ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರಿನಲ್ಲಿ ಬುಧವಾರ ಭಾರೀ ಅಪಘಾತ ಸಂಭವಿಸಿದೆ.
ನವದೆಹಲಿ : ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರಿನಲ್ಲಿ ಬುಧವಾರ ಭಾರೀ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ, ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ. ಚೀಫ್ ಆಫ್ ಡಿಫೆನ್ಸ್ ಸ್ಟಾಫ್ ಜನರಲ್ ಬಿಪಿನ್ ರಾವತ್ ಸೇರಿದಂತೆ ಹಲವು ಹಿರಿಯ ಸೇನಾ ಅಧಿಕಾರಿಗಳು ಹೆಲಿಕಾಪ್ಟರ್ನಲ್ಲಿದ್ದರು. ಅವರು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಈ ಹೆಲಿಕ್ಯಾಪ್ಟರ್ ನಲ್ಲಿ ಹೊರಟಿದ್ದರು. ಈ ಬಗ್ಗೆ ಭಾರತೀಯ ವಾಯುಪಡೆ ಟ್ವೀಟ್ ಮೂಲಕ ಮಾಹಿತಿ ನೀಡಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ
ದಟ್ಟ ಮಂಜಿನ ನಡುವೆ ನಂಜಪ್ಪನಛಾತಿರಂ ಪ್ರದೇಶದಲ್ಲಿ ಈ ಅವಘಡ ಸಂಭವಿಸಿದೆ. ಆರಂಭಿಕ ದೃಶ್ಯಗಳಲ್ಲಿ ಹೆಲಿಕಾಪ್ಟರ್ನಲ್ಲಿ ಬೆಂಕಿ ಹೊತ್ತಿಕೊಂಡಿರುವುದು ಕಂಡುಬಂದಿದೆ. ಹೆಲಿಕಾಪ್ಟರ್ ಪತನದ ನಂತರ ಭಾರೀ ಬೆಂಕಿ ಕಾಣಿಸಿಕೊಂಡು ದಟ್ಟ ಹೊಗೆ ಆವರಿಸಿದೆ. ಹೆಲಿಕಾಪ್ಟರ್ ಬಿದ್ದ ಪ್ರದೇಶ ಅರಣ್ಯ ಪ್ರದೇಶವಾಗಿದೆ.
ಈ ಬಗ್ಗೆ ಭಾರತೀಯ ವಾಯುಪಡೆ ಟ್ವೀಟ್ ಮಾಡಿದ್ದು, 'ಸಿಡಿಎಸ್ ಜನರಲ್ ಬಿಪಿನ್ ರಾವತ್ ಅವರಿದ್ದ ಭಾರತೀಯ ವಾಯುಪಡೆಯ ಎಂಐ-17ವಿ5 ಹೆಲಿಕಾಪ್ಟರ್ ತಮಿಳುನಾಡಿನ ಕೂನೂರು ಬಳಿ ಪತನಗೊಂಡಿದೆ. ಅಪಘಾತದ ಕಾರಣ ತಿಳಿಯಲು ತನಿಖೆಗೆ ಆದೇಶಿಸಲಾಗಿದೆ.
ಪೊಲೀಸ್ ಮೂಲಗಳಿಂದ ಪಡೆದ ಮಾಹಿತಿಯ ಪ್ರಕಾರ, ಹೆಲಿಕಾಪ್ಟರ್ ಭಾರತೀಯ ವಾಯುಪಡೆಯ ಸೂಲೂರು ನೆಲೆಯಿಂದ ವೆಲ್ಲಿಂಗ್ಟನ್ನ ಡಿಫೆನ್ಸ್ ಸರ್ವಿಸಸ್ ಕಾಲೇಜಿಗೆ) ತೆರಳುತ್ತಿದ್ದಾಗ ಅಪಘಾತಕ್ಕೀಡಾಗಿದೆ. ಅಪಘಾತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ.
ತಮಿಳುನಾಡಿನ ನೀಲಗಿರಿಯಲ್ಲಿ ಸೇನಾ ಹೆಲಿಕಾಪ್ಟರ್ ಪತನವಾಗಿರುವ ಬಗ್ಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಂಸತ್ತಿಗೆ ಮಾಹಿತಿ ನೀಡಲಿದ್ದಾರೆ.
ಮೂಲಗಳ ಪ್ರಕಾರ, ಸಿಡಿಎಸ್ ಬಿಪಿನ್ ರಾವತ್ ಸೇರಿದಂತೆ ಸೇನೆಯ 9 ಅಧಿಕಾರಿಗಳು ಈ ವಾಯುಪಡೆಯ ಹೆಲಿಕಾಪ್ಟರ್ನಲ್ಲಿ ಇದ್ದರು. ಮೂಲಗಳಿಂದ ಪಡೆದ ಮಾಹಿತಿಯ ಪ್ರಕಾರ, ಸಿಡಿಎಸ್ ಜನರಲ್ ಬಿಪಿನ್ ರಾವತ್ ಅಪಘಾತದ ನಂತರ ಆರೋಗ್ಯವಾಗಿದ್ದಾರೆ ಮತ್ತು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮಾಹಿತಿ ಪ್ರಕಾರ ಇದುವರೆಗೆ 5 ಮೃತದೇಹಗಳು ಪತ್ತೆಯಾಗಿವೆ.