ಮೊಸರು ಬಜ್ಜಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. .
ಬೆಂಗಳೂರು : ಮಧುಮೇಹದಲ್ಲಿ ಆಹಾರದ ಜೊತೆಗೆ ರಕ್ತದಲ್ಲಿನ ಸಕ್ಕರೆಯ ಬಗ್ಗೆ ವಿಶೇಷ ಕಾಳಜಿ ವಹಿಸಬೇಕಾಗುತ್ತದೆ. ಮಧುಮೇಹದಲ್ಲಿ, ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿಡುವ ಆಹಾರವನ್ನು ಸೇವಿಸಬೇಕಾಗುತ್ತದೆ. ಈ ಲೇಖನದಲ್ಲಿ, ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳಲು ಏನು ಮಾಡಬೇಕು ಎನ್ನುವುದರ ಮಾಹಿತಿ ನೀಡುತ್ತಿದ್ದೇವೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಸಾಮಾನ್ಯವಾಗಿ ಮಧುಮೇಹದಿಂದ ಬಳಲುತ್ತಿರುವ ಜನರು ತಮ್ಮ ಆಹಾರ ಮತ್ತು ಪಾನೀಯಡ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕಾಗುತ್ತದೆ. ಆದರೆ ಆಹಾರವನ್ನು ಸೇವಿಸುವಾಗ ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಾಗದಂತೆ ಏನನ್ನು ತಿನ್ನಬೇಕು ಎನ್ನುವುದರ ಬಗ್ಗೆ ಕಾಳಜಿ ವಹಿಸಬೇಕಾಗುತ್ತದೆ. ಮಧುಮೇಹ ರೋಗಿಗಳು ಊಟದ ಸಮಯದಲ್ಲಿ ಮೊಸರು ಬಜ್ಜಿ ಸೇವಿಸಬಹುದು.
ಮಧುಮೇಹ ರೋಗಿಗಳು ಮೊಸರುಬಜ್ಜಿಯಲ್ಲಿ ಮೆಂತ್ಯೆ ಸೊಪ್ಪು ಬಳಸಿದರೆ ಪ್ರಯೋಜನಕಾರಿಯಾಗಲಿದೆ. ಮೆಂತ್ಯ ಸೊಪ್ಪುಗಳ ಬಳಕೆಯು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ.
ಪೊಟ್ಯಾಸಿಯಮ್, ಕ್ಯಾಲ್ಸಿಯಂ, ಕಬ್ಬಿಣ, ಮ್ಯಾಂಗನೀಸ್, ವಿಟಮಿನ್ ಎ, ವಿಟಮಿನ್ ಬಿ 6, ವಿಟಮಿನ್ ಸಿ, ವಿಟಮಿನ್ ಕೆ, ಫೋಲಿಕ್ ಆಮ್ಲ, ರೈಬೋಫ್ಲಿನ್ ಮತ್ತು ತಾಮ್ರದಂತಹ ಅನೇಕ ಪೋಷಕಾಂಶಗಳು ಮೆಂತ್ಯ ಸೊಪ್ಪಿನಲ್ಲಿ ಕಂಡುಬರುತ್ತವೆ. ಅಷ್ಟೇ ಅಲ್ಲ, ಇದರ ಎಲೆಗಳ ಸೇವನೆಯು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಮೆಂತ್ಯೆ ಸೊಪ್ಪಿನಲ್ಲಿ ಕರಗುವ ಫೈಬರ್ ಹೇರಳವಾಗಿರುತ್ತದೆ. ಇದರಿಂದಾಗಿ ಕಾರ್ಬೋಹೈಡ್ರೇಟ್ಗಳ ಹೀರಿಕೊಳ್ಳುವಿಕೆಯು ನಿಧಾನಗೊಳ್ಳುತ್ತದೆ, ಜೀರ್ಣಕ್ರಿಯೆಯು ನಿಧಾನವಾಗಿರುತ್ತದೆ.
ಮೆಂತ್ಯದ ನೀರು ಮಧುಮೇಹಿಗಳಿಗೆ ತುಂಬಾ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಇದು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುವ ಕೆಲಸ ಮಾಡುತ್ತದೆ. ಮೆಂತ್ಯೆ ಬೀಜವನ್ನು ರಾತ್ರಿಯಿಡೀ ಒಂದು ಲೋಟ ಬೆಚ್ಚಗಿನ ನೀರಿನಲ್ಲಿ ನೆನೆಸಿ ಆ ನೀರನ್ನು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಫಿಲ್ಟರ್ ಮಾಡಿ ಕುಡಿಯಿರಿ. ಮೆಂತ್ಯವನ್ನು ನೀರಿನಲ್ಲಿ ಕುದಿಸಿ ತಣ್ಣಗಾದ ನಂತರ ಕುಡಿಯಬಹುದು.