Budhaditya Rajyog 2024 In Pieces: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ಮೀನ ರಾಶಿಯಲ್ಲಿ ಬುಧಾದಿತ್ಯ ರಾಜಯೋಗ ನಿರ್ಮಾಣಗೊಳ್ಳುತ್ತಿದ್ದು, ಇದರಿಂದ ಕೆಲ ರಾಶಿಗಳ ಜನರಿಗೆ ಅದೃಷ್ಟ ಲಕ್ಷ್ಮಿಯ ಕೃಪೆಯಿಂದ ಧನಕುಬೇರ ನಿಧಿ ಪ್ರಾಪ್ತಿಯಾಗಲಿದೆ. (Spiritual News In Kannada)
Budhaditya Rajyog 2024 In Pices: ವೈದಿಕ ಪಂಚಾಂಗದ ಪ್ರಕಾರ ಗ್ರಹಗಳ ರಾಜಕುಮಾರ ಮಾರ್ಚ್ 7, 2024 ರಂದು ಮೀನ ರಾಶಿಗೆ ಪ್ರವೇಶಿಸಲಿದ್ದಾನೆ. ಇನ್ನೊಂದೆಡೆ ಮಾರ್ಚ್ 15 ರಂದು ಗ್ರಹಗಳ ರಾಜ ಸೂರ್ಯ ಕೂಡ ಮೀನ ರಾಶಿಗೆ ಪ್ರವೇಶಿಸುತ್ತಿದ್ದು, ಇದರಿಂದ ಮೀನ ರಾಶಿಯಲ್ಲಿ ಬುಧಾದಿತ್ಯ ರಾಜಯೋಗ ರಚನೆಯಾಗುತ್ತಿದೆ. ಇದರ ಪ್ರಭಾವ ಎಲ್ಲಾ ದ್ವಾದಶ ರಾಶಿಗಳ ಜನರ ಮೇಲೆ ಗೋಚರಿಸಲಿದೆ. ಅದರಲ್ಲಿಯೂ ಮೂರು ಅದೃಷ್ಟವಂತ ರಾಶಿಗಳಿಗೆ ಧನ ಕುಬೇರ ನಿಧಿ ಪ್ರಾಪ್ತಿಯಾಗಲಿದೆ. (Spiritual News In Kannada)
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
Budhaditya Rajyog 2024 In Pieces: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ಮೀನ ರಾಶಿಯಲ್ಲಿ ಬುಧಾದಿತ್ಯ ರಾಜಯೋಗ ನಿರ್ಮಾಣಗೊಳ್ಳುತ್ತಿದ್ದು, ಇದರಿಂದ ಕೆಲ ರಾಶಿಗಳ ಜನರಿಗೆ ಅದೃಷ್ಟ ಲಕ್ಷ್ಮಿಯ ಕೃಪೆಯಿಂದ ಧನಕುಬೇರ ನಿಧಿ ಪ್ರಾಪ್ತಿಯಾಗಲಿದೆ. (Spiritual News In Kannada)
ಮೀನ ರಾಶಿ: ಈ ಯೋಗ ನಿಮ್ಮ ರಾಶಿಯಲ್ಲಿಯೇ ನಿರ್ಮಾಣಗೊಳ್ಳುತ್ತಿರುವ ಕಾರಣ ಇದರಿಂದ ನಿಮ್ಮ ಆತ್ಮವಿಶ್ವಾಸ ಅಪಾರ ಹೆಚ್ಚಾಗಲಿದೆ. ಇದರ ಜೊತೆಗೆ ನಿಮ್ಮ ಕಾರ್ಯಶೈಲಿಯಲ್ಲಿ ಬದಲಾವಣೆ ಕೂಡ ಕಂಡುಬರಲಿದೆ. ಇನ್ನೊಂದೆಡೆ ಈ ಯೋಗದ ಕಾರಣ ನಿಮ್ಮ ಆರ್ಥಿಕ ಸ್ಥಿತಿ ಸಾಕಷ್ಟು ಬಲವಾಗಲಿದೆ. ಈ ಅವಧಿಯಲ್ಲಿ ನಿಮಗೆ ಹಣಗಳಿಕೆ ಸಾಕಷ್ಟು ಸುವರ್ಣಾವಕಾಶಗಳು ಒದಗಿ ಬರಲಿವೆ. ವಿವಾಹಿತರ ದಾಂಪತ್ಯ ಜೀವನ ಅದ್ಭುತವಾಗಿರಲಿದೆ. ಬಾಳ ಸಂಗಾತಿಯ ಉನ್ನತಿಯಾಗಲಿದೆ. ನೀವು ಅಂದುಕೊಂಡ ಎಲ್ಲಾ ಯೋಜನೆಗಳು ಈ ಅವಧಿಯಲ್ಲಿ ಪೂರ್ಣಗೊಳ್ಳಲಿದ್ದು, ಸ್ಥಾನಮಾನ ಪ್ರತಿಷ್ಠೆ ಕೂಡ ಹೆಚ್ಚಾಗಲಿದೆ.
ಧನು ರಾಶಿ: ಈ ಯೋಗ ನಿಮ್ಮ ಗೋಚರ ಜಾತಕದ ಚತುರ್ಥ ಭಾವದಲ್ಲಿ ರೂಪುಗೊಳ್ಳುತ್ತಿದ್ದು, ಜೀವನದಲ್ಲಿ ಸುದಿನಗಳು ಆರಂಭಗೊಳ್ಳಲಿವೆ. ಈ ಅವಧಿಯಲ್ಲಿ ನಿಮಗೆ ವಾಹನ, ಆಸ್ತಿಪಾಸ್ತಿ ಸುಖ ಪ್ರಾಪ್ತಿಯಾಗಲಿದೆ. ಕುಟುಂಬ ಸದಸ್ಯರ ಮಧ್ಯೆ ಸುಮಧುರತೆ ಇರಲಿದೆ. ಸುಖ ಸೌಕರ್ಯಗಳು ಹೆಚ್ಚಾಗಲಿವೆ, ರಿಯಲ್ ಎಸ್ಟೇಟ್, ಜಾಮೀನು, ನಿವೇಶನಕ್ಕೆ ಸಂಬಂಧಿಸಿದಂತೆ ನೀವು ಕೆಲಸ ಮಾಡುತ್ತಿದ್ದರೆ, ಉತ್ತಮ ಲಾಭ ನಿಮ್ಮದಾಗಲಿದೆ.
ವೃಷಭ ರಾಶಿ: ಈ ಯೋಗ ನಿಮ್ಮ ಜಾತಕದ ಆದಾಯ ಭಾವದಲ್ಲಿ ರಚನೆಯಾಗುತ್ತಿದೆ. ಹೀಗಾಗಿ ಈ ಅವಧಿಯಲ್ಲಿಲಿ ನಿಮ್ಮ ಆದಾಯ ಅಪಾರ ಹೆಚ್ಚಾಗಲಿದೆ. ಆದಾಯದ ಹೊಸ ಮಾರ್ಗಗಳು ನಿಮ್ಮ ಪಾಲಿಗೆ ತೆರೆದುಕೊಳ್ಳಲಿವೆ. ನಿಮ್ಮ ಗಳಿಕೆ ಅಪಾರ ಹೆಚ್ಚಾಗಲಿದ್ದು, ಬ್ಯಾಂಕ್ ಬ್ಯಾಲೆನ್ಸ್ ಏರಿಕೆಯಾಗಲಿದೆ. ಹೂಡಿಕೆಯಿಂದಲೂ ಕೂಡ ನಿಮಗೆ ಲಾಭ ಸಿಗಲಿದೆ. ಮಕ್ಕಳಿಗೆ ಸಂಬಂಧಿಸಿದಂತೆ ಒಳ್ಳೆಯ ಸುದ್ದಿಗಳು ನಿಮಗೆ ಸಿಗಲಿವೆ, ಷೇರು ಮಾರುಕಟ್ಟೆ, ಹಳೆ ಹೂಡಿಕೆಗಳಿಂದ ನಿಮಗೆ ಲಾಭ ಸಿಗಲಿದೆ.
(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)