NRI News: ಇತ್ತೀಚಿನ ದಿನಗಳಲ್ಲಿ ವೈದ್ಯಕೀಯ ಕ್ಷೇತ್ರ ಭಾರತದಲ್ಲಿ ಭಾರೀ ಬೆಳವಣಿಗೆ ಕಾಣುತ್ತಿದೆ. ಆದರೆ ಕೆಲವೊಂದು ಮಾರಕ ಖಾಯಿಲೆಗೆ ಚಿಕಿತ್ಸೆ ಪಡೆಯಬೇಕೆಂದರೆ ವಿದೇಶಗಳ ಮೊರೆ ಹೋಗಬೇಕು. ಅಂತೆಯೇ ಇಲ್ಲೊಬ್ಬ ಮಹಿಳೆ ತನಗೆ ತಗುಲುದ ಕ್ಯಾನ್ಸರ್ ಮಾರಕ ಕಾಯಿಲೆಗೆ ವಿದೇಶದಲ್ಲಿ ಚಿಕಿತ್ಸೆ ಕೊಡಿಸಿ ಎಂದು ತನ್ನ ಪತಿಯ ಬಳಿ ಮನವಿ ಮಾಡಿಕೊಂಡಿದ್ದಾಳೆ. ಆದರೆ ಮನವಿ ಮಾಡಿಕೊಂಡ ಮಹಿಳೆಗೆ ಚಿಕಿತ್ಸೆ ನೀಡುವುದರ ಬದಲು ಆಕೆಯನ್ನು ಕೊಂದು ಹಾಕಿದ್ದಾನೆ ಪಾಪಿ ಪತಿ.
ಗುಜರಾತ್ ರಾಜ್ಯದ ಅಹಮದಾಬಾದ್ ನಲ್ಲಿ ಈ ದುಷ್ಕೃತ್ಯ ನಡೆದಿದೆ. ಕ್ಯಾನ್ಸರ್‌ನಿಂದ ಬಳಲುತ್ತಿರುವ ಪತ್ನಿಗೆ ವಿದೇಶದಲ್ಲಿ ಚಿಕಿತ್ಸೆ ಕೊಡಿಸುವಂತೆ ಹೇಳಿದ್ದಕ್ಕೆ ಎನ್‌ಆರ್‌ಐ ಪತಿ ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಪತ್ನಿಗೆ ಚಾಕುವಿನಿಂದ ಇರಿದು ಬಳಿಕ ಈತ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಕಿರಣ್ ಭಾವು (72) ಪತ್ನಿಯನ್ನು ಕೊಲೆಗೈದು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಉಷಾ ಭಾವು (69) ಮೃತ ಮಹಿಳೆ. ದಂಪತಿಗಳು ಸುಮಾರು 30 ವರ್ಷಗಳ ಕಾಲ ಕ್ಯಾಲಿಫೋರ್ನಿಯಾದ ಫ್ರೀಮಾಂಟ್‌ನಲ್ಲಿ ವಾಸಿಸುತ್ತಿದ್ದರು. ಇತ್ತೀಚೆಗೆಯಷ್ಟೇ ಭಾರತಕ್ಕೆ ಆಗಮಿಸಿದ್ದರು. ಈ ಬಳಿಕ ಅಹಮದಾಬಾದ್‌ನ ಪ್ರಹ್ಲಾದ್‌ನಗರದ ಮನೆಯೊಂದರಲ್ಲಿ ತಂಗಿದ್ದರು. ನಾಲ್ಕು ತಿಂಗಳ ಹಿಂದೆ ಅವರು ಮಕರ್ಬಾದಲ್ಲಿರುವ ಆರ್ಕಿಡ್ ಎಕ್ಸೋಟಿಕಾ ಅಪಾರ್ಟ್ಮೆಂಟ್ ಸಂಕೀರ್ಣಕ್ಕೆ ಶಿಫ್ಟ್ ಆಗಿದ್ದಾರೆ. ಈ ಸಂದರ್ಭದಲ್ಲಿ ಉಷಾ ಅವರಿಗೆ ಗರ್ಭಾಶಯದ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ. ಹೀಗಾಗಿ ಚಿಕಿತ್ಸೆಗಾಗಿ ಅಮೆರಿಕಕ್ಕೆ ಹಿಂತಿರುಗಲು ತನ್ನ ಪತಿಗೆ ಹಲವಾರು ಬಾರಿ ಮನವಿ ಮಾಡಿದ್ದರೂ ಸಹ ಅದನ್ನು ಕಿರಣ್ ನಿರಾಕರಿಸಿದ್ದನು.
ಈ ವಿಚಾರವಾಗಿ ದಂಪತಿ ನಡುವೆ ಕೆಲ ದಿನಗಳಿಂದ ಜಗಳ ನಡೆಯುತ್ತಿತ್ತು. ಈ ಕ್ರಮದಲ್ಲಿ ಬುಧವಾರ ರಾತ್ರಿ ಮತ್ತೊಮ್ಮೆ ಚಿಕಿತ್ಸೆ ವಿಚಾರವಾಗಿ ಇಬ್ಬರ ನಡುವೆ ಗಲಾಟೆ ನಡೆದಿದೆ. ಇದರಿಂದ ಕುಪಿತಗೊಂಡ ಕಿರಣ್ ತನ್ನ ಪತ್ನಿ ಉಷಾಳನ್ನು ಚಾಕುವಿನಿಂದ ಹಲವು ಬಾರಿ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಬಳಿಕ ಗುರುವಾರ ಬೆಳಗ್ಗೆ ಉಷಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಸಂಬಂಧಿಕರಿಗೆ ಸಂದೇಶ ಕಳುಹಿಸಿದ್ದ. ಆ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಇದನ್ನೂ ಓದಿ: NRIಗಳಿಗೆ ಗುಡ್ ನ್ಯೂಸ್: ಯುಪಿಐ ಸೇವೆಯು ಈ 10 ದೇಶಗಳಲ್ಲಿ ಶೀಘ್ರದಲ್ಲೇ ಲಭ್ಯ
ಸಂಬಂಧಿಕರ ಮಾಹಿತಿ ಮೇರೆಗೆ ಸ್ಥಳಕ್ಕಾಗಮಿಸಿದ ಪೊಲೀಸರು ಚಿಂತಾಜನಕ ಸ್ಥಿತಿಯಲ್ಲಿದ್ದ ಕಿರಣ್ ನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಉಷಾ ಅವರ ಸಹೋದರ ಮಧುಸೂದನ್ ನೀಡಿದ ದೂರಿನಂತೆ ಸರ್ಖೇಜ್ ಠಾಣೆ ಪೊಲೀಸರು ಕಿರಣ್ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.