ವಕ್ರಿ ಬುಧನಿಂದಾಗಿ ನಾಳೆಯಿಂದ ಈ 3 ರಾಶಿಯವರ ಬಾಳೆ ಬಂಗಾರ, ಧನ-ಸಂಪತ್ತು ಪ್ರಾಪ್ತಿ

Budha Vakri: ಜ್ಯೋತಿಷ್ಯ ಶಾಸ್ತ್ರದಲ್ಲಿ ಗ್ರಹಗಳ ರಾಜಕುಮಾರನೆಂದೇ ಕರೆಯಲ್ಪಡುವ ಬುಧನು ನಾಳೆಯಿಂದ ತನ್ನ ಹಿಮ್ಮುಖ ಚಲನೆಯನ್ನು ಆರಂಭಿಸಲಿದ್ದಾನೆ. ಬುಧನ ಹಿಮ್ಮುಖ ಚಲನೆ ಎಲ್ಲಾ ರಾಶಿಯವರ ಮೇಲೆ ಮಹತ್ವದ ಪರಿಣಾಮ ಬೀರುತ್ತದೆ. ಆದರೆ, ಈ ಸಮಯದಲ್ಲಿ ಕೆಲವು ರಾಶಿಯವರಿಗೆ ಭಾರೀ ಅದೃಷ್ಟ ಎಂದು ಹೇಳಲಾಗುತ್ತಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್

1 /6

ಜ್ಯೋತಿಷ್ಯ ಶಾಸ್ತ್ರದಲ್ಲಿ ಬುದ್ಧಿವಂತಿಕೆ, ತಾರ್ಕಿಕ ಸಾಮರ್ಥ್ಯ, ವ್ಯವಹಾರ, ಮಾತಿನ ಅಂಶ ಎಂದು ಪರಿಗಣಿಸಲ್ಪಟ್ಟಿರುವ ಗ್ರಹ ಬುಧ ಗ್ರಹ. ಇದನ್ನು ಗ್ರಹಗಳ ರಾಜಕುಮಾರ ಎಂತಲೂ ಕರೆಯಲಾಗುತ್ತದೆ. ಪ್ರಸ್ತುತ, ಸಿಂಹ ರಾಶಿಯಲ್ಲಿರುವ ಬುಧನು ನಾಳೆ ಆಗಸ್ಟ್ 24ರಂದು  ಹಿಮ್ಮುಖ ಚಲನೆಯನ್ನು ಆರಂಭಿಸಲಿದ್ದಾನೆ. 

2 /6

ವೈದಿಕ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಬುಧನ ಇಮ್ಮುಖ ಚಲನೆಯು ದ್ವಾದಶ ರಾಶಿಗಳ ಜನರ ಸಂಪತ್ತು, ವ್ಯವಹಾರ, ಮಾತು, ಬುದ್ಧಿವಂತಿಕೆಯ ಮೇಲೆ ಮಹತ್ವದ ಪರಿಣಾಮವನ್ನು ಬೀರುತ್ತದೆ. ಇದೀಗ ನಾಳೆಯಿಂದ ಆರಂಭವಾಗಲಿರುವ ಬುಧನ ಹಿಮ್ಮುಖ ಚಲನೆಯು ಕೆಲವು ರಾಶಿಯವರ ಜೀವನದಲ್ಲಿ ಚಂಡಮಾರುತವನ್ನೇ ಸೃಷ್ಟಿಸಲಿದ್ದರೆ, ಇನ್ನೂ ಕೆಲ ರಾಶಿಯವರ ಜೀವನದಲ್ಲಿ ಬಂಗಾರದ ಸಮಯವನ್ನು ತರಲಿದೆ ಎಂದು ಹೇಳಲಾಗುತ್ತಿದೆ. 

3 /6

ಜ್ಯೋತಿಷ್ಯದ ಪ್ರಕಾರ, ಆಗಸ್ಟ್ 24ರಿಂದ ಬುಧನ ಹಿಮ್ಮುಖ ಚಲನೆಯು ಮೂರು ರಾಶಿಯವರ ಜೀವನದಲ್ಲಿ ಅದೃಷ್ಟದ ಬಾಗಿಲುಗಳನ್ನು ತೆರೆಯಲಿದ್ದು, ಸಂಪತ್ತಿನ ಹೊಳೆಯನ್ನು ಹರಿಸಲಿದ್ದಾನೆ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳು ಯಾವುವು ಎಂದು ತಿಳಿಯೋಣ... 

4 /6

ಬುಧನ ಹಿಮ್ಮುಖ ಚಲನೆಯ ಪ್ರಭಾವದಿಂದಾಗಿ ಮಿಥುನ ರಾಶಿಯವರ ಜೀವನದಲ್ಲಿ ಮಂಗಳಕರ ಫಲಗಳನ್ನು ತರಲಿದೆ. ಈ ಸಂದರ್ಭದಲ್ಲಿ ನಿಮ್ಮ ಹಣಕಾಸಿನ ಮೂಲಗಳು ವೃದ್ಧಿಯಾಗಲಿದ್ದು, ಹಳೆಯ ಹೂಡಿಕೆಗಳಿಂದಲೂ ಭರ್ಜರಿ ಲಾಭವಾಗಲಿದೆ. ಉದ್ಯೋಗ ಸ್ಥಳದಲ್ಲಿ ಮೇಲಾಧಿಕಾರಿಗಳು ನಿಮ್ಮ ಕೆಲಸಕ್ಕೆ ಮನ್ನಣೆಯನ್ನು ನೀಡುವರು. ಒಟ್ಟಾರೆಯಾರಿ ಈ ಸಮಯದಲ್ಲಿ ನೀವು ಸರ್ವತೋಮುಖ ಪ್ರಗತಿಯನ್ನು ಕಾಣುವಿರಿ. 

5 /6

ಕನ್ಯಾ ರಾಶಿಯ ಅಧಿಪತಿ ಗ್ರಹವೂ ಆಗಿರುವ ಬುಧನು ಹಿಮ್ಮುಖ ಚಲನೆಯನ್ನು ಆರಂಭಿಸಲಿದ್ದು ಈ ರಾಶಿಯವರಿಗೆ ಶುಭ ಫಲಗಳನ್ನು ನೀಡಲಿದ್ದಾನೆ. ಈ ಸಮಯದಲ್ಲಿ ಕನ್ಯಾ ರಾಶಿಯವರು ವೃತ್ತಿ ಜೀವನದಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭವನ್ನು ಗಳಿಸುವರು. ಇದಲ್ಲದೆ, ಹಣಕಾಸಿನ ಹೊಸ ಮೂಲಗಳು ಸೃಷ್ಟಿಯಾಗಲಿದ್ದು, ಆರ್ಥಿಕ ಸ್ಥಿತಿ ಸುಧಾರಿಸಲಿದೆ. 

6 /6

ಬುಧನ ಹಿಮ್ಮುಖ ಚಲನೆಯು ವೃಶ್ಚಿಕ ರಾಶಿಯವರ ಜೀವನದಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸಲಿದೆ. ಈ ಸಂದರ್ಭದಲ್ಲಿ ನಿಮ್ಮ ಬೇರೆಡೆ ಸಿಲುಕಿರುವ ಹಣ ಕೈ ಸೇರಲಿದೆ. ಮಾತ್ರವಲ್ಲ, ಹೊಸ ಕೆಲಸ ವ್ಯವಹಾರ ಮಾಡಲು ಪ್ರಯತ್ನಿಸುತ್ತಿರುವವರಿಗೆ ಇದು ಬಂಗಾರದ ಸಮಯ. ನಿಮ್ಮ ಕೆಲಸ ಕಾರ್ಯಗಳಲ್ಲಿ ದೊಡ್ಡ ಯಶಸ್ಸನ್ನು ಗಳಿಸುವಿರಿ. ಆದಾಯದಲ್ಲಿ ಹೆಚ್ಚಳವಾಗಲಿದ್ದು ಶೀಘ್ರದಲ್ಲೇ ಸಿರಿವಂತರಾಗುವ ಯೋಗವೂ ಇದೆ.  ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.