ಬೆಂಗಳೂರು : ಜ್ಯೋತಿಷ್ಯದ ಪ್ರಕಾರ, ಯಾವುದೇ ಗ್ರಹದ ರಾಶಿ ಬದಲಾವಣೆಯು ಎಲ್ಲಾ 12 ರಾಶಿಗಳ ಜೀವನದ ಮೇಲೆ ಪರಿಣಾಮ ಬೀರುತ್ತದೆ. ಒಂದು ಗ್ರಹವು ಸಂಕ್ರಮಿಸಿದಾಗ, ಇತರ ಗ್ರಹಗಳೊಂದಿಗೆ ಅದರ ಸಂಯೋಗವು ಅನೇಕ ರಾಶಿಯವರ ಮೇಲೆ ಪರಿಣಾಮ ಬೀರುತ್ತದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಶನಿಯು ಜನವರಿ 17 ರಂದು ತನ್ನದೇ ಆದ ಕುಂಭ ರಾಶಿಯನ್ನು ಪ್ರವೇಶಿಸಿದೆ. ಛಾಯಾ ಗ್ರಹ ರಾಹು ಮೇಷದಲ್ಲಿ ಮತ್ತು ಕೇತು ತುಲಾದಲ್ಲಿ ಕುಳಿತಿದೆ. ಏಪ್ರಿಲ್ 22 ರಂದು ಗುರು ಬೃಹಸ್ಪತಿ ಕೂಡಾ ಮೇಷ ರಾಶಿಗೆ ಪ್ರವೇಶಿಸಲಿದ್ದಾರೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಇಂತಹ ಪರಿಸ್ಥಿತಿಯಲ್ಲಿ ಗಜಲಕ್ಷ್ಮಿ ಯೋಗ ರೂಪುಗೊಳ್ಳುತ್ತಿದೆ. ಇದರೊಂದಿಗೆ ಸೂರ್ಯ ಮತ್ತು ಗುರುಗಳ ಸಂಯೋಗದಿಂದ ನವಮ-ಪಂಚಮ ಯೋಗವೂ ಬುಧ-ಸೂರ್ಯನ ಸಂಯೋಗದಿಂದ ಬುಧಾದಿತ್ಯ ಯೋಗವೂ ರೂಪುಗೊಳ್ಳುತ್ತಿದೆ. ಈ ಯೋಗಗಳು ಅನೇಕ ರಾಶಿಯವರ ಜೀವನದಲ್ಲಿ ಸಂತೋಷದ ಹೊನಲು ಹರಿಸುತ್ತದೆ.
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಮೇಷ ರಾಶಿಯಲ್ಲಿ ಗುರುವಿನ ಸಂಚಾರವು ಈ ರಾಶಿಯ ಜನರ ಜೀವನದಲ್ಲಿ ಸಂತೋಷವನ್ನು ತರುತ್ತದೆ. ಈ ಸಮಯದಲ್ಲಿ, ರಾಶಿಯ ಮೊದಲ ಮನೆಯಲ್ಲಿ ರಾಹು, ಸೂರ್ಯ, ಗುರು ಮತ್ತು ಬುಧಗಳ ಸಂಯೋಗವು ನಡೆಯುತ್ತದೆ. ಈ ಅಪರೂಪದ ಸಂಯೋಜನೆಯು ಈ ರಾಶಿಯವರನ್ನು ಒಮ್ಮೆಲೇ ಶ್ರೀಮಂತರನ್ನಾಗಿ ಮಾಡುತ್ತದೆ. ಎಲ್ಲಾ ಕ್ಷೇತ್ರಗಳಲ್ಲಿ ಯಶಸ್ಸು ಪಡೆಯುವುದು ಸಾಧ್ಯವಾಗುತ್ತದೆ.
ಮಿಥುನ ರಾಶಿಯಲ್ಲಿ ರಾಹು, ಸೂರ್ಯ, ಬುಧ ಮತ್ತು ಗುರುಗಳ ಸಂಯೋಜನೆಯು ಅನುಕೂಲಕರ ಪರಿಸ್ಥಿತಿಯನ್ನು ಸೃಷ್ಟಿಸುತ್ತದೆ. ಇದು ಈ ರಾಶಿಯ 11 ನೇ ಮನೆಯಲ್ಲಿ ಈ ಮೈತ್ರಿಯು ಸಂಭವಿಸಲಿದೆ. ಇಷ್ಟು ಮಾತ್ರವಲ್ಲದೆ ಈ ಅವಧಿಯಲ್ಲಿ ಅನೇಕರು ವಿಶೇಷ ಪ್ರಯೋಜನಗಳನ್ನು ಪಡೆಯುತ್ತಾರೆ. ಇದರೊಂದಿಗೆ, ಈ ರಾಶಿಯವರು ವ್ಯವಹಾರದಲ್ಲಿ ಅಪಾರ ಯಶಸ್ಸನ್ನು ಪಡೆಯುತ್ತಾರೆ. ಹೆಚ್ಚಿನ ಆರ್ಥಿಕ ಲಾಭವಾಗುತ್ತದೆ.
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ಯೋಗವು ಮಕರ ರಾಶಿಯ ನಾಲ್ಕನೇ ಮನೆಯಲ್ಲಿ ರೂಪುಗೊಳ್ಳಲಿದೆ. ಅಂತಹ ಪರಿಸ್ಥಿತಿಯಲ್ಲಿ, ಈ ರಾಶಿಯ ಜನರು ಆರ್ಥಿಕ ಮತ್ತು ಮಾನಸಿಕ ಶಕ್ತಿಯನ್ನು ಪಡೆಯುತ್ತಾರೆ. ವಾಹನ, ಭೂಮಿ ಇತ್ಯಾದಿಗಳನ್ನು ಖರೀದಿಸುವ ಸಾಧ್ಯತೆಯೂ ಇದೆ. ಉದ್ಯೋಗದಲ್ಲಿ ಬಡ್ತಿ ಸಿಗುವ ಸಾಧ್ಯತೆ ಇದೆ.
ಈ ಗ್ರಹಗಳ ಸಂಯೋಗವು ಸಿಂಹದ ಒಂಬತ್ತನೇ ಮನೆಯಲ್ಲಿ ಸಂಭವಿಸಲಿದೆ. ಈ ರಾಶಿಯ ಜನರು ಅದೃಷ್ಟದ ಸಂಪೂರ್ಣ ಬೆಂಬಲ ಪಡೆಯುತ್ತಾರೆ. ಪ್ರತಿಯೊಂದು ಕ್ಷೇತ್ರದಲ್ಲಿಯೂ ಯಶಸ್ಸಿನ ಜೊತೆಗೆ ಪ್ರಗತಿಯನ್ನೂ ಸಾಧಿಸುವಿರಿ. ಸಾಲದಿಂದ ಮುಕ್ತಿ ಹೊಂದಿ ದಾಂಪತ್ಯ ಜೀವನ ಸುಖಮಯವಾಗಿರುತ್ತದೆ.
ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಈ ಗ್ರಹಗಳ ಮೈತ್ರಿಯು ಮೀನ ರಾಶಿಯ ಎರಡನೇ ಮನೆಯಲ್ಲಿ ರೂಪುಗೊಳ್ಳುತ್ತದೆ. ಈ ರಾಶಿಯ ಜನರು ಆರ್ಥಿಕ ಲಾಭವನ್ನು ಪಡೆಯುತ್ತಾರೆ. ಇವರ ಆರೋಗ್ಯ ಚೆನ್ನಾಗಿರುತ್ತದೆ. ಜವಾಬ್ದಾರಿಗಳು ಹೆಗಲೇರಲಿವೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಜನರು ಈ ಅವಧಿಯಲ್ಲಿ ಯಶಸ್ಸನ್ನು ಪಡೆಯುತ್ತಾರೆ. ( ಸೂಚನೆ : ಇಲ್ಲಿ ನೀಡಲಾದ ಲೇಖನವು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಅದನ್ನು ಖಚಿತಪಡಿಸುವುದಿಲ್ಲ.)