ಬೇರೆಲ್ಲಾ ಋತುಗಳಿಗಿಂತ ಬೇಸಿಗೆ ಕಾಲದಲ್ಲಿ ಜೀರ್ಣಕಾರಿ ಸಂಬಂಧಿತ ಸಮಸ್ಯೆಗಳು ಹೆಚ್ಚಾಗುತ್ತವೆ. ಆದರೆ, ನಿಮ್ಮ ದೈನಂದಿನ ಆಹಾರದಲ್ಲಿ ಕೆಲವು ತರಕಾರಿಗಳ ಸೇವನೆಯಿಂದ ನೀವು ಈ ಸಮಸ್ಯೆಗೆ ಸುಲಭ ಪರಿಹಾರ ಪಡೆಯಬಹುದು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನೀವು ಗ್ಯಾಸ್ಟ್ರಿಕ್, ಎದೆಯುರಿಯಂತಹ ಸಮಸ್ಯೆಗಳನ್ನು ಎದುರಿಸುತ್ತಿದ್ದೀರಾ? ಹೌದು, ಎಂದಾದರೆ, ಬೇಸಿಗೆಯಲ್ಲಿ ಈ 5 ತರಕಾರಿಗಳನ್ನು ಸೇರಿಸಿ, ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳಿಂದ ಪರಿಹಾರ ಪಡೆಯಬಹುದು. ಆ ತರಕಾರಿಗಳು ಯಾವುವೆಂದರೆ...
ಬಾಟಲ್ ಸೋರೆಕಾಯಿ ರುಚಿಕರವಾದ ತರಕಾರಿ ಮಾತ್ರವಲ್ಲ, ಇದಾರಲ್ಲಿರುವ ನೀರು ಮತ್ತು ಫೈಬರ್ ಜೀರ್ಣಕ್ರಿಯೆಗೆ ತುಂಬಾ ಪ್ರಯೋಜನಕಾರಿ ಆಗಿದೆ. ಬೇಸಿಗೆಯಲ್ಲಿ ಈ ತರಕಾರಿ ತಿನ್ನುವುದರಿಂದ ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳಿಂದ ಪರಿಹಾರ ಪಡೆಯಬಹುದು.
ಸಾಮಾನ್ಯವಾಗಿ ಬೇಸಿಗೆಯಲ್ಲಿ ಕೆಲವರು ಹಾಗಲಕಾಯಿ ತಿನ್ನುವುದಿಲ್ಲ. ಆದರೆ, ಹಾಗಲಕಾಯಿಯಲ್ಲಿರುವ ಜೀರ್ಣಕಾರಿ ಕಿಣ್ವಗಳನ್ನು ಉತ್ತೇಜಿಸುವ ಗುಣ ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳಿಂದ ಸುಲಭ ಪರಿಹಾರ ನೀಡಬಲ್ಲದು.
ಪಾಲಕ್ ಸೊಪ್ಪು ಕಬ್ಬಿಣ ಮತ್ತು ಫೋಲಿಕ್ ಆಮ್ಲದ ಸಮೃದ್ಧ ಮೂಲವಾಗಿದ್ದು, ಉತ್ತಮ ಪ್ರಮಾಣದ ಫೈಬರ್ ಅನ್ನು ಕೂಡ ಒಳಗೊಂಡಿದೆ. ಬೇಸಿಗೆಯಲ್ಲಿ ಪಾಲಕ್ ಸೊಪ್ಪಿನ ಬಳಕೆಯಿಂದ ಹಲವು ಆರೋಗ್ಯ ಸಂಬಂಧಿತ ಸಮಸ್ಯೆಗಳಿಂದ ದೂರ ಉಳಿಯಬಹುದು.
ಸೌತೆಕಾಯಿಯಲ್ಲಿ ನೀರು ಮತ್ತು ಖನಿಜಗಳು ಹೇರಳವಾಗಿದ್ದು, ಬೇಸಿಗೆಯಲ್ಲಿ ಇದರ ಬಳಕೆಯೂ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.
ಟೊಮೆಟೊದಲ್ಲಿರುವ ಫೈಬರ್ ಮತ್ತು ಆಂಟಿಆಕ್ಸಿಡೆಂಟ್ಗಳು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುತ್ತದೆ. ಇದಲ್ಲದೆ, ಇದು ಹೊಟ್ಟೆ ಹುಣ್ಣಿನ ಸಮಸ್ಯೆಗೂ ಪ್ರಯೋಜನಕಾರಿ ಆಗಿದೆ. ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.