11 ಸಿಕ್ಸ್‌, 8 ಫೋರ್‌.. T20 ಕ್ರಿಕೆಟ್‌ ​​ನಲ್ಲಿ ಶರ ವೇಗದ ಸೆಂಚುರಿ ಸಿಡಿಸಿ ದಾಖಲೆ ಬರೆದ 24 ವರ್ಷದ ಟೀಮ್‌ ಇಂಡಿಯಾ ಯುವ ಆಟಗಾರ!

ಟಿ 20 ಪಂದ್ಯದಲ್ಲಿ ಶರ ವೇಗದ ಸೆಂಚುರಿ ಸಿಡಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆ ಬರೆದರು. 
 

1 /6

T20 ಕ್ರಿಕೆಟ್ ಇತಿಹಾಸದಲ್ಲೇ ಅತೀ ವೇಗದ ಶತಕ ಸಿಡಿಸುವ ಮೂಲಕ ಭಾರತೀಯ ಬ್ಯಾಟರ್‌ಗಳ ಪಟ್ಟಿಯಲ್ಲಿ ಅಭಿಷೇಕ್ ಶರ್ಮಾ ಅಗ್ರಸ್ಥಾನಕ್ಕೇರಿದ್ದಾರೆ. ಕೇವಲ 28 ಎಸೆತಗಳಲ್ಲಿ ಸೆಂಚುರಿ ಸಿಡಿಸಿ ದಾಖಲೆ ಬರೆದಿದ್ದಾರೆ. 

2 /6

ಇತ್ತೀಚೆಗಷ್ಟೇ ತ್ರಿಪುರಾ ವಿರುದ್ಧದ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಗುಜರಾತ್ ತಂಡದ ವಿಕೆಟ್ ಕೀಪರ್ ಮತ್ತು ಬ್ಯಾಟ್ಸ್ ಮನ್ ಉರ್ವಿಲ್ ಪಟೇಲ್ 28 ಎಸೆತಗಳಲ್ಲಿ ಶತಕ ಸಿಡಿಸುವ ಮೂಲಕ ಎಲ್ಲ ದಾಖಲೆಗಳನ್ನು ಮುರಿದಿದ್ದಾರೆ. ಟಿ20ಯಲ್ಲಿ ಅತಿ ವೇಗದ ಶತಕ ಬಾರಿಸಿದ ಭಾರತದ ಬ್ಯಾಟ್ಸ್‌ಮನ್ ಎನಿಸಿಕೊಂಡರು. 

3 /6

ಇದೀಗ ಒಂದೇ ವಾರದೊಳಗೆ ಅಭಿಷೇಕ್ ಶರ್ಮಾ ಈ ದಾಖಲೆಯನ್ನು ಸರಿಗಟ್ಟಿದ್ದಾರೆ. ಪಂಜಾಬ್ ತಂಡದ ನಾಯಕ ಅಭಿಷೇಕ್ ಶರ್ಮಾ ರಾಜ್‌ಕೋಟ್‌ನಲ್ಲಿ ನಡೆದ ಮೇಘಾಲಯ ವಿರುದ್ಧದ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದರು.

4 /6

ಅಭಿಷೇಕ್ ಶರ್ಮಾ ಕೇವಲ 28 ಎಸೆತಗಳಲ್ಲಿ ಶತಕ ಬಾರಿಸಿದರು. ಈ ಮೂಲಕ ಟಿ20 ಪಂದ್ಯದಲ್ಲಿ ಶರ ವೇಗದ ಸೆಂಚುರಿ ಸಿಡಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆ ಬರೆದರು. ಅತೀ ಕಡಿಮೆ ಎಸೆತಗಳಲ್ಲಿ ಶತಕ ಬಾರಿಸಿದ ವಿಶ್ವದ 3ನೇ ಬ್ಯಾಟರ್ ಎಂಬ ವಿಶ್ವ ದಾಖಲೆ ಕೂಡ ನಿರ್ಮಿಸಿದರು. 

5 /6

24 ವರ್ಷದ ಅಭಿಷೇಕ್ ಶರ್ಮಾ ಇದುವರೆಗೆ ಭಾರತ ಕ್ರಿಕೆಟ್ ತಂಡಕ್ಕಾಗಿ 12 ಟಿ20 ಪಂದ್ಯಗಳನ್ನು ಆಡಿದ್ದಾರೆ. ಇದರಲ್ಲಿ ಅವರು 171 ಸ್ಟ್ರೈಕ್ ರೇಟ್‌ನಲ್ಲಿ 256 ರನ್ ಗಳಿಸಿದ್ದಾರೆ. 

6 /6

ಅಂತಾರಾಷ್ಟ್ರೀಯ ಟಿ20ಯಲ್ಲಿ ಒಂದು ಶತಕ ಮತ್ತು ಒಂದು ಅರ್ಧಶತಕವನ್ನು ಸಿಡಿಸಿದ್ದಾರೆ. ಇದಲ್ಲದೇ ಅಭಿಷೇಕ್ ಐಪಿಎಲ್ ನಲ್ಲಿ 155.7 ಸ್ಟ್ರೈಕ್ ರೇಟ್ ನಲ್ಲಿ 1377 ರನ್ ಗಳಿಸಿದ್ದಾರೆ. ಐಪಿಎಲ್‌ನಲ್ಲಿ 7 ಅರ್ಧ ಶತಕಗಳನ್ನು ಬಾರಿಸಿದ್ದಾರೆ.