ಮಧುಮೇಹ ರೋಗಿಗಳಿಗೆ ಅಮೃತವಿದ್ದಂತೆ ಈ ಐದು ಆಹಾರಗಳು .!

Diabetes Control Tips :ಮಧುಮೇಹ ಕಾಯಿಲೆ ಅನೇಕರಲ್ಲಿ ಅನುವಂಶಿಕವಾಗಿ ಕಾಣಿಸಿಕೊಳ್ಳುತ್ತದೆ. ಹೆಚ್ಚಿನ ಸಂದರ್ಭಗಳಲ್ಲಿ ಇದು ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದಾಗಿ  ಎದುರಾಗುವ ಸಮಸ್ಯೆ ಕೂಡಾ ಹೌದು. 
 

Diabetes Control Tips : ಮಧುಮೇಹ ಕಾಯಿಲೆ ಅನೇಕರಲ್ಲಿ ಅನುವಂಶಿಕವಾಗಿ ಕಾಣಿಸಿಕೊಳ್ಳುತ್ತದೆ. ಹೆಚ್ಚಿನ ಸಂದರ್ಭಗಳಲ್ಲಿ ಇದು ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದಾಗಿ  ಎದುರಾಗುವ ಸಮಸ್ಯೆ ಕೂಡಾ ಹೌದು. ಇದರಲ್ಲಿ, ದೇಹವು ಇನ್ಸುಲಿನ್ ಅನ್ನು ಸರಿಯಾದ ಪ್ರಮಾಣದಲ್ಲಿ ಮಾಡಲು ಸಾಧ್ಯವಾಗುವುದಿಲ್ಲ. ಅಥವಾ ಅದನ್ನು ಸರಿಯಾಗಿ ಬಳಸಲು ಸಾಧ್ಯವಾಗುವುದಿಲ್ಲ. ಈ ಕಾರಣದಿಂದಾಗಿ ಅಧಿಕ ರಕ್ತದೊತ್ತಡ, ದೃಷ್ಟಿ ನಷ್ಟ, ಮೂತ್ರಪಿಂಡದ ಕಾಯಿಲೆಯಂತಹ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಇದನ್ನು ತಪ್ಪಿಸಲು, ಮಧುಮೇಹ ರೋಗಿಗಳು, ಈ ಕೆಳಗಿನ ಆಹಾರ ಪದಾರ್ಥಗಳನ್ನು  ನಿತ್ಯ 
ಸೇವಿಸಬಹುದು. 

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

 ಎಡಿಬಲ್  ಸೀಡ್ಸ್ ಮಧುಮೇಹ ರೋಗಿಗಳಿಗೆ ಅಮೃತವಿದ್ದಂತೆ. ಎಲ್ಲಾ ರೀತಿಯ ಪೋಷಕಾಂಶಗಳು ಇದರಲ್ಲಿ ಕಂಡುಬರುತ್ತವೆ. ಇದು ಫೈಬರ್ ಮತ್ತು ಆಂಟಿಆಕ್ಸಿಡೆಂಟ್‌ಗಳನ್ನು ಒಳಗೊಂಡಿರುತ್ತದೆ. ಈ ಕಾರಣದಿಂದಾಗಿ,  ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಚಿಯಾ ಬೀಜಗಳು, ಅಗಸೆ ಬೀಜಗಳು ಮತ್ತು ಕುಂಬಳಕಾಯಿ ಬೀಜಗಳನ್ನು ಆಹಾರದಲ್ಲಿ ಸೇರಿಸಿಕೊಳ್ಳಬಹುದು.  

2 /5

ಮೊಸರು ಹಾಲಿನ ಉತ್ಪನ್ನವಾಗಿದ್ದು ಅದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಇದು ಪ್ರೋಬಯಾಟಿಕ್‌ಗಳಲ್ಲಿ ಸಮೃದ್ಧವಾಗಿದದ್ದು, ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

3 /5

ಡ್ರೈ ಫ್ರುಟ್ಸ್  ನಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ.  ಅವುಗಳಲ್ಲಿ ಫೈಬರ್, ಆರೋಗ್ಯಕರ ಕೊಬ್ಬು ಮತ್ತು ಜೀವಸತ್ವಗಳು ಹೇರಳವಾಗಿ ಕಂಡು ಬರುತ್ತವೆ. ಅದಕ್ಕಾಗಿಯೇ ಮಧುಮೇಹ ರೋಗಿಗಳು ಡ್ರೈ ಫ್ರುಟ್ಸ್  ಅನ್ನು ಹೆಚ್ಚಾಗಿ ತಿನ್ನುವಂತೆ ಸಲಹೆ ನೀಡಲಾಗುತ್ತದೆ. ಇದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು.

4 /5

ಕೊಬ್ಬಿನಾಂಶ ಇರುವ  ಮೀನುಗಳಲ್ಲಿ ಒಮೆಗಾ-3 ಕೊಬ್ಬಿನಾಮ್ಲಗಳು ಸಮೃದ್ಧವಾಗಿರುತ್ತವೆ. ಇದನ್ನು ಐಕೋಸಾಪೆಂಟೆನೊಯಿಕ್ ಆಮ್ಲ ಮತ್ತು ಡೊಕೊಸಾಹೆಕ್ಸಾನೊಯಿಕ್ ಆಮ್ಲ ಎಂದು ಕರೆಯಲಾಗುತ್ತದೆ. ಇವುಗಳಲ್ಲಿರುವ ಬಹುಅಪರ್ಯಾಪ್ತ ಮತ್ತು ಮೊನೊಸಾಚುರೇಟೆಡ್ ಕೊಬ್ಬುಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.   

5 /5

ಬೇಸಿಗೆಯಲ್ಲಿ ದೇಹವನ್ನು ಹೈಡ್ರೇಟ್ ಮಾಡಲು  ಎಳ ನೀರನ್ನು ಹೆಚ್ಚಾಗಿ ಬಳಸುತ್ತೇವೆ. ಆದರೆ ಮಧುಮೇಹ ರೋಗಿಗಳಿಗೆ ಇದು ತುಂಬಾ ಪ್ರಯೋಜನಕಾರಿ.  ಏಕೆಂದರೆ ಅದರ ಗ್ಲೈಸೆಮಿಕ್ ಸೂಚ್ಯಂಕವು ತುಂಬಾ ಕಡಿಮೆಯಾಗಿರುತ್ತದೆ. ಇದು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಹೆಚ್ಚಿಸಲು  ಅವಕಾಶ ನೀಡುವುದಿಲ್ಲ. ದೇಹಕ್ಕೆ ತ್ವರಿತ ಶಕ್ತಿಯನ್ನು ಕೂಡಾ ನೀಡಲು ಸಹಾಯ ಮಾಡುತ್ತದೆ.   ( ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು, ದಯವಿಟ್ಟು ವೈದ್ಯಕೀಯ ಸಲಹೆಯನ್ನು ಪಡೆಯಿರಿ. ZEE NEWS ಇದನ್ನು ಖಚಿತಪಡಿಸುವುದಿಲ್ಲ.)