ಕಾಂಗ್ರೆಸ್ ಪಕ್ಷದ ಸಂಘಟನೆಗೆ ಖರ್ಗೆ ಮೇಜರ್ ಸರ್ಜರಿ..!

ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆ ಈಗ ಮಲ್ಲಿಕಾರ್ಜುನ್ ಖರ್ಗೆ ಪಕ್ಷವನ್ನು ಪುನಶ್ಚೇತನಗೊಳಿಸುವ ನಿಟ್ಟಿಲ್ಲಿ ಹೆಜ್ಜೆಯನ್ನಿರಿಸಿದ್ದಾರೆ.

Written by - Zee Kannada News Desk | Last Updated : Oct 26, 2022, 09:01 PM IST
  • ಸಭೆಯಲ್ಲಿ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಕೂಡ ಉಪಸ್ಥಿತರಿದ್ದರು.
  • ಹೊಸ ಅಧಿಕಾರ ಸ್ವೀಕರಿಸಿದ ನಂತರ ಖರ್ಗೆ ನೇತೃತ್ವದಲ್ಲಿ ನಡೆದ ಮೊದಲ ಸಭೆ ಇದಾಗಿದೆ
  • ಸಭೆಯಲ್ಲಿ ಸಿಇಸಿ ಸದಸ್ಯರು ಮತ್ತು ಪ್ರಧಾನ ಕಾರ್ಯದರ್ಶಿಗಳಾದ ಮುಕುಲ್ ವಾಸ್ನಿಕ್ ಮತ್ತು ಕೆ ಸಿ ವೇಣುಗೋಪಾಲ್ ಉಪಸ್ಥಿತರಿದ್ದರು.
ಕಾಂಗ್ರೆಸ್ ಪಕ್ಷದ ಸಂಘಟನೆಗೆ ಖರ್ಗೆ ಮೇಜರ್ ಸರ್ಜರಿ..!  title=
Photo Courtsey: Twitter

ನವದೆಹಲಿ: ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆ ಈಗ ಮಲ್ಲಿಕಾರ್ಜುನ್ ಖರ್ಗೆ ಪಕ್ಷವನ್ನು ಪುನಶ್ಚೇತನಗೊಳಿಸುವ ನಿಟ್ಟಿಲ್ಲಿ ಹೆಜ್ಜೆಯನ್ನಿರಿಸಿದ್ದಾರೆ.

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿ ಬುಧವಾರ ಅಧಿಕಾರ ವಹಿಸಿಕೊಂಡ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯನ್ನು ಸ್ಟೀರಿಂಗ್ ಸಮಿತಿಯೊಂದಿಗೆ ಬದಲಾಯಿಸಿದ್ದಾರೆ.

ಪರಿಷ್ಕೃತ ಸಮಿತಿಯಲ್ಲಿ ಸೋನಿಯಾ ಗಾಂಧಿ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸೇರಿದಂತೆ 47 ಹೆಸರುಗಳನ್ನು ಸೇರಿಸಲಾಗಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

ಇದನ್ನೂ ಓದಿ: ಪ್ರಸಕ್ತ ವರ್ಷವನ್ನು ಜೀವನೋಪಾಯ ವರ್ಷ ಎಂದು ರಾಜ್ಯ ಸರ್ಕಾರ ಘೋಷಣೆ

ಇತರರಲ್ಲಿ ಎ ಕೆ ಆಂಟನಿ, ಅಂಬಿಕಾ ಸೋನಿ, ಆನಂದ್ ಶರ್ಮಾ, ಕೆ ಸಿ ವೇಣುಗೋಪಾಲ್ ಮತ್ತು ರಣದೀಪ್ ಸುರ್ಜೆವಾಲಾ ಸೇರಿದ್ದಾರೆ.ಕರ್ನಾಟಕದಿಂದ ದಿನೇಶ್ ಗುಂಡುರಾವ್,ಎಚ್.ಕೆ.ಪಾಟೀಲ್,ಕೆ.ಎಚ್.ಮುನಿಯಪ್ಪ ಅವರು ಈ ಸಮಿತಿಯಲ್ಲಿ ಸ್ಥಾನ ಪಡೆದಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಅವರು ನೂತನ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಕೂಡಲೇ ಕಾರ್ಯಕಾರಿ ಸಮಿತಿಯ ಎಲ್ಲಾ ಸದಸ್ಯರು, ಪ್ರಧಾನ ಕಾರ್ಯದರ್ಶಿಗಳು ಮತ್ತು ಉಸ್ತುವಾರಿಗಳು ರಾಜೀನಾಮೆಯನ್ನು ಸಲ್ಲಿಸಿ ಹೊಸ ಮುಖ್ಯಸ್ಥರನ್ನು ಅವರ ತಂಡವನ್ನು ಸ್ಥಾಪಿಸಲು ಅನುವು ಮಾಡಿಕೊಟ್ಟರು.ನೂತನ ಅಧ್ಯಕ್ಷರ ಆಯ್ಕೆಯಾದ ಕೂಡಲೇ ಕಾಂಗ್ರೆಸ್‌ನ ಎಲ್ಲಾ ಪದಾಧಿಕಾರಿಗಳು ರಾಜೀನಾಮೆ ನೀಡುವ ಸಂಪ್ರದಾಯವಿದೆ.

ಎಲ್ಲಾ ಸಿಡಬ್ಲ್ಯುಸಿ ಸದಸ್ಯರು, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಮತ್ತು ಉಸ್ತುವಾರಿಗಳು ಕಾಂಗ್ರೆಸ್ ಅಧ್ಯಕ್ಷರಿಗೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಎಐಸಿಸಿ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಹೇಳಿದ್ದಾರೆ.ಖರ್ಗೆ ಅವರು ಬುಧವಾರ ಪಕ್ಷದ ಕೇಂದ್ರ ಚುನಾವಣಾ ಸಮಿತಿಯ (ಸಿಇಸಿ) ಸಭೆಯ ಅಧ್ಯಕ್ಷತೆ ವಹಿಸಿದ್ದರು ಮತ್ತು ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಗೆ ಸಂಭಾವ್ಯ ಅಭ್ಯರ್ಥಿಗಳ ಬಗ್ಗೆ ಚರ್ಚಿಸಿದರು.

ಸಭೆಯಲ್ಲಿ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಕೂಡ ಉಪಸ್ಥಿತರಿದ್ದರು.ಹೊಸ ಅಧಿಕಾರ ಸ್ವೀಕರಿಸಿದ ನಂತರ ಖರ್ಗೆ ನೇತೃತ್ವದಲ್ಲಿ ನಡೆದ ಮೊದಲ ಸಭೆ ಇದಾಗಿದೆ.ಸಭೆಯಲ್ಲಿ ಸಿಇಸಿ ಸದಸ್ಯರು ಮತ್ತು ಪ್ರಧಾನ ಕಾರ್ಯದರ್ಶಿಗಳಾದ ಮುಕುಲ್ ವಾಸ್ನಿಕ್ ಮತ್ತು ಕೆ ಸಿ ವೇಣುಗೋಪಾಲ್, ಅಂಬಿಕಾ ಸೋನಿ ಮತ್ತು ಗಿರಿಜಾ ವ್ಯಾಸ್ ಉಪಸ್ಥಿತರಿದ್ದರು. ಗುಜರಾತ್‌ನ ಎಐಸಿಸಿ ಉಸ್ತುವಾರಿ ರಘು ಶರ್ಮಾ ಮತ್ತು ರಾಜ್ಯ ಘಟಕದ ಮುಖ್ಯಸ್ಥ ಜಗದೀಶ್ ಠಾಕೂರ್ ಕೂಡ ಹಾಜರಿದ್ದರು.

ಇದನ್ನೂ ಓದಿ: ಬೆಂಗಳೂರಿನ ರಸ್ತೆಗಳಲ್ಲಿ ಓಡಾಡಿದರೆ ಮಂಗಳ ಗ್ರಹದಲ್ಲಿ ಸಂಚರಿಸಿದ ಅನುಭವ: ಕಾಂಗ್ರೆಸ್

ಮುಂಬರುವ ಗುಜರಾತ್ ಚುನಾವಣೆಗೆ ಪಕ್ಷವು ಕೆಲವು ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಸಾಧ್ಯತೆಯಿದೆ ಮತ್ತು ಒಂದು ಅಥವಾ ಎರಡು ದಿನಗಳಲ್ಲಿ ಅದನ್ನು ಘೋಷಿಸುತ್ತದೆ.ಭಾರತದ ಚುನಾವಣಾ ಆಯೋಗವು ಗುಜರಾತ್‌ನಲ್ಲಿ ವಿಧಾನಸಭಾ ಚುನಾವಣೆಯ ದಿನಾಂಕಗಳನ್ನು ಇನ್ನೂ ಪ್ರಕಟಿಸಿಲ್ಲ. ಮುಂದಿನ ದಿನಗಳಲ್ಲಿ ಅದು ನಡೆಯುವ ಸಾಧ್ಯತೆ ಇದೆ.

ಎರಡು ದಶಕಗಳಿಂದ ಕೇಸರಿ ಪಕ್ಷ ಅಧಿಕಾರದಲ್ಲಿರುವ ಪ್ರಧಾನಿ ನರೇಂದ್ರ ಮೋದಿಯವರ ತವರು ರಾಜ್ಯದಲ್ಲಿ ಬಿಜೆಪಿಯನ್ನು ಸರ್ಕಾರದಿಂದ ಕಿತ್ತೊಗೆಯಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News