ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್
019 ರಲ್ಲಿ ರಿಲೀಸ್ ಆದ ಸಿನಿಮಾಗಳಿಗೆ ಕರ್ನಾಟಕ ರಾಜ್ಯ ಸರ್ಕಾರ ಸಿನಿಮಾ ಪ್ರಶಸ್ತಿ ಘೋಷಣೆ ಮಾಡಿದೆ. ಈ ಪೈಕಿ 2019ರ ಅತ್ಯುತ್ತಮ ನಟ ಪ್ರಶಸ್ತಿ ಕಿಚ್ಚ ಸುದೀಪ್ ಅವರಿಗೆ ದೊರೆತಿದೆ. ಆದರೆ ಸುದೀಪ್ ಅವರು ಈ ಪ್ರಶಸ್ತಿಯನ್ನು ಸ್ವೀಕರಿಸಲು ಸಿದ್ಧರಿಲ್ಲ ಯಾಕೆ?
ಕಿಚ್ಚ ಸುದೀಪ್ ಅವರಿಗೆ ‘ಪೈಲ್ವಾನ್’ ಸಿನಿಮಾದಲ್ಲಿನ ಅಭಿನಯಕ್ಕಾಗಿ ‘ಅತ್ಯುತ್ತಮ ನಟ’ ರಾಜ್ಯ ಪ್ರಶಸ್ತಿ ಘೋಷಿಸಲಾಗಿದೆ. ಆದರೆ ಸುದೀಪ್ ಅವರು ಈ ಪ್ರಶಸ್ತಿಯನ್ನು ಸ್ವೀಕರಿಸಲು ಸಿದ್ಧರಿಲ್ಲ. ಯಾಕೆ ಎಂಬ ಕಾರಣವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಉಲ್ಲೇಖಿಸಿದ್ದಾರೆ.
2ಪೈಲ್ವಾನ್’ ಚಿತ್ರದ ಅಭಿನಯಕ್ಕಾಗಿ ಸುದೀಪ್ ಅವರಿಗೆ ಜನವರಿ 22 ರಾಜ್ಯ ಸರ್ಕಾರವು ಅತ್ಯುತ್ತಮ ನಟ ಪ್ರಶಸ್ತಿಯನ್ನು ಘೋಷಿಸಿತ್ತು. ಈ ವಿಷಯವಾಗಿ ಅಭಿಮಾನಿಗಳಲ್ಲಿ ಸಂಭ್ರಮ ಮನೆಮಾಡಿರುವಾಗಲೇ, ಸುದೀಪ್ ಈ ಪ್ರಶಸ್ತಿಯನ್ನು ತಿರಸ್ಕರಿಸಿದ್ದಾರೆ. ಪ್ರಶಸ್ತಿಗೆ ತಮ್ಮನ್ನು ಪರಿಗಣಿಸಿರುವುದಕ್ಕೆ ಧನ್ಯವಾದಗಳನ್ನು ಸೂಚಿಸುತ್ತಲೇ, ಚಿತ್ರರಂಗದಲ್ಲಿ ಸಾಕಷ್ಟು ಅರ್ಹರು ಇರುವುದರಿಂದ ಅವರಿಗೆ ಕೊಡಬೇಕೆಂದು ಹೇಳಿದ್ದಾರೆ.
ಈ ಕುರಿತು ತಮ್ಮ ‘ಎಕ್ಸ್’ ಖಾತೆಯಲ್ಲಿ ಬರೆದುಕೊಂಡಿರುವ ಸುದೀಪ್, ‘ಅತ್ಯುತ್ತಮ ನಟ ವಿಭಾಗದಲ್ಲಿ ರಾಜ್ಯ ಪ್ರಶಸ್ತಿಯನ್ನು ಪಡೆದಿರುವುದು ನಿಜಕ್ಕೂ ಒಂದು ಸೌಭಾಗ್ಯ ಮತ್ತು ಈ ಗೌರವಕ್ಕಾಗಿ ಗೌರವಾನ್ವಿತ ತೀರ್ಪುಗಾರರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು. ಆದಾಗ್ಯೂ, ನಾನು ಹಲವಾರು ವರ್ಷಗಳಿಂದ ಪ್ರಶಸ್ತಿಗಳನ್ನು ಸ್ವೀಕರಿಸುವುದನ್ನು ನಿಲ್ಲಿಸಲು ನಾನು ನಿರ್ಧರಿಸಿದ್ದೇನೆ. ಅದಕ್ಕೆ ವಿವಿಧ ವೈಯಕ್ತಿಕ ಕಾರಣಗಳಿವೆ.’"ಯಾವುದೇ ಪ್ರಶಸ್ತಿಯ ಆಸೆ ಇಲ್ಲದೆ, ಪ್ರೇಕ್ಷಕರನ್ನು ಮನರಂಜಿಸುವುದಕ್ಕೆ ಬದ್ಧನಾಗಿರುತ್ತೇನೆ ಎಂದು ಹೇಳಿಕೊಂಡಿರುವ ಅವರು, ‘ಆಯ್ಕೆ ಸಮಿತಿ ಈ ಪ್ರಶಸ್ತಿಗೆ ನನ್ನನ್ನು ಪರಿಗಣಿಸಿದ್ದು ಇನ್ನಷ್ಟು ಉತ್ತಮ ಕೆಲಸ ಮಾಡುವುದಕ್ಕೆ ಸ್ಫೂರ್ತಿ ತುಂಬಿದೆ" ಎಂದು ಬರೆದುಕೊಂಡಿದ್ದಾರೆ.