಗಿದೆ. ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಹಾಗೂ ಎಸ್ ಪಿ ಸಿಬಿ ರಿಷ್ಯಂತ್ ಪೊಲೀಸ್ ಸಿಬ್ಬಂದಿ ಇಡೀ ಶೋ ಅನ್ನು ಬುಕ್ ಮಾಡಿಕೊಂಡು  ಕುಟುಂಬ ಸಮೇತರಾಗಿ ಕಾಂತಾರ ಸಿನಿಮಾ ನೋಡಿ ಖುಷಿಪಟ್ಟಿದ್ದಾರೆ.

ಇದನ್ನೂ ಓದಿ: Puneeth Parva: ‘ಪುನೀತ ಪರ್ವ’ ಕಾರ್ಯಕ್ರಮ ನೋಡುತ್ತಲೇ ಹೃದಯಾಘಾತ; ಅಪ್ಪು ಅಭಿಮಾನಿ ಸಾವು..!

ನಗರದ ಗೀತಾಂಜಲಿ ಚಿತ್ರಮಂದಿರದಲ್ಲಿ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಹಾಗೂ ಎಸ್ ಪಿ ಸಿಬಿ ರಿಷ್ಯಂತ್ ಕೂಡ ಸಿಬ್ಬಂದಿ ಗಳ ಜೊತೆ ಸೇರಿ ಕಾಂತಾರ ಚಿತ್ರ ವೀಕ್ಷಣೆ ಮಾಡಿದರು.ಯಾವಾಗಲೂ ಕೆಲಸದ ಒತ್ತಡದಲ್ಲಿಇರುತ್ತಿದ್ದ ರಕ್ಷಣೆ, ಭದ್ರತೆ, ಅಪರಾಧ ಪ್ರಕರಣಗಳು ಹೀಗೆ ಬ್ಯುಸಿ ಇರುತ್ತಿದ್ದೆವು.ಒತ್ತಡದ  ನಡುವೆ ಕಾಂತಾರ ಚಿತ್ರ ನೋಡಿ ಮೈಂಡ್ ರೀಲಿಫ್ ಮಾಡಿಕೊಂಡರು.

ನಗರದ ಗೀತಾಂಜಲಿ ಚಿತ್ರಮಂದಿರದ ಮಾಲೀಕರ ಸಹಕಾರದಿಂದ ಪೊಲೀಸ್ ಸಿಬ್ಬಂದಿ ಮತ್ತು ಕುಟುಂಬದವರಿಗೆ ಪ್ರತ್ಯೇಕ ಶೋ ವ್ಯವಸ್ಥೆ ಮಾಡಲಾಗಿತ್ತು. ಈ ಚಿತ್ರಮಂದಿರದಲ್ಲಿ ಕಾಂತಾರ ಹೌಸ್‌ಫುಲ್ ಪ್ರದರ್ಶನ ಕಾಣುತ್ತಿದ್ದು, ಕಾಂತಾರ ಟಿಕೆಟ್‌ಗಾಗಿ ಪ್ರೇಕ್ಷಕರು ಮುಗಿ ಬೀಳುತ್ತಿದ್ದಾರೆ. ಟಿಕೆಟ್ ಕೂಡ ಮುಂಗಡವಾಗಿ ಬುಕ್ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಪೊಲೀಸರಿಗೆ ವಿಶೇಷ ಪ್ರದರ್ಶನ ಆಯೋಜಿಸಲಾಗಿತ್ತು.

ಇದನ್ನೂ ಓದಿ: Belagavi: ವಿಷ ಸೇವಿಸಿದ ಪತಿ, ಮಗು ಕೊಂದು ನೇಣಿಗೆ ಶರಣಾದ ಪತ್ನಿ!

ಚಿತ್ರ ವೀಕ್ಷಣೆ ಮಾಡಿದವರೆಲ್ಲರೂ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದರು. ಭೂತಕೋಲದ ಬಗ್ಗೆ ಅತ್ಯುತ್ತಮವಾಗಿ ಮೂಡಿಬಂದಿದೆ. ಕರಾವಳಿ ಜನರ ನಂಬಿಕೆಯಾಗಿರುವ ಭೂತಕೋಲದ ಬಗ್ಗೆ ಸಿನಿಮಾದಲ್ಲಿ ಅದ್ಭುತವಾಗಿ ತೋರಿಸಲಾಗಿದೆ. ವೃಷಬ್ ಶೆಟ್ಟಿ, ಕಿಶೋರ್ ಸೇರಿದಂತೆ ಎಲ್ಲರ ನಟನೆ ಸೂಪರ್. ಸಿನಿಮಾ ಮುಗಿಯುವವರೆಗೆ ಸಮಯ ಕಳೆದಿದ್ದೆ ಗೊತ್ತಾಗಲಿಲ್ಲ. ಅದರಲ್ಲಿಯೂ ಕುಟುಂಬದ ಸಮೇತ ಪೊಲೀಸ್ ಸಿಬ್ಬಂದಿ ವೀಕ್ಷಣೆ ಮಾಡಿದ್ದು ತುಂಬಾ ಖುಷಿ ಕೊಟ್ಟಿದೆ" ಎಂದು ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಸಂತಸ ಹಂಚಿಕೊಂಡರು.

ಜಿಲ್ಲಾಧಿಕಾರಿ,ಎಸ್‌ಪಿ, ಎಎಸ್ಪಿ, ಡಿವೈಎಸ್ಪಿ ಸೇರಿದಂತೆ ಎಲ್ಲಾ ಅಧಿಕಾರಿಗಳು ಸೇರಿ ಸಿನಿಮಾ ವೀಕ್ಷಣೆ ಮಾಡಿದ್ದು ವಿಶೇಷವಾಗಿತ್ತು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News