ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಿಂದ ಭಕ್ತರನ್ನು ಹೊತ್ತು ಸಾಗುತ್ತಿದ್ದ ಕೆಎಸ್ಆರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಇಳಿದಿದ್ದು 25 ಮಂದಿ ಗಾಯಗೊಂಡಿದ್ದಾರೆ. ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ತಪ್ಪಲಾದ ತಾಳಬೆಟ್ಟದ ಸಮೀಪ ಈ ಘಟನೆ ನಡೆದಿದೆ.
ದೀಪಾವಳಿ ಜಾತ್ರೆ ಮುಗಿಸಿಕೊಂಡು ಮಲೆಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್ ಗುಂಡಿಯೊಂದಕ್ಕೆ ಇಳಿದು ನಿಯಂತ್ರಣ ತಪ್ಪಿ ಹಳ್ಳಕ್ಕೆ ಇಳಿದ ಪರಿಣಾಮ 25 ಮಂದಿ ಗಾಯಗೊಂಡಿದ್ದಾರೆ.
ಇದನ್ನೂ ಓದಿ- ಹವಳ ಧರಿಸುವುದರಿಂದ ಜೀವನದಲ್ಲಿ ಅದ್ಭುತ ಬದಲಾವಣೆ, ಯಾರಿಗೆ ಲಾಭ ಗೊತ್ತಾ!
ಈ ಅಪಘಾತದಲ್ಲಿ ಚಾಲಕ ಚಂದ್ರಶೇಖರ್ ಅವರಿಗೆ ಕೈ ಮತ್ತು ಹೊಟ್ಟೆ ಭಾಗ, ಕಂಡಕ್ಟರ್ ಗೆ ಬೆನ್ಜು ಮತ್ತು ಹೊಟ್ಟೆ ಹಾಗೂ ಇಬ್ಬರು ಪ್ರಯಾಣಿಕರಿಗೆ ಹೆಚ್ಚು ಪೆಟ್ಟಾದ ಪರಿಣಾಮ ಮೈಸೂರಿಗೆ ರವಾನಿಸಲಾಗಿದೆ. ಗಾಯಗೊಂಡ ಇನ್ನುಳಿದ 21 ಮಂದಿಯನ್ನು ಕೊಳ್ಳೇಗಾಲ ಆಸ್ಪತ್ರೆಗೆ ರವಾನಿಸಲಾಗಿದೆ.
ಇದನ್ನೂ ಓದಿ- ದೀಪಾವಳಿ ಸಂಭ್ರಮ: ಮಾದಪ್ಪನ ಬೆಟ್ಟದಲ್ಲಿ ಹಾಲರವಿ ಉತ್ಸವದ ಸಡಗರ
KA:57 F:866 ಸಂಖ್ಯೆಯ ಈ ಬಸ್ ಮದ್ದೂರು ಘಟಕದ್ದಾಗಿದ್ದು ಈ ಘಟನೆ ವೇಳೆ ಬಸ್ಸಿನಲ್ಲಿ 51 ಪ್ರಯಾಣಿಕರು ಇದ್ದರು ಎಂದು ತಿಳಿದುಬಂದಿದೆ. ಅದೃಷ್ಟವಶಾತ್ ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.