30 ವರ್ಷಗಳ ಬಳಿಕ ಜನ್ಮಾಷ್ಟಮಿಯ ದಿನ ನಿರ್ಮಾಣಗೊಳ್ಳುತ್ತಿದೆ ಈ ವಿಶೇಷ ಯೋಗ, ಧನಕುಬೇರ ಕೃಪೆಯಿಂದ ಈ ರಾಶಿಗಳ ಜನರಿಗೆ ಧನಲಾಭ-ಭಾಗ್ಯೋದಯ ಯೋಗ!

Janmashtami Auspicious Yoga 2023: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಜನ್ಮಾಷ್ಟಮಿಯ ದಿನ 30 ವರ್ಷಗಳ ಬಳಿಕ ಸರ್ವಾರ್ಥ ಸಿದ್ಧಿಯೋಗ, ರೋಹಿಣಿ ನಕ್ಷತ್ರ ಹಾಗೂ ವೃಷಭ ರಾಶಿಯಲ್ಲಿ ಚಂದ್ರ ವಿರಾಜಮಾನನಾಗಿರಲಿದ್ದಾನೆ. ಇದರಿಂದ ಒಟ್ಟು ಮೂರು ರಾಶಿಗಳ ಜನರಿಗೆ ಪ್ರತಿಯೊಂದು ಕ್ಷೇತ್ರದಲ್ಲಿ ಯಶಸ್ಸು ಪ್ರಾಪ್ತಿಯಾಗಲಿದೆ. 
 

ಬೆಂಗಳೂರು: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಈ ಬಾರಿ 6 ಹಾಗೂ 7 ಸೆಪ್ಟೆಂಬರ್ 2023 ರಂದು ಎರಡು ದಿನಗಳ ಕಾಲ ಜನ್ಮಾಷ್ಟಮಿ ಉತ್ಸವವನ್ನು ಆಚರಿಸಲಾಗುತ್ತಿದೆ. ಏಕೆಂದರೆ ಅಷ್ಟಮಿ ತಿಥಿ ಎರಡೂ ದಿನಗಳನ್ನು ಬೀಳುತ್ತಿದೆ. ಅಷ್ಟಮಿ ತಿಥಿಯ ರೋಹಿಣಿ ನಕ್ಷತ್ರದಲ್ಲಿ ಶ್ರೀ ಕೃಷ್ಣ ಜನಿಸಿದ್ದ ಎಂದು ಹೇಳಲಾಗುತ್ತದೆ. ಹೀಗಾಗಿ ಎರಡೂ ದಿನ ಜನ್ಮಾಷ್ಟಮಿಯನ್ನು ಆಚರಿಸಲಾಗುವುದು. ಈ ಬಾರಿಯ ಜನ್ಮಾಷ್ಟಮಿ ದಿನ 30 ವರ್ಷಗಳ ಬಳಿಕ ವಿಶೇಷ ಮುಹೂರ್ತ ನಿರ್ಮಾಣಗೊಳ್ಳುತ್ತಿದೆ. ಏಕೆಂದರೆ, ಈ ಬಾರಿ ಸರ್ವಾರ್ಥ ಸಿದ್ಧಿಯೋಗ, ವೃಷಭ ರಾಶಿಯಲ್ಲಿ ಚಂದ್ರ ಹಾಗೂ ರೋಹಿಣಿ ನಕ್ಷತ್ರದಲ್ಲಿ ನಿರ್ಮಾಣಗೊಳ್ಳುತ್ತಿದೆ. ಇದಲ್ಲದೆ ಶನಿ ಮಹಾರಾಜ 30 ವರ್ಷಗಳ ಬಳಿಕ ತನ್ನ ಸ್ವರಾಶಿಯಾಗಿರುವ ಕುಂಭ ರಾಶಿಯಲ್ಲಿ ಸಂಚರಿಸುತ್ತಿದ್ದಾನೆ. ಇದರಿಂದ 3 ರಾಶಿಗಳ ಜಾತಕದವರಿಗೆ ಆಕಸ್ಮಿಕ ಧನಲಾಭ ಹಾಗೂ ಭಾಗ್ಯೋದಯ ಯೋಗ ರೂಪುಗೊಳ್ಳುತ್ತಿದೆ. ಆ ಅದೃಷ್ಟವಂತ ರಾಶಿಗಳು ಯಾವುವು ತಿಳಿದುಕೊಳ್ಳೋಣ ಬನ್ನಿ,

 

ಇದನ್ನೂ ಓದಿ-ಶೀಘ್ರದಲ್ಲಿಯೇ ಅಮಲಾ ರಾಜಯೋಗ ನಿರ್ಮಾಣ, ಧನಲಕ್ಷ್ಮಿ ಕೃಪೆಯಿಂದ 3 ರಾಶಿಗಳ ಜನರಿಗೆ ಬಂಪರ್ ಧನಲಾಭ!

 

ಇದನ್ನೂ ನೋಡಿ-

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /5

Janmashtami Auspicious Yoga 2023: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಜನ್ಮಾಷ್ಟಮಿಯ ದಿನ 30 ವರ್ಷಗಳ ಬಳಿಕ ಸರ್ವಾರ್ಥ ಸಿದ್ಧಿಯೋಗ, ರೋಹಿಣಿ ನಕ್ಷತ್ರ ಹಾಗೂ ವೃಷಭ ರಾಶಿಯಲ್ಲಿ ಚಂದ್ರ ವಿರಾಜಮಾನನಾಗಿರಲಿದ್ದಾನೆ. ಇದರಿಂದ ಒಟ್ಟು ಮೂರು ರಾಶಿಗಳ ಜನರಿಗೆ ಪ್ರತಿಯೊಂದು ಕ್ಷೇತ್ರದಲ್ಲಿ ಯಶಸ್ಸು ಪ್ರಾಪ್ತಿಯಾಗಲಿದೆ.   

2 /5

ಮಕರ ರಾಶಿ: ಜನ್ಮಾಷ್ಟಮಿ ನಿಮ್ಮ ವಿಶೇಷ ಲಾಭದಾಯಕ ಸಿದ್ಧ ಸಾಬೀತಾಗಲಿದೆ. ಏಕೆಂದರೆ ಶನಿ ನಿಮ್ಮ ಗೋಚರ ಜಾತಕದ ಧನಭಾವದಲ್ಲಿ ಗೋಚರಿಸುತ್ತಿದ್ದು, ಈ ಅವಧಿಯಲ್ಲಿ ನಿಮಗೆ ಆಕಸ್ಮಿಕ ಧನಲಾಭ ಉಂಟಾಗುವ ಸಾಧ್ಯತೆ ಇದೆ. ಇನ್ನೂ ಸ್ವಲ್ಪ ಪರಿಶ್ರಮ ಪಟ್ಟರೆ ನಿಮಗೆ ಅಧಿಕ ಲಾಭವಾಗುವ ಸಾಧ್ಯತೆ ಇದೆ. ನಿಮ್ಮ ಎಲ್ಲಾ ಮಹತ್ವಾಕಾಂಕ್ಷೆಗಳು ಪೂರ್ಣಗೊಳ್ಳಲಿವೆ. ವ್ಯಾಪಾರಿಗಳಿಗೆ ಅವರ ಸಿಲುಕಿ ಹಾಕಿಕೊಂಡ ಹಣ ವಾಪಸ್ ಬರಲಿದೆ. ನೌಕರವರ್ಗದ ಜನರಿಗೆ ಈ ಅವಧಿಯಲ್ಲಿ ಪ್ರಮೋಷನ್, ಇಂಕ್ರಿಮೆಂಟ್ ಭಾಗ್ಯ ಪ್ರಾಪ್ತಿಯಾಗಲಿದೆ. ಆದರೆ ಈ ಅವಧಿಯಲ್ಲಿ ನಿಮಗೆ ಗಂಟಲು, ಎದೆಗೆ ಸಂಬಂಧಿಸಿದ ಕಾಯಿಲೆಯಾಗುವ ಸಾಧ್ಯತೆ ಇದೆ.   

3 /5

ಸಿಂಹ ರಾಶಿ: 30 ವರ್ಷಗಳ ಬಳಿಕ ನಿರ್ಮಾಣಗೊಳ್ಳುತ್ತಿರುವ ಈ ಯೋಗ ಸಿಂಹ ರಾಶಿಯ ಜಾತಕದವರ ಪಾಲಿಗೆ ಪ್ರತಿಯೊಂದು ಕ್ಷೇತ್ರದಲ್ಲಿ ಶುಭ ಸಿದ್ಧ ಸಾಬೀತಾಗಲಿದೆ. ಈ ಅವಧಿಯಲ್ಲಿ ನಿಮಗೆ ವೃತ್ತಿಜೀವನಕ್ಕೆ ಸಂಬಂಧಿಸಿದ ಸೌಕರ್ಯಗಳಲ್ಲಿ ವೃದ್ಧಿಯಾಗಲಿದೆ. ಇದಲ್ಲದೆ ಈ ಅವಧಿಯಲ್ಲಿ ನಿಮ್ಮ ಆದಾಯದಲ್ಲಿ ಹೆಚ್ಚಳ ಸಂಭವಿಸುವ ಸಾಧ್ಯತೆ ಇದೆ. ಇದಲ್ಲದೆ ನಿಮಗೆ ಬಾಳಸಂಗಾತಿಯ ಬೆಂಬಲ ಪ್ರಾಪ್ತಿಯಾಗಲಿದೆ. ನಿಂತು ಹೋದ ಕೆಲಸಗಳಿಗೆ ಪುನಃ ಗತಿ ಸಿಗಲಿದೆ. ಈ ಅವಧಿಯಲ್ಲಿ ನೀವು ಕೈಗೊಳ್ಳುವ ಒಂದು ಬಲವಾದ ನಿರ್ಣಯ ನಿಮಗೆ ಭವಿಷ್ಯದಲ್ಲಿ ಸಾಕಷ್ಟು ಲಾಭವನ್ನು ತಂದು ಕೊಡಲಿದೆ. ಪಾಟ್ನರ್ಶಿಪ್ ವ್ಯವಹಾರದಲ್ಲಿ ನಿಮಗೆ ಲಾಭ ಪ್ರಾಪ್ತಿಯಾಗಲಿದೆ.   

4 /5

ವೃಷಭ ರಾಶಿ: ನಿಮ್ಮ ಪಾಲಿಗೆ ಈ ಬಾರಿಯ ಜನ್ಮಾಷ್ಟಮಿ ಅತ್ಯದ್ಭುತ ಸಾಬೀತಾಗಲಿದೆ. ಈ ಅವಧಿಯಲ್ಲಿ ನಿಮಗೆ ಆಕಸ್ಮಿಕ ಧನಲಾಭ ಕಾದಿದೆ. ಜೀವನದಲ್ಲಿ ಹಣ ಗಳಿಕೆಯ ಹಲವು ಅವಕಾಶಗಳು ಒದಗಿಬರಲಿವೆ. ಸ್ವಂತ ಬಿಸ್ನೆಸ್ ಇದ್ದರೆ, ನಿಮ್ಮ ಆದಾಯ ಹೆಚ್ಚಾಗಲಿದೆ. ವ್ಯಾಪಾರ ವಿಸ್ತರಣೆಯಾಗುವ ಸಾಧ್ಯತೆ ಇದೆ. ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಸಮಯ ಸಾಕಷ್ಟು ಅನುಕೂಲಕರವಾಗಿದೆ. ಇದಲ್ಲದೆ ಈ ಅವಧಿಯಲ್ಲಿ ನಿಮಗೆ ಅದೃಷ್ಟದ ಅಪಾರ ಬೆಂಬಲ ಕೂಡ ಸಿಗಲಿದೆ. 

5 /5

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)