ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರ, ಸ್ನಾತಕೋತ್ತರ ಪದವೀಧರರಿಗೆ ಧಾರವಾಡ ಜಿಲ್ಲಾ ಕಚೇರಿಯಲ್ಲಿ ಹಾಗೂ ಹುಬ್ಬಳ್ಳಿ ರಾಜ್ಯ ಸಮಾಚಾರ ಕೇಂದ್ರ ಕಚೇರಿಯಲ್ಲಿ 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

Written by - Zee Kannada News Desk | Last Updated : Oct 29, 2022, 07:42 PM IST
  • ಮೆರಿಟ್ ಹಾಗೂ ಲಿಖಿತ ಪರೀಕ್ಷೆ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
  • ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳಿಗೆ 35 ವರ್ಷ ಮೀರಿರಬಾರದು.
  • ತರಬೇತಿಯ ಅವಧಿ ವೇಳೆ ಮಾಹೆಯಾನ 15 ಸಾವಿರ ರೂಪಾಯಿ ಸ್ಟೈಪೆಂಡ್ ನೀಡಲಾಗುವುದು.
ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ  title=
ಸಾಂದರ್ಭಿಕ ಚಿತ್ರ

ಧಾರವಾಡ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರ, ಸ್ನಾತಕೋತ್ತರ ಪದವೀಧರರಿಗೆ ಧಾರವಾಡ ಜಿಲ್ಲಾ ಕಚೇರಿಯಲ್ಲಿ ಹಾಗೂ ಹುಬ್ಬಳ್ಳಿ ರಾಜ್ಯ ಸಮಾಚಾರ ಕೇಂದ್ರ ಕಚೇರಿಯಲ್ಲಿ 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕದಲ್ಲಿ ಕಾನೂನಾತ್ಮಕವಾಗಿ ಸ್ಥಾಪಿತಗೊಂಡ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತ್ತಕೋತ್ತರ ಪದವಿ ಪೂರ್ಣಗೊಳಿಸಿರುವ ಹಾಗೂ ಕಂಪ್ಯೂಟರ್ ಜ್ಞಾನವಿರುವ ಕನ್ನಡ ಭಾಷೆ ಬಳಸಲು ಪ್ರಬುದ್ಧತೆ ಇರುವ ಅಭ್ಯರ್ಥಿಗಳು ಮಾತ್ರ ಅರ್ಜಿ ನಲ್ಲಿಸುವುದು.

ಇದನ್ನೂ ಓದಿ: ಅಪ್ಪು ಮುಡಿಗೆ ʼಕರ್ನಾಟಕ ರತ್ನʼ : ಗೆಳೆಯನ ಕಾರ್ಯಕ್ರಮದಲ್ಲಿ ಎನ್‌ಟಿಆರ್‌ ಭಾಗಿ..!

ಮೆರಿಟ್ ಹಾಗೂ ಲಿಖಿತ ಪರೀಕ್ಷೆ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳಿಗೆ 35 ವರ್ಷ ಮೀರಿರಬಾರದು. ತರಬೇತಿಯ ಅವಧಿ ವೇಳೆ ಮಾಹೆಯಾನ 15 ಸಾವಿರ ರೂಪಾಯಿ ಸ್ಟೈಪೆಂಡ್ ನೀಡಲಾಗುವುದು. ಒಮ್ಮೆ ಫಲಾನುಭವಿಯಾದವರನ್ನು ಈ ಯೋಜನೆಯಡಿ ಮತ್ತೊಂದು ಅವಧಿಗೆ ಆಯ್ಕೆ ಮಾಡಲು ಅವಕಾಶವಿರುವುದಿಲ್ಲ.

ಇದನ್ನೂ ಓದಿ:  ಬಿಜೆಪಿ ಸರ್ಕಾರದ ಬಂದ್ಮೇಲೆ ದ್ವೇಷ ಹೆಚ್ಚಿದೆ, RSS ಕಾನೂನು ಕೈಗೆತ್ತಿಕೊಂಡಿದೆ

ಅರ್ಜಿ ಸಲ್ಲಿಸಲು ನವೆಂಬರ್ 18, 2022 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಹಿರಿಯ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಡಿ.ಸಿ.ಕಂಪೌಂಡ, ಧಾರವಾಡ ಅಥವಾ ಮೊಬೈಲ್ ಸಂಖ್ಯೆ-9632511437 ಸಂಪರ್ಕಿಸಬಹುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ಮಂಜುನಾಥ ಸುಳ್ಳೊಳ್ಳಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News