ಎಳನೀರಿಗೆ ಈ ಬೀಜ ಸೇರಿಸಿ ಕುಡಿಯಿರಿ… ಕರಗಿಸಲು ಕಠಿಣವೆನಿಸುವ ಸೊಂಟದ ಹಠಮಾರಿ ಬೊಜ್ಜು ಸುಲಭವಾಗಿ ಕರಗುತ್ತೆ

Coconut Water and Sabja seeds for weight Loss: ಇಂದಿನ ಬಿಡುವಿಲ್ಲದ ಜೀವನ ಮತ್ತು ಅನಿಯಮಿತ ಜೀವನಶೈಲಿಯಿಂದಾಗಿ ಬೊಜ್ಜು ಸಾಮಾನ್ಯ ಸಮಸ್ಯೆಯಾಗಿ ಪ್ರತಿಯೊಬ್ಬರನ್ನು ಕಾಡುತ್ತದೆ. ಕಚೇರಿಯಲ್ಲಿ ಗಂಟೆಗಟ್ಟಲೆ ಕುಳಿತುಕೊಳ್ಳುವುದು, ದೈಹಿಕ ಚಟುವಟಿಕೆಯ ಕೊರತೆ ಕೂಡ ತೂಕ ಹೆಚ್ಚಾಗಲು ಕಾರಣವಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /7

ಅನೇಕ ಪಾನೀಯಗಳು ಮತ್ತು ಆಹಾರಗಳು ತೂಕ ನಷ್ಟಕ್ಕೆ ಪರಿಣಾಮಕಾರಿ. ತೂಕ ಇಳಿಸಿಕೊಳ್ಳಲು ಆರೋಗ್ಯಕರ ಅಭ್ಯಾಸಗಳನ್ನು ಮಾಡಬೇಕು. ವಿಶೇಷವಾಗಿ ಬೆಳಿಗ್ಗೆ ಯಾವ ರೀತಿಯ ದಿನಚರಿಯನ್ನು ಅನುಸರಿಸುತ್ತೀರಿ ಎಂಬುದು ತೂಕದ ಮೇಲೆ ಪರಿಣಾಮ ಬೀರುತ್ತದೆ.

2 /7

ಒಂದು ವೇಳೆ ತೂಕ ಇಳಿಸಿಕೊಳ್ಳಲು ಬಯಸಿದರೆ, ಎಳನೀರಿನಲ್ಲಿ ಸಬ್ಜಾ ಬೀಜ ಸೇರಿಸಿ ಕುಡಿಯುವುದು ಉತ್ತಮ. ಇದು ತೂಕವನ್ನು ವೇಗವಾಗಿ ಇಳಿಸಲು ಸಹಾಯ ಮಾಡುತ್ತದೆ.

3 /7

ತಜ್ಞರ ಪ್ರಕಾರ, ತೆಂಗಿನ ನೀರು ತೂಕ ನಷ್ಟಕ್ಕೆ ಪರಿಣಾಮಕಾರಿಯಾಗಿದೆ. ಸಬ್ಜಾ ಬೀಜ ಬೆರೆಸಿ ಕುಡಿದರೆ ತೂಕ ಬೇಗ ಕಡಿಮೆಯಾಗುತ್ತದೆ. ಅಷ್ಟೇ ಅಲ್ಲದೆ, ಇದು ದೇಹಕ್ಕೆ ಅನೇಕ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ.

4 /7

ಸಬ್ಜಾ ಬೀಜಗಳಲ್ಲಿ ಪ್ರೋಟೀನ್ ಮತ್ತು ಫೈಬರ್ ಅಧಿಕವಾಗಿದೆ. ಹೊಟ್ಟೆಯನ್ನು ದೀರ್ಘಕಾಲದವರೆಗೆ ತುಂಬಿರುವಂತೆ ನೋಡಿಕೊಳ್ಳುವ ಕಾರಣ ಆಗಾಗ್ಗೆ ತಿನ್ನಬೇಕೆನ್ನುವ ಭಾವನೆ ಬರುವುದಿಲ್ಲ. ಜೊತೆಗೆ ಇವುಗಳಲ್ಲಿ ಕ್ಯಾಲೋರಿಗಳು ತುಂಬಾ ಕಡಿಮೆ.

5 /7

ಈ ಬೀಜಗಳು ಕರುಳಿನ ಆರೋಗ್ಯವನ್ನು ಸುಧಾರಿಸುವ ಮೂಲಕ ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹ ಉಪಯುಕ್ತವಾಗಿವೆ. ಇವೆರಡೂ ದೇಹದ ಉಷ್ಣತೆಯನ್ನು ಕಡಿಮೆ ಮಾಡುತ್ತದೆ.

6 /7

ಪಿತ್ತ ಮತ್ತು ಅಧಿಕ ದೇಹದ ಉಷ್ಣತೆಯಿಂದ ಬಳಲುತ್ತಿರುವವರಿಗೆ ಎಳನೀರಿನಲ್ಲಿ ಸಬ್ಜಾ ಬೀಜ ಸೇರಿಸಿ ಕುಡಿಯುವುದು ಪ್ರಯೋಜನಕಾರಿ. ಇದರ ಮೂಲಕ, ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು. ಸಬ್ಜಾ ಬೀಜಗಳು ಒಮೆಗಾ-3 ಕೊಬ್ಬಿನಾಮ್ಲಗಳಲ್ಲಿ ಸಮೃದ್ಧವಾಗಿವೆ. ಕೊಬ್ಬನ್ನು ಕರಗಿಸಲು ಇವುಗಳನ್ನು ಅತ್ಯುತ್ತಮವೆಂದು ಪರಿಗಣಿಸಲಾಗುತ್ತದೆ.

7 /7

(ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇವುಗಳನ್ನು ಅನುಸರಿಸುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. Zee News Kannada ಈ ಮಾಹಿತಿಯನ್ನು ಅನುಮೋದಿಸುವುದಿಲ್ಲ.)