PHOTOS: ಬಿಜೆಪಿ ಸೇರ್ಪಡೆಯಾದ ಮಾಜಿ ಸಭಾಪತಿ ಬಸವರಾಜ್ ಹೊರಟ್ಟಿ

ಬಸವರಾಜ ಹೊರಟ್ಟಿ ಇಂದು ಬಿಜೆಪಿ ಸೇರ್ಪಡೆ ಆಗಿದ್ದಾರೆ. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. 

ವಿಧಾನಪರಿಷತ್‌ ಸಭಾಪತಿ ಹಾಗೂ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಸವರಾಜ ಹೊರಟ್ಟಿ ಇಂದು ಬಿಜೆಪಿ ಸೇರ್ಪಡೆ ಆಗಿದ್ದಾರೆ. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸದಲ್ಲಿ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾದರು. 

1 /5

ತರಾತುರಿಯಲ್ಲಿ ಇಂದು ಮುಖ್ಯಮಂತ್ರಿ ನಿವಾಸದಲ್ಲಿ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.

2 /5

ನಿನ್ನೆ ಬಿಜೆಪಿ ಪಕ್ಷಕ್ಕೆ ಅಧಿಕೃತ ಸೇರ್ಪಡೆ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ ತಾಂತ್ರಿಕ ಕಾರಣಗಳ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ‌ ಸಲ್ಲಿಸದ ಕಾರಣ ಸೇರ್ಪಡೆಗೆ ಬ್ರೇಕ್ ಬಿದ್ದಿತ್ತು.

3 /5

ಹಂಗಾಮಿ ಸಭಾಪತಿ ಆಯ್ಕೆಯಾದ ಬಳಿಕ ಪರಿಷತ್ ಸದಸ್ಯತ್ವಕ್ಕೆ ಹೊರಟ್ಟಿ ರಾಜೀನಾಮೆ ಸಲ್ಲಿಸಿದರು. 

4 /5

ಇಂದು ಸಿಎಂ ಮತ್ತು ಪಕ್ಷದ ರಾಜ್ಯಾಧ್ಯಕ್ಷರ ಪ್ರವಾಸದ ಕಾರ್ಯಕ್ರಮ ಹಿನ್ನೆಲೆ ಸಿಎಂ ನಿವಾಸದಲ್ಲಿ ಸರಳವಾಗಿ ಪಕ್ಷ ಸೇರ್ಪಡೆಯಾದರು.

5 /5

ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.