ಇದೀಗ ಕ್ರಿಕೆಟ್ ಪ್ರೇಮಿಗಳನ್ನು ಕಾಡುತ್ತಿರುವ ಪ್ರಶ್ನೆ ಎಂದರೆ ರೋಹಿತ್ ಶರ್ಮಾ ನಿವೃತ್ತಿಯ ನಂತರ ಏಕದಿನ ಮಾದರಿಯಲ್ಲಿ ಅವರ ಸ್ಥಾನವನ್ನು ತುಂಬುವವರು ಯಾರು ಎನ್ನುವುದು.
Team India Opener : ಟೆಸ್ಟ್, ODI ಅಥವಾ T20 ಎಲ್ಲಾ ಮೂರು ಸ್ವರೂಪಗಳಲ್ಲಿ ಓಪನರ್ ಆಗಿ ಕಣಕ್ಕಿಳಿದು ತಂಡಕ್ಕೆ ಉತ್ತಮ ನೆಲೆ ಹಾಕಿಕೊಡುವಲ್ಲಿ ರೋಹಿತ್ ನಿಷ್ಣಾತರಾಗಿದ್ದಾರೆ. ಸದ್ಯ ರೋಹಿತ್ ವಿಶ್ರಾಂತಿಯಲ್ಲಿದ್ದಾರೆ. ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅವರು ಮೈದಾನದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದೀಗ ಕ್ರಿಕೆಟ್ ಪ್ರೇಮಿಗಳನ್ನು ಕಾಡುತ್ತಿರುವ ಪ್ರಶ್ನೆ ಎಂದರೆ ರೋಹಿತ್ ಶರ್ಮಾ ನಿವೃತ್ತಿಯ ನಂತರ ಏಕದಿನ ಮಾದರಿಯಲ್ಲಿ ಅವರ ಸ್ಥಾನವನ್ನು ತುಂಬುವವರು ಯಾರು ಎನ್ನುವುದು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
2023 ರಲ್ಲಿ ODI ನಲ್ಲಿ ಶುಭಮನ್ ಗಿಲ್ ಅವರ ಪ್ರದರ್ಶನವು ಅತ್ಯುತ್ತಮವಾಗಿದೆ. ಈ ವರ್ಷ ಏಕದಿನ ಪಂದ್ಯದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್. ಅಷ್ಟೇ ಅಲ್ಲ, ಈ ವರ್ಷ 1500+ ರನ್ ಗಳಿಸಿದ ಏಕೈಕ ಬ್ಯಾಟ್ಸ್‌ಮನ್. ಹೀಗಿರುವಾಗ ಅವರು ಟೀಂ ಇಂಡಿಯಾ ಓಪನರ್ ಆಗುವುದು ನಿಶ್ಚಿತ. ಸದ್ಯ ಇರುವ ಪ್ರಶ್ನೆ ಮತ್ತೊಬ್ಬ ಆಟಗಾರ ಯಾರು ಎನ್ನುವುದು.
ಭವಿಷ್ಯದಲ್ಲಿ ಟೀಮ್ ಇಂಡಿಯಾದ ಓಪನರ್ ಆಗುವ ಸಾಮರ್ಥ್ಯ ಇರುವ ಮತ್ತೊಬ್ಬ ಆಟಗಾರ ಇಶಾನ್ ಕಿಶನ್. ಇವರು ಈ ಮಾದರಿಯಲ್ಲಿ ಅತಿ ವೇಗದ ದ್ವಿಶತಕ ಗಳಿಸಿರುವ ರೆಕಾರ್ಡ್ ಕೂಡಾ ಹೊಂದಿದ್ದಾರೆ.
ಪ್ರಸ್ತುತ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಟೀಂ ಇಂಡಿಯಾಗೆ ರುತುರಾಜ್ ಗಾಯಕ್ವಾಡ್ ಓಪನರ್ ಆಗಿದ್ದಾರೆ. ಅವರು ಉತ್ತಮ ಪ್ರದರ್ಶನವನ್ನು ಮುಂದುವರಿಸಿದರೆ ಮುಂದಿನ ದಿನಗಳಲ್ಲಿ ಭಾರತದ ಖಾಯಂ ಆರಂಭಿಕ ಆಟಗಾರನಾಗಿ ಕಾಣಿಸಿಕೊಳ್ಳಬಹುದು.
22 ವರ್ಷದ ಯುವ ಎಡಗೈ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್ ಪ್ರಸ್ತುತ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿ ಮೂಲಕ ತಂಡಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಮೊದಲ ಪಂದ್ಯದಲ್ಲಿಯೇ ಅಜೇಯ ಅರ್ಧಶತಕ ಗಳಿಸಿದ್ದರು. ಸರಣಿಯ ಎರಡನೇ ಪಂದ್ಯದಲ್ಲಿಯೂ ಅರ್ಧಶತಕ ಬಾರಿಸಿದ್ದಾರೆ.
ಭಾರತ ತಂಡದ ಮೂರನೇ ಮತ್ತು ಕೊನೆಯ ಪಂದ್ಯ ಡಿಸೆಂಬರ್ 21 ರಂದು ಅಂದರೆ ಇಂದು ನಡೆಯಲಿದೆ. ಈ ಸರಣಿಯು 1-1ಕ್ಕೆ ಸಮನಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಕೆಎಲ್ ರಾಹುಲ್ ನಾಯಕತ್ವದಲ್ಲಿ ಭಾರತ ಕೊನೆಯ ಪಂದ್ಯವನ್ನು ಗೆದ್ದು ಇತಿಹಾಸ ನಿರ್ಮಿಸಬಹುದು.