ಹತ್ತು ವರ್ಷಗಳ ಬಳಿಕ ಶುಕ್ರ-ಕೇತುವಿನ ಮಹಾ ಸಂಯೋಜನೆ, ಶುಕ್ರದೆಸೆಯಿಂದ ಈ ಜನರಿಗೆ ಆಕಸ್ಮಿಕ ಧನಲಾಭ-ಭಾಗ್ಯೋದಯ ಯೋಗ!

Shukra-Ketu Maha Yuti 2023: ಜೋತಿಷ್ಯ ಶಾಸ್ತ್ರದಲ್ಲಿ ಕನ್ಯಾ ರಾಶಿಯಲ್ಲಿ ಶುಕ್ರ ಹಾಗೂ ಕೇತುವಿನ ಮಹಾ ಸಂಯೋಜನೆ ನೆರವೇರಿದ್ದು, ಇದರಿಂದ ಒಟ್ಟು ಮೂರು ರಾಶಿಗಳ ಜನರಿಗೆ ಅಪಾರ ಧನಲಾಭ ಹಾಗೂ ಭಾಗ್ಯೋದಯ ಯೋಗ ರೂಪುಗೊಂಡಿದೆ. Spiritual News In Kannada
 

ಬೆಂಗಳೂರು: ವೈದಿಕ ಪಂಚಾಂಗದ ಪ್ರಕಾರ ಗ್ರಹಗಳು ಕಾಲಕಾಲಕ್ಕೆ ತಮ್ಮ ರಾಶಿಗಳನ್ನು ಪರಿವರ್ತಿಸುವ ಮೂಲಕ ಪರಸ್ಪರ ಮೈತ್ರಿಯನ್ನು ಮಾಡಿಕೊಳ್ಳುತ್ತವೆ. ಗ್ರಹಗಳ ಈ ಮೈತ್ರಿ ಎಲ್ಲಾ ದ್ವಾದಶ ರಾಶಿಗಳ ಜಾತಕದವರ ಮೇಲೆ ಪ್ರಭಾವ ಬೀರುತ್ತದೆ. ಪ್ರಸ್ತುತ ಕನ್ಯಾ ರಾಶಿಯಲ್ಲಿ ಶುಕ್ರನ ಪ್ರವೇಶ ನೆರವೇರಿದ್ದು, ಅಲ್ಲಿ ಈಗಾಗಲೇ ಕೇತು ಇರುವ ಕಾರಣ, ಹತ್ತು ವರ್ಷಗಳ ಬಳಿಕ ಇಬ್ಬರ ಮಹಾಮೈತ್ರಿ ನೆರವೇರಿದೆ. ಈ ಮೈತ್ರಿ ಎಲ್ಲಾ ರಾಶಿಗಳ ಜನರ ಮೇಲೆ ಪ್ರಭಾವ ಬೀರಲಿದ್ದು, ಒಟ್ಟು ಮೂರು ರಾಶಿಗಳ ಜನರಿಗೆ ಇದರಿಂದ ಆಕಸ್ಮಿಕ ಧನಲಾಭ ಹಾಗೂ ಭಾಗ್ಯೋದಯ ಯೋಗ ರೂಪುಗೊಂಡಿದೆ. ಬನ್ನಿ ಆ ಅದೃಷ್ಟವಂತ ರಾಶಿಗಳು ಯಾವುವು ತಿಳಿದುಕೊಳ್ಳೋಣ, Spiritual News In Kannada

 

ಇದನ್ನೂ ಓದಿ-ದೀಪಾವಳಿಗೂ ಮುನ್ನ 8 ಮಹತ್ವದ ಯೋಗಗಳ ರಚನೆ, ಲಕ್ಷ್ಮಿ ಕೃಪೆಯಿಂದ ಈ ಜನರಿಗೆ ಅಪಾರ ಧನ-ಸಂಪತ್ತು ಪ್ರಾಪ್ತಿಯ ಅವಕಾಶ!

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /5

Shukra-Ketu Maha Yuti 2023: ಜೋತಿಷ್ಯ ಶಾಸ್ತ್ರದಲ್ಲಿ ಕನ್ಯಾ ರಾಶಿಯಲ್ಲಿ ಶುಕ್ರ ಹಾಗೂ ಕೇತುವಿನ ಮಹಾ ಸಂಯೋಜನೆ ನೆರವೇರಿದ್ದು, ಇದರಿಂದ ಒಟ್ಟು ಮೂರು ರಾಶಿಗಳ ಜನರಿಗೆ ಅಪಾರ ಧನಲಾಭ ಹಾಗೂ ಭಾಗ್ಯೋದಯ ಯೋಗ ರೂಪುಗೊಂಡಿದೆ. Spiritual News In Kannada  

2 /5

ಕನ್ಯಾ ರಾಶಿ: ಈ ಮೈತ್ರಿ ನಿಮ್ಮ ಜಾತಕದ ಲಗ್ನ ಭಾವದಲ್ಲಿ ರೂಪುಗೊಂಡಿದೆ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ವ್ಯಕ್ತಿತ್ವದಲ್ಲಿ ಹೊಸ ಹುರುಪು ಕಂಡುಬರಲಿದೆ. ಆತ್ಮವಿಶ್ವಾಸ ಅಪಾರ ಹೆಚ್ಚಾಗಲಿದೆ. ಇನ್ನೊಂದೆಡೆ ನಿಮ್ಮ ಕೆಲಸಕ್ಕೆ ಮತ್ತು ವಿಚಾರಕ್ಕೆ ಸಂಬಂಧಿಸಿದಂತೆ ಸ್ಪಷ್ಟತೆ ನಿಮ್ಮಲ್ಲಿರಲಿದೆ. ಈ ಅವಧಿಯಲ್ಲಿ ಯೋಜನೆ ರೂಪಿಸಿ ಕೆಲಸ ಮಾಡುವುದನ್ನು ನೀವು ಇಷ್ಟಪಡುವಿರಿ ಮತ್ತು ಅದರಿಂದ ನಿಮಗೆ ವ್ಯಾಪಾರ ಹಾಗೂ ವೃತ್ತಿ ಜೀವನದಲ್ಲಿ ಭಾರಿ ಧನಲಾಭ ಉಂಟಾಗಲಿದೆ. ವೈವಾಹಿಕ ಜೀವನ ಸುಖಮಯವಾಗಿರಲಿದೆ. ಬಾಳಸಂಗಾತಿಯ ಬೆಂಬಲ ನಿಮಗೆ ಪ್ರಾಪ್ತಿಯಾಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. 

3 /5

ಧನು ರಾಶಿ: ಈ ಮೈತ್ರಿ ನಿಮ್ಮ ಗೋಚರ ಜಾತಕದ ಕರ್ಮ ಭಾವದಲ್ಲಿ ರೂಪುಗೊಂಡಿದೆ. ಹೀಗಾಗಿ ಕಾರ್ಯಕ್ಷೇತ್ರದಲ್ಲಿ ನಿಮ್ಮ ಸ್ಥಿತಿ ಸಾಕಷ್ಟು ಬಲವಾಗಿರಲಿದೆ. ನಿಮ್ಮ ಸ್ಥಾನಮಾನ ಮತ್ತು ಪ್ರಭಾವ ಹೆಚ್ಚಾಗಲಿದೆ. ಸಹೋದರ-ಸಹೋದರಿಯರ ಬೆಂಬಲ ನಿಮಗೆ ಸಿಗಲಿದೆ. ಕಾರ್ಯಸ್ಥಳದಲ್ಲಿ ಮುಂದುವರೆಯಲು ನಿಮಗೆ ಉತ್ತಮ ಅವಕಾಶ ಪ್ರಾಪ್ತಿಯಾಗಲಿದೆ. ಇದರಿಂದ ನಿಮ್ಮ ಆರ್ಥಿಕ ಸಾಕಷ್ಟು ಪ್ರಬಲವಾಗಲಿದೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ ಮತ್ತು ವ್ಯಾಪಾರದಲ್ಲಿ ಉತ್ತಮ ಆರ್ಡರ್ ಗಳು ಸಿಗುವ ಸಾಧ್ಯತೆ ಇದೆ. ಇದರಿಂದ ನಿಮಗೆ ಭಾರಿ ಧನಲಾಭವಾಗುವ ಸಂಕೇತಗಳಿವೆ. 

4 /5

ಮಕರ ರಾಶಿ: ನಿಮ್ಮ ಗೋಚರ ಜಾತಕದ ನವಮ ಭಾವದಲ್ಲಿ ಈ ಮೈತ್ರಿ ರೂಪುಗೊಂಡಿದೆ. ವೈದಿಕ ಜೋತಿಷ್ಯ ಶಾಸ್ತ್ರದಲ್ಲಿ ಇದನ್ನು ಭಾಗ್ಯ ಹಾಗೂ ಯಾತ್ರೆಯ ಸ್ಥಾನ ಎಂದು ಪರಿಗಣಿಸಲಾಗಿದೆ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ಎಲ್ಲಾ ಆಸೆ ಆಕಾಂಕ್ಷೆಗಳು ಈಡೇರಲಿವೆ ಮತ್ತು ನಿಮಗೆ ಅದೃಷ್ಟದ ಸಂಪೂರ್ಣ ಬೆಂಬಲ ನಿಮಗೆ ಸಿಗಲಿದೆ. ಕಾರ್ಯಕ್ಷೇತ್ರದಲ್ಲಿ ಎದುರಾಳಿಗಳ ಮೇಲೆ ಜಯ ಸಾಧಿಸುವಿರಿ ಮತ್ತು ಪ್ರತಿಯೊಂದು ಕೆಲಸವನ್ನು ನೀವು ಯಶಸ್ವಿಯಾಗಿ ಪೂರೈಸುವಿರಿ. ಹೊಸ ಆಸ್ತಿಪಾಸ್ತಿ ಖರೀದಿಸುವ ನಿಮ್ಮ ಆಸೆ ಈಡೇರಲಿದೆ. ಕೆಲಸದ ನಿಮಿತ್ತ ಸಣ್ಣಪುಟ್ಟ ಯಾತ್ರೆ ಜರುಗುವ ಸಾಧ್ಯತೆ ಇದ್ದು, ಈ ಯಾತ್ರೆ ನಿಮ್ಮ ಪಾಲಿಗೆ ಶುಭ ಸಾಬೀತಾಗಲಿದೆ. ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಸಮಯ ಉತ್ತಮವಾಗಿದೆ, ಯಶಸ್ಸು ಕಟ್ಟಿಟ್ಟ ಬುತ್ತಿ ಎಂದರೆ ತಪ್ಪಾಗಲಾರದು.

5 /5

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)