ಅನೇಕ ಬಾರಿ ಬಾರ್ಡರ್ ಲೈನ್ ಕೊಲೆಸ್ಟ್ರಾಲ್ ಆರೋಗ್ಯ ತಪಾಸಣೆಯ ಮೂಲಕ ಪತ್ತೆಯಾಗುತ್ತದೆ. ದೇಹದಲ್ಲಿ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗುತ್ತಿದೆ ಎಂದಾದರೆ, ಕೆಲವೊಂದು ಆಹಾರ ಪದಾರ್ಥಗಳಿಂದ ದೂರವಿರಬೇಕು.
ಬೆಂಗಳೂರು : ನಮ್ಮ ದೇಹದಲ್ಲಿ ಎರಡು ರೀತಿಯ ಕೊಲೆಸ್ಟ್ರಾಲ್ ಕಂಡುಬರುತ್ತದೆ. ಒಂದು ಒಳ್ಳೆಯ ಕೊಲೆಸ್ಟ್ರಾಲ್ ಮತ್ತು ಇನ್ನೊಂದು ಕೆಟ್ಟ ಕೊಲೆಸ್ಟ್ರಾಲ್. ನಮ್ಮ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾದಾಗ ದೇಹದಲ್ಲಿ ಹಲವಾರು ರೀತಿಯ ಸಮಸ್ಯೆಗಳು ಹುಟ್ಟಿಕೊಳ್ಳುತ್ತವೆ. ಇದರಿಂದ ಬೊಜ್ಜು ಹೆಚ್ಚಿಸುವುದಲ್ಲದೆ ಹೃದ್ರೋಗದ ಅಪಾಯ ಕೂಡಾ ಹೆಚ್ಚಿಸುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ನೀವು ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಅನಿವಾರ್ಯ. ಮಾತ್ರವಲ್ಲ ಕೊಲೆಸ್ಟ್ರಾಲ್ ಮಟ್ಟವನ್ನು ಗಮನಿಸುವುದು ಕೂಡಾ ಮುಖ್ಯ. ಅನೇಕ ಬಾರಿ ಬಾರ್ಡರ್ ಲೈನ್ ಕೊಲೆಸ್ಟ್ರಾಲ್ ಆರೋಗ್ಯ ತಪಾಸಣೆಯ ಮೂಲಕ ಪತ್ತೆಯಾಗುತ್ತದೆ. ದೇಹದಲ್ಲಿ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗುತ್ತಿದೆ ಎಂದಾದರೆ, ಕೆಲವೊಂದು ಆಹಾರ ಪದಾರ್ಥಗಳಿಂದ ದೂರವಿರಬೇಕು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಆಲ್ಕೋಹಾಲ್ ಅತಿಯಾಗಿ ಸೇವಿಸಿದಾಗ ಅದು ದೇಹದ ಅಂಗಕ್ಕೆ ಹಾನಿಯನ್ನುಂಟುಮಾಡುತ್ತದೆ. ವಿಶೇಷವಾಗಿ ನಿಮ್ಮ ಕೊಲೆಸ್ಟ್ರಾಲ್ ಮಟ್ಟವು ಹೆಚ್ಚಾದಾಗ, ಆಲ್ಕೋಹಾಲ್ ಅನ್ನು ಕುಡಿಯಬಾರದು. ಏಕೆಂದರೆ ಅದು ನಿಮ್ಮ ಕೊಲೆಸ್ಟ್ರಾಲ್ ಅನ್ನು ಮತ್ತಷ್ಟು ಹೆಚ್ಚಿಸುತ್ತದೆ ಮತ್ತು ಇತರ ಕಾಯಿಲೆಗಳ ಸಾಧ್ಯತೆಯೂ ಹೆಚ್ಚಾಗುತ್ತದೆ.
ದೈನಂದಿನ ಆಹಾರದಲ್ಲಿ ಹೆಚ್ಚು ಸಿಹಿ ಪದಾರ್ಥಗಳನ್ನು ಸೇವಿಸುತ್ತಿದ್ದರೆ, ಅದು ಹಾನಿಕಾರಕವಾಗಿ ಪರಿಣಮಿಸಬಹುದು. ಅದು ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಕುಕೀಗಳು, ಪೇಸ್ಟ್ರಿಗಳು, ಕೇಕ್ ಗಳಂಥಹ ಅನಾರೋಗ್ಯಕರ ವಸ್ತುಗಳನ್ನು ಸೇವಿಸಬಾರದು.
ಕೊಲೆಸ್ಟ್ರಾಲ್ ಮಟ್ಟವು ಅಧಿಕವಾಗಿದ್ದರೆ, ನಾನ್ ವೆಜ್ ಸೇವನ್ಯನ್ನು ನಿಲ್ಲಿಸಬೇಕು. ಅದರಲ್ಲೂ ರೇಡ್ ಮೀಟ್ ಅನ್ನು ಮುಟ್ಟಿಯೂ ನೋಡಿವಂತಿಲ್ಲ. ಇದರಲ್ಲಿ ಸ್ಯಾಚುರೇಟೆಡ್ ಕೊಬ್ಬು ಹೆಚ್ಚಿರುವುದರಿಂದ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸುತ್ತದೆ.
ಕರಿದ ಆಹಾರವನ್ನು ಇಷ್ಟಪಡುತ್ತಿದ್ದರೆ, ಇದು ನಿಮಗೆ ಅಪಾಯಕಾರಿ ಸಂಕೇತವಾಗಿದೆ. ವಿಶೇಷವಾಗಿ ಅಧಿಕ ಕೊಲೆಸ್ಟ್ರಾಲ್ ಹೊಂದಿರುವ ಜನರು ಎಣ್ಣೆಯಲ್ಲಿ ಕರಿದ ಆಹಾರವನ್ನು ಸೇವಿಸಬಾರದು. ಇದು ಕೊಲೆಸ್ಟ್ರಾಲ್ ಮಟ್ಟ ಇದ್ದಕ್ಕಿದ್ದಂತೆ ಏರಲು ಕಾರಣವಾಗಬಹುದು.