6 Sixes in One Over: ಒಂದೇ ಓವರ್‌ನಲ್ಲಿ 6 ಸಿಕ್ಸ್ ಸಿಡಿಸಿದ ಐವರು ಆಟಗಾರರು ಇವರೇ ನೋಡಿ

6 Sixes in One Over: 2007ರ ಸೆಪ್ಟೆಂಬರ್ 19ರಂದು ಇಂಗ್ಲೆಂಡ್ ವಿರುದ್ಧದ T20 ವಿಶ್ವಕಪ್ ಪಂದ್ಯದಲ್ಲಿ ವೇಗಿ ಸ್ಟುವರ್ಟ್ ಬ್ರಾಡ್ ಓವರ್‌ನಲ್ಲಿ ಭಾರತದ ಯುವರಾಜ್ ಸಿಂಗ್ ಒಂದೇ ಓವರ್‌ನಲ್ಲಿ 6 ಸಿಕ್ಸರ್ ಬಾರಿಸಿದ್ದರು.

6 Sixes in One Over: ನೇಪಾಳದ ಆಟಗಾರ ದಿಪೇಂದ್ರ ಸಿಂಗ್ ಐರಿ ಒಂದೇ ಓವರ್‌ನಲ್ಲಿ 6 ಸಿಕ್ಸರ್ ಸಿಡಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ. ACC ಪುರುಷರ ಪ್ರೀಮಿಯರ್ ಕಪ್ T20 ಅಂತಾರಾಷ್ಟ್ರೀಯ ಪಂದ್ಯದ ವೇಳೆ ಕತಾರ್ ವಿರುದ್ಧ ಒಂದೇ ಓವರ್‌ನಲ್ಲಿ 6 ಸಿಕ್ಸರ್ ಸಿಡಿಸುವ ಮೂಲಕ ಈ ಸಾಧನೆ ಮಾಡಿದ್ದಾರೆ. ಮೊಟ್ಟ ಮೊದಲ ಬಾರಿಗೆ ದಕ್ಷಿಣ ಆಫ್ರಿಕಾದ ಆಟಗಾರ ಹರ್ಷಲ್ ಗಿಬ್ಸ್ ಈ ಸಾಧನೆ ಮಾಡಿದ್ದರು. ಇದುವರೆಗೆ ಒಟ್ಟು ಐವರು ಆಟಗಾರರು ಈ ದಾಖಲೆ ನಿರ್ಮಿಸಿದಂತಾಗಿದೆ. ದಿಪೇಂದ್ರ ಸಿಂಗ್ T20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಈ ಸಾಧನೆ ಮಾಡಿದ ವಿಶ್ವದ 3ನೇ ಆಟಗಾರನೆಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

1 /5

ಒಮಾನ್‌ನ AI ಅಮರತ್ ಕ್ರಿಕೆಟ್ ಮೈದಾನದಲ್ಲಿ ನಡೆದ ACC ಪುರುಷರ ಪ್ರೀಮಿಯರ್ ಕಪ್‌ನ 7ನೇ ಪಂದ್ಯದಲ್ಲಿ ಖತಾರ್ v/s ನೇಪಾಳ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಕ್ರಮಾನ್ ಖಾನ್ ಎಸೆದ 20ನೇ ಓವರ್‌ನಲ್ಲಿ​ ನೇಪಾಳ ಆಟಗಾರ ದೀಪೇಂದ್ರ ಸಿಂಗ್ ಐರಿ ಬ್ಯಾಕ್ ಟು ಬ್ಯಾಕ್ ಸಿಕ್ಸ್ ಸಿಡಿಸಿದರು. ಈ ಮೂಲಕ 6 ಎಸೆತಗಳಲ್ಲಿ 6 ಸಿಕ್ಸ್ ಬಾರಿಸಿದ ವಿಶೇಷ ಸಾಧನೆ ಮಾಡಿದರು. T20 6ಕ್ಕೆ 6 ಸಿಕ್ಸರ್‌ ಸಿಡಿಸಿದ 3ನೇ ಆಟಗಾರನೆಂಬ ಹೆಗ್ಗಳಿಕೆಗೆ ಪಾತ್ರರಾದರು.    

2 /5

ಒಂದೇ ಓವರ್‌ನಲ್ಲಿ 5 ಸಿಕ್ಸರ್‌ ಸಿಡಿಸಿದ ಮೊದಲ ದಾಖಲೆ ಮಾಡಿದ್ದು, ದಕ್ಷಿಣ ಆಫ್ರಿಕಾದ ಆಟಗಾರ ಹರ್ಷಲ್ ಗಿಬ್ಸ್. 2007ರ ಮಾರ್ಚ್‌ 16ರಂದು ನೆದರ್ಲೆಂಡ್ಸ್ ವಿರುದ್ಧದ ಏಕದಿನ ಪಂದ್ಯದಲ್ಲಿ ಡಾನ್ ವ್ಯಾನ್ ಬಂಗೆ ಓವರ್‌ನಲ್ಲಿ ಹರ್ಷಲ್ ಗಿಬ್ಸ್ ಒಂದೇ ಓವರ್‌ನಲ್ಲಿ 6 ಸಿಕ್ಸ್ ಬಾರಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು.

3 /5

2007ರ ಸೆಪ್ಟೆಂಬರ್ 19ರಂದು ಇಂಗ್ಲೆಂಡ್ ವಿರುದ್ಧದ T20 ವಿಶ್ವಕಪ್ ಪಂದ್ಯದಲ್ಲಿ ವೇಗಿ ಸ್ಟುವರ್ಟ್ ಬ್ರಾಡ್ ಓವರ್‌ನಲ್ಲಿ ಭಾರತದ ಯುವರಾಜ್ ಸಿಂಗ್ ಒಂದೇ ಓವರ್‌ನಲ್ಲಿ 6 ಸಿಕ್ಸರ್ ಬಾರಿಸಿದ್ದರು.

4 /5

2021ರಲ್ಲಿ ಶ್ರೀಲಂಕಾದ ಸ್ಪಿನ್ನರ್ ಅಕಿಲ ಧನಂಜಯ್ ಓವರ್‌ನಲ್ಲಿ ವೆಸ್ಟ್ ಇಂಡೀಸ್‌ನ ಆಟಗಾರ ಕೀರನ್ ಪೊಲಾರ್ಡ್ 6 ಸಿಕ್ಸ್ ಬಾರಿಸಿ ದಾಖಲೆ ನಿರ್ಮಿಸಿದ್ದರು. ಯುವರಾಜ್ ಸಿಂಗ್ ನಂತರ T20 ಕ್ರಿಕೆಟ್‌ನಲ್ಲಿ 6 ಸಿಕ್ಸರ್ ಸಿಡಿಸಿದ 2ನೇ ಆಟಗಾರನೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

5 /5

2021ರಲ್ಲಿ ಪಪುವಾ ನ್ಯೂಗಿನಿಯಾ ತಂಡದ ಬೌಲರ್ ಗೌಡಿ ಟೋಕಾರ ಓವರ್‌ನಲ್ಲಿ ಅಮೆರಿಕದ ಜಸ್ಕರನ್ ಮಲ್ಹೋತ್ರಾ 6 ಸಿಕ್ಸ್ ಸಿಡಿಸಿದ್ದರು. ಈ ಮೂಲಕ ಏಕದಿನದಲ್ಲಿ ಗಿಬ್ಸ್ ನಂತರ ಈ ಸಾಧನೆ ಮಾಡಿದ 2ನೇ ಆಟಗಾರನೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.