White Hair Remedy : ಈ ಕಾಳನ್ನು ಅರೆದು ಕೂದಲಿಗೆ ಹಚ್ಚಿ ಹತ್ತೇ ನಿಮಿಷ ಬಿಟ್ಟರೆ ಸಾಕು ಬಿಳಿ ಕೂದಲು ನೈಸರ್ಗಿಕವಾಗಿ, ಶಾಶ್ವತವಾಗಿ ಕಪ್ಪಾಗುವುದು !

White Hair natural Remedy : ಈ ಕಾಳನ್ನು ಹೀಗೆ ಬಳಸುವುದರಿಂದ ಬಿಳಿ ಕೂದಲು ಹತ್ತೇ ನಿಮಿಷಗಳಲ್ಲಿ ಬಿಳಿ ಕೂದಲು ನೈಸರ್ಗಿಕವಾಗಿ ಕಪ್ಪಾಗಿ ಬಿಡುತ್ತದೆ. ಇದರಿಂದ ಯಾವ ಅಡ್ಡ ಪರಿಣಾಮವೂ ಇರುವುದಿಲ್ಲ.   

ಬೆಂಗಳೂರು : White Hair Permanent Remedy : ಚಿಕ್ಕ ವಯಸ್ಸಿನಲ್ಲಿಯೇ ಕೂದಲು ಬೆಳ್ಳಗಾಗುತ್ತದೆ ಎನ್ನುವುದು ಇತ್ತೀಚಿನ ದಿನಗಳಲ್ಲಿ ಎಲ್ಲರ ಬಾಯಿಯಲ್ಲಿಯೂ ಕೇಳಿ ಬರುವ ಮಾತು. ಕೂದಲು ಬೆಳ್ಳಗಾಗುತ್ತದೆ ಎಂದು ಚಿಂತೆ ಮಾಡುವ ಬದಲು ಅದಕ್ಕೆ ಕಾರಣ ಏನು ಎನ್ನುವುದನ್ನು ಹುಡುಕಬೇಕು. ಚಿಕ್ಕ ವಯಸ್ಸಿನಲ್ಲಿ ಕೂದಲು ಬಿಳಿಯಾಗುವುದಕ್ಕೆ ಹಲವಾರು ಕಾರಣಗಳಿವೆ. ಇನ್ನು  ಜಾಹೀರಾತುಗಳ ಮೊರೆ ಹೋಗಿ ಮಾರುಕಟ್ಟೆಯಲ್ಲಿ ಲಭ್ಯವಿರುವ ವಿವಿಧ ರೀತಿಯ ಉತ್ಪನ್ನಗಳನ್ನು ಕೂದಲಿಗೆ ಬಳಸುತ್ತೇವೆ. ಆ ಉತ್ಪನ್ನಗಳಲ್ಲಿರುವ ರಾಸಾಯನಿಕ ವಸ್ತುಗಳು ಕೂದಲಿನ ಆರೋಗ್ಯವನ್ನು ಕೆಡಿಸುವುದರ ಜೊತೆಗೆ ಒಂದಕ್ಕೆ ಹತ್ತರಷ್ಟು ಕೂದಲನ್ನು ಬಿಳಿಯಾಗಿಸಿ ಬಿಡುತ್ತದೆ.   

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /6

ಕೂದಲಿಗೆ ಸಾಸಿವೆ ಕಾಳುಗಳನ್ನು ಬಳಸುವ ಮೂಲಕ ಬಿಳಿ ಕೂದಲನ್ನು ಮತ್ತೆ ಕಪ್ಪಾಗಿಸಬಹುದು.ಸಾಸಿವೆ ಕಾಳು ಕೂದಲನ್ನು ಬೇರುಗಳಿಂದ ಬಲಪಡಿಸುತ್ತದೆ. ಇದರಿಂದ ಕೂದಲು ಉದುರುವ ಮತ್ತು ತಲೆ ಹೊಟ್ಟಿನ ಸಮಸ್ಯೆಯನ್ನು ನಿವಾರಣೆ ಮಾಡುತ್ತದೆ.  

2 /6

ಸಾಸಿವೆಯಲ್ಲಿ  ವಿಟಮಿನ್ ಎ ಹೇರಳ ಪ್ರಮಾಣದಲ್ಲಿದ್ದು, ಇದು ಕೂದಲಿನ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಅಲ್ಲದೆ ಬುಡದಿಂದಲೇ ಕೂದಲನ್ನು ಬಲಪಡಿಸುತ್ತದೆ. 

3 /6

ಸಾಸಿವೆ ಕಾಳುಗಳಲ್ಲಿ ಪ್ರೋಟೀನ್, ಕ್ಯಾಲ್ಸಿಯಂ, ಒಮೆಗಾ -3 ಮತ್ತು ವಿಟಮಿನ್ ಇ ನಂತಹ ಪ್ರಮುಖ ಪೋಷಕಾಂಶಗಳು ಕೂಡಾ ಕಂಡುಬರುತ್ತವೆ. ಇದು ಕೂದಲನ್ನು ಬಲಪಡಿಸುವುದಲ್ಲದೆ, ಕೂದಲಿನ ಕಪ್ಪು ಬಣ್ಣವನ್ನು ಮರಳಿ ಪಡೆಯಲು ಸಹಾಯ ಮಾಡುತ್ತದೆ.

4 /6

ಸಾಸಿವೆ ಕಾಳುಗಳಿಂದ ಮಾಡಿದ ಎಣ್ಣೆಯನ್ನು ಸ್ವಲ್ಪ ಬಿಸಿ ಮಾಡಿ ಕೂದಲು ಮತ್ತು ನೆತ್ತಿಯ ಮೇಲೆ ಮಸಾಜ್ ಮಾಡಬೇಕು. ಇದರಿಂದ ಕೂದಲಿನ ಬೇರುಗಳಲ್ಲಿ ರಕ್ತ ಪರಿಚಲನೆಗೆ ಸಹಾಯವಾಗುತ್ತದೆ. ಇದು ಕೂದಲು ಕ್ರಮೇಣ ಕಪ್ಪು ಬಣ್ಣಕ್ಕೆ ತಿರುಗಲು ಸಹಾಯ ಮಾಡುತ್ತದೆ. 

5 /6

ಸಾಸಿವೆ ಕಾಳುಗಳನ್ನು ಒಣಗಿಸಿ ಪುಡಿ ಮಾಡಿಕೊಳ್ಳಬೇಕು. ನಂತರ ಈ ಪುಡಿಯನ್ನು ಒಂದು ಪಾತ್ರೆಗೆ ಹಾಕಿ ಅದಕ್ಕೆ ಒಂದು ಮೊಟ್ಟೆಯನ್ನು ಹಾಕಿ ಮಿಶ್ರಣ ಮಾಡಿಕೊಳ್ಳಿ. ಈಗ ಈ ಮಿಶ್ರಣಕ್ಕೆ  ಕ್ಯಾಸ್ಟರ್ ಆಯಿಲ್ ಅಥವಾ ತೆಂಗಿನೆಣ್ಣೆಯನ್ನು ಬೆರೆಸಿ ಹೇರ್ ಮಾಸ್ಕ್ ಅನ್ನು ತಯಾರಿಸಿಕೊಳ್ಳಿ. ಹೀಗೆ ತಯಾರಿಸಿದ ಹೇರ್ ಮಾಸ್ಕ್ ಅನ್ನು ಕೂದಲಿನ ಬೇರುಗಳಿಗೆ  ಹಚ್ಚಿ. ಸ್ವಲ್ಪ ಸಮಯದ ನಂತರ ಕೂದಲನ್ನು ಶಾಂಪೂ ಹಾಕಿ ತೊಳೆಯಿರಿ.   

6 /6

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. ZEE NEWS ಅದನ್ನು ಖಚಿತಪಡಿಸುವುದಿಲ್ಲ.