ಆವಕಾಡೊದಲ್ಲಿ ವಿಟಮಿನ್ ಎ, ಬಿ, ಇ, ಫೈಬರ್, ಖನಿಜಗಳು ಮತ್ತು ಪ್ರೋಟೀನ್ ಸಮೃದ್ಧವಾಗಿದೆ. ಆವಕಾಡೊದಲ್ಲಿ ಸಕ್ಕರೆಯ ಪ್ರಮಾಣವು ತುಂಬಾ ಕಡಿಮೆ ಇರುತ್ತದೆ.
ನವದೆಹಲಿ : ಹೆಚ್ಚಿನ ಜನರು ಆವಕಾಡೊ ಒಂದು ಜನಪ್ರಿಯ ಹಣ್ಣು ಎಂದಷ್ಟೇ ತಿಳಿದಿರುತ್ತಾರೆ. ಆದರೆ ತಿನ್ನಲು ಮುಂದಾಗುವುದಿಲ್ಲ. ನಿಮ್ಮ ದೈನಂದಿನ ಆಹಾರದಲ್ಲಿ ಆವಕಾಡೊವನ್ನು ಸೇರಿಸದಿದ್ದರೆ, ಇಂದಿನಿಂದಲೇ ಅದನ್ನು ತಿನ್ನಲು ಪ್ರಾರಂಭಿಸಿ. ಏಕೆಂದರೆ, ಈ ಸೂಪರ್‌ಫುಡ್ ನಿಮ್ಮ ಆರೋಗ್ಯಕ್ಕೆ ಹಲವು ರೀತಿಯಲ್ಲಿ ಪ್ರಯೋಜನವನ್ನು ನೀಡುತ್ತದೆ ಮತ್ತು ರೋಗಗಳನ್ನು ದೂರವಿರಿಸುತ್ತದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ
ಆವಕಾಡೊದಲ್ಲಿ ವಿಟಮಿನ್ ಎ, ಬಿ, ಇ, ಫೈಬರ್, ಖನಿಜಗಳು ಮತ್ತು ಪ್ರೋಟೀನ್ ಸಮೃದ್ಧವಾಗಿದೆ. ಆವಕಾಡೊದಲ್ಲಿ ಸಕ್ಕರೆಯ ಪ್ರಮಾಣವು ತುಂಬಾ ಕಡಿಮೆ ಇರುತ್ತದೆ. ಇದು ಶಕ್ತಿಯ ಉತ್ತಮ ಮೂಲವಾಗಿದೆ. ಅಧಿಕ ಕೊಬ್ಬು ಮತ್ತು ಕಡಿಮೆ ಕಾರ್ಬ್ ಆಹಾರವಾಗಿರುವ ಅವಕಾಡೊ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಆವಕಾಡೊವನ್ನು ತಿನ್ನುವುದರಿಂದ ತೂಕ ನಷ್ಟ, ಅಧಿಕ ರಕ್ತದೊತ್ತಡ, ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ. ಇದು ಹೃದಯದ ಆರೋಗ್ಯಕ್ಕೆ ಪ್ರಯೋಜನಕಾರಿ. ಇದು ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುವ ಮೊನೊಸಾಚುರೇಟೆಡ್ ಕೊಬ್ಬನ್ನು ಹೊಂದಿರುತ್ತದೆ. ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸುವಲ್ಲಿ ಇದು ಪರಿಣಾಮಕಾರಿ .
ಆವಕಾಡೊದಲ್ಲಿ ಕ್ಯಾಲ್ಸಿಯಂ ಮತ್ತು ಪೊಟ್ಯಾಸಿಯಮ್ ಸಮೃದ್ಧವಾಗಿದೆ. ಇದರ ಜೊತೆಗೆ ಆ್ಯಂಟಿಆಕ್ಸಿಡೆಂಟ್‌ಗಳು, ವಿಟಮಿನ್ ಬಿ 6, ಎ, ಇ ಮತ್ತು ಸಿ ಕೂಡಾ ಇರುತ್ತದೆ. ಅದೇ ಸಮಯದಲ್ಲಿ, ಇದು ಉತ್ತಮ ಪ್ರಮಾಣದ ಫೈಬರ್ ಅನ್ನು ಹೊಂದಿರುತ್ತದೆ ಅದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ.
ಆವಕಾಡೊ ತೂಕ ನಷ್ಟ ಮಾಡುವ ಪ್ರಕ್ರಿಯೆಯಲ್ಲಿಯೂ ಸಹಾಯ ಮಾಡುತ್ತದೆ. ಇದನ್ನು ತಿನ್ನುವುದರಿಂದ ದೇಹಕ್ಕೆ ಶಕ್ತಿ ಸಿಗುತ್ತದೆ. ದೀರ್ಘಕಾಲದವರೆಗೆ ಹಸಿವಾಗುವುದಿಲ್ಲ. ಈ ಕಾರಣದಿಂದಾಗಿ ಪದೇ ಪದೇ ತಿನ್ನುವುದು ತಪ್ಪುತ್ತದೆ.
ಆವಕಾಡೊದಲ್ಲಿರುವ ಪೋಷಕಾಂಶಗಳು ನಿಮ್ಮ ಕೂದಲು ಮತ್ತು ಚರ್ಮವನ್ನು ಆರೋಗ್ಯವಾಗಿರಿಸುತ್ತದೆ. ಆವಕಾಡೊದಲ್ಲಿ ಕಂಡುಬರುವ ವಿಟಮಿನ್ ಬಿ ಹೊಸ ಚರ್ಮದ ಕೋಶಗಳನ್ನು ಉತ್ಪಾದಿಸುವಲ್ಲಿ ಸಹಾಯಕವಾಗಿದೆ. ಅದರಿಂದ ಮಾಡಿದ ಫೇಸ್ ಪ್ಯಾಕ್ ಚರ್ಮವನ್ನು ಆರೋಗ್ಯವಾಗಿರಿಸುತ್ತದೆ. ಇದನ್ನು ಕ್ರೀಮ್‌ಗಳು, ಕ್ಲೆನ್ಸರ್‌ಗಳು ಮತ್ತು ಶಾಂಪೂಗಳಂತಹ ಅನೇಕ ಉತ್ಪನ್ನಗಳಲ್ಲಿಯೂ ಬಳಸಲಾಗುತ್ತದೆ.