Actor Darshan: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜಾಮೀನು ಪಡೆದ ನಂತರ ನಟ ದರ್ಶನ್ ಮೈಸೂರಿನ ತಮ್ಮ ಫಾರ್ಮ್‌ಹೌಸ್‌ನಲ್ಲಿ ಕುಟುಂಬದೊಂದಿಗೆ ಸಂಕ್ರಾಂತಿಯನ್ನು ಆಚರಿಸಿದರು. ಇದಕ್ಕೆ ಸಂಬಂಧಿಸಿದ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಈ ಫೋಟೋಗಳಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಹಾಗೂ ಮಗ ವಿನೀಶ್ ಇದ್ದಾರೆ..
ಕನ್ನಡದ ಸ್ಟಾರ್ ಹೀರೋ ದರ್ಶನ್ ತೂಗುದೀಪ ಕಳೆದ ಆರು ತಿಂಗಳಲ್ಲಿ ಹಲವು ಕಠಿಣ ಸನ್ನಿವೇಶಗಳನ್ನು ಎದುರಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಸಾಕಷ್ಟು ನೊಂದಿದ್ದರು. ಇದೀಗ ಈ ಪ್ರಕರಣದಲ್ಲಿ ದರ್ಶನ್ ಜಾಮೀನಿನ ಮೇಲೆ ಹೊರಗಿದ್ದಾರೆ.
ದರ್ಶನ್ ಮೈಸೂರಿನ ತಮ್ಮ ಫಾರ್ಮ್‌ಹೌಸ್‌ನಲ್ಲಿ ಸಂಕ್ರಾಂತಿಯನ್ನು ಆಚರಿಸಿಕೊಂಡರು. ಅವರ ಕುಟುಂಬ ಸದಸ್ಯರು ಕೂಡ ಸಮಾರಂಭದಲ್ಲಿ ಭಾಗಿಯಾಗಿದ್ದರು. ಇದಕ್ಕೆ ಸಂಬಂಧಿಸಿದ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಈ ಫೋಟೋಗಳಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮತ್ತು ಮಗ ವಿನೀಶ್ ಜೊತೆ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳು ದರ್ಶನ್ ಅಭಿಮಾನಿಗಳಿಗೆ ತುಂಬಾ ಇಷ್ಟವಾಗಿದೆ. ಹ್ಯಾಪಿ ಫ್ಯಾಮಿಲಿ ಎಂದು ಹಲವರು ಕಮೆಂಟ್ ಮಾಡುತ್ತಿದ್ದಾರೆ.
ಈ ಫೋಟೋಗಳಲ್ಲಿ ದರ್ಶನ್ ಸಹೋದರ ದಿನಕರ್ ಕೂಡ ಕಾಣಿಸಿಕೊಂಡಿದ್ದಾರೆ. ಕುಟುಂಬ ಸದಸ್ಯರೆಲ್ಲರನ್ನು ಒಂದೇ ಚೌಕಟ್ಟಿನಲ್ಲಿ ನೋಡಿ ಅಭಿಮಾನಿಗಳು ಫುಲ್ ಹ್ಯಾಫಿ ಆಗಿದ್ದಾರೆ..
ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ಹಲವು ದಿನ ಜೈಲಿನಲ್ಲೇ ಇದ್ದರು. ಆದರೆ ಕಳೆದ ವರ್ಷ ಡಿಸೆಂಬರ್ 13 ರಂದು ನಟನಿಗೆ ಜಾಮೀನು ನೀಡಲಾಯಿತು.