Vastu Tips: ಸುಖ-ಶಾಂತಿ, ನೆಮ್ಮದಿಗಾಗಿ ನಮ್ಮ ದೈನಂದಿನ ಜೀವನದಲ್ಲಿ ವಾಸ್ತು ಸಲಹೆಗಳನ್ನು ಅನುಸರಿಸುವುದು ಅತ್ಯಗತ್ಯ.
Vastu For Sleeping: ಹಿಂದೂ ಧರ್ಮದಲ್ಲಿ ಜ್ಯೋತಿಷ್ಯ ಶಾಸ್ತ್ರದಂತೆ ವಾಸ್ತು ಶಾಸ್ತ್ರಕ್ಕೂ ಬಹಳ ಪ್ರಾಮುಖ್ಯತೆ ಇದೆ. ದೈನಂದಿನ ಬದುಕಿನಲ್ಲಿ ವಾಸ್ತು ನಿಯಮಗಳನ್ನು ಅಳವಡಿಸಿಕೊಳ್ಳುವುದರಿಂದ ಸುಖ-ಶಾಂತಿ, ನೆಮ್ಮದಿಯ ಬದುಕು ನಮ್ಮದಾಗುತ್ತದೆ ಎಂಬ ನಂಬಿಕೆ ಇದೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ವಾಸ್ತು ಶಾಸ್ತ್ರದಲ್ಲಿ, ಮನೆಯಲ್ಲಿ ಯಾವ ದಿಕ್ಕಿನಲ್ಲಿ ಯಾವ ಕೋಣೆ ಇರಬೇಕು. ಯಾವ ದಿಕ್ಕಿನಲ್ಲಿ ಯಾವ ವಸ್ತುಗಳನ್ನು ಇಡಬೇಕು. ಯಾವ ದಿಕ್ಕಿಗೆ ಕುಳಿತು ಊಟ ಮಾಡಬೇಕು ಎಂಬಿತ್ಯಾದಿ ವಿಷಯಗಳನ್ನು ಪ್ರಸ್ತಾಪಿಸಲಾಗಿದೆ. ಅಷ್ಟೇ ಅಲ್ಲ, ಆಯುರ್ ಆರೋಗ್ಯಕ್ಕಾಗಿ ಯಾವ ದಿಕ್ಕಿನಲ್ಲಿ ಮಲಗಬೇಕು ಎಂಬ ಬಗ್ಗೆಯೂ ತಿಳಿಸಲಾಗಿದೆ.
ವಾಸ್ತು ಶಾಸ್ತ್ರದ ಪ್ರಕಾರ, ಉತ್ತಮ ಆರೋಗ್ಯಕ್ಕಾಗಿ ನಾವು ಯಾವ ಆಹಾರವನ್ನು ತೆಗೆದುಕೊಳ್ಳಬೇಕು ಎಂದು ಯೋಚಿಸುವಂತೆ, ನಾವು ಯಾವ ದಿಕ್ಕಿನಲ್ಲಿ ಮಲಗಬೇಕು ಎಂಬುದನ್ನು ಅರಿಯುವುದು ಸಹ ತುಂಬಾ ಅಗತ್ಯ.
ವಾಸ್ತು ಶಾಸ್ತ್ರದ ಪ್ರಕಾರ, ರಾತ್ರಿ ವೇಳೆ ಸರಿಯಾದ ದಿಕ್ಕಿನಲ್ಲಿ ತಲೆಯಿಟ್ಟು ಮಲಗುವುದರಿಂದ ನೆಮ್ಮದಿಯ ನಿದ್ರೆ ಬರುವ ಜೊತೆಗೆ ಆರೋಗ್ಯವೂ ಉತ್ತಮವಾಗಿರುತ್ತದೆ. ಅಂತೆಯೇ, ತಪ್ಪು ದಿಕ್ಕಿನಲ್ಲಿ ತಲೆಯಿಟ್ಟು ಮಲಗಿದರೆ ನಿದ್ರೆಗೆ ಭಂಗವಾಗುವುದರ ಜೊತೆಗೆ ಇದು ಜೀವನದಲ್ಲೂ ನಾನಾ ರೀತಿಯ ಸಮಸ್ಯೆಗಳನ್ನು ತಂದೊಡ್ಡಬಹುದು ಎಂದು ಹೇಳಲಾಗಿದೆ.
ವಾಸ್ತು ಪ್ರಕಾರ, ಪೂರ್ವ ದಿಕ್ಕಿಗೆ ತಲೆ ಹಾಕಿ ಮಲಗುವುದರಿಂದ ಉತ್ತಮ ನಿದ್ರೆ ಬರುವುದರ ಜೊತೆಗೆ ವ್ಯಕ್ತಿಯ ನೆನಪಿನ ಶಕ್ತಿಯೂ ಹೆಚ್ಚಾಗುತ್ತದೆ.
ವಾಸ್ತು ಶಾಸ್ತ್ರದ ಪ್ರಕಾರ, ಪಶ್ಚಿಮ ದಿಕ್ಕಿನಲ್ಲಿ ತಲೆ ಹಾಕಿ ಮಲಗುವುದು ಅಷ್ಟು ಉತ್ತಮವಲ್ಲ. ಇದರಿಂದ ಜೀವನದಲ್ಲಿ ಶಾಂತಿಗೆ ಭಂಗವಾಗುತ್ತದೆ.
ವಾಸ್ತು ಪ್ರಕಾರ, ನಿತ್ಯ ಈಶಾನ್ಯ ದಿಕ್ಕಿನಲ್ಲಿ ತಲೆಯಿಟ್ಟು ಮಲಗುವುದರಿಂದ ವ್ಯಕ್ತಿಯು ಸಾಲದ ಸುಳಿಯಲ್ಲಿ ಸಿಲುಕುತ್ತಾನೆ. ಮಾತ್ರವಲ್ಲ, ಕೌಟುಂಬಿಕ ಕಲಹಗಳು ಸಹ ಹೆಚ್ಚಾಗುತ್ತವೆ.
ವಾಸ್ತು ಪ್ರಕಾರ, ದಕ್ಷಿಣ ದಿಕ್ಕನ್ನು ಮಲಗಲು ಪ್ರಾಶಸ್ತ್ಯವಾದ ದಿಕ್ಕು ಎಂದು ಹೇಳಲಾಗುತ್ತದೆ. ಈ ದಿಕ್ಕಿನಲ್ಲಿ ತಲೆಯಿಟ್ಟು ಮಲಗುವುದರಿಂದ ನೆಮ್ಮದಿಯ ನಿದ್ರೆಯಷ್ಟೇ ಅಲ್ಲ ವ್ಯಕ್ತಿ ಉತ್ತಮ ಆರೋಗ್ಯವನ್ನು ಅನುಭವಿಸುವನು. ಜೀವನದಲ್ಲಿ ಸುಖ-ನೆಮ್ಮದಿಗೆ ಕೊರತೆಯೇ ಇರುವುದಿಲ್ಲ. ಅಪಾರ ಕೀರ್ತಿ, ಯಶಸ್ಸು ಇವರನ್ನು ಹಿಂಬಾಲಿಸುತ್ತದೆ.
ವಾಸ್ತು ಶಾಸ್ತ್ರದ ಪ್ರಕಾರ, ಅಪ್ಪಿತಪ್ಪಿಯೂ ಸಹ ಉತ್ತರ ದಿಕ್ಕಿನಲ್ಲಿ ತಲೆಯಿಟ್ಟು ಮಲಗಲೇಬಾರದು. ಈ ದಿಕ್ಕಿನಲ್ಲಿ ಮಲಗುವುದರಿಂದ ಆರೋಗ್ಯ ಸಮಸ್ಯೆ ಹೆಚ್ಚಾಗುತ್ತದೆ. ವ್ಯಕ್ತಿಯ ಜೀವನದಲ್ಲಿ ಅಶಾಂತಿ ಹೆಚ್ಚುತ್ತದೆ. ಜೊತೆಗೆ ಆಯಸ್ಸು ಕಡಿಮೆಯಾಗುತ್ತದೆ. ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.