Milk and Diabetes : ರಕ್ತದಲ್ಲಿನ ಸಕ್ಕರೆಯ ಏರಿಕೆಯನ್ನು ತಡೆಯಲು ವೈದ್ಯರು ಯಾವಾಗಲೂ ಕಡಿಮೆ ಕೊಬ್ಬಿನಂಶ ಮತ್ತು ಹೆಚ್ಚಿನ ಫೈಬರ್ ಹೊಂದಿರುವ ಸಮತೋಲಿತ ಆಹಾರವನ್ನು ಸೇವಿಸುವಂತೆ ಸಲಹೆ ನೀಡುತ್ತಾರೆ. ಆದರೆ, ಬಹುತೇಕ ಮಧುಮೇಹ ರೋಗಿಗಳಿಗೆ ಹಾಲು ಕುಡಿಯಬೇಕೋ ಬೇಡವೋ ಎಂಬ ಗೊಂದಲವಿರುತ್ತದೆ.. ಬನ್ನಿ ಈ ಕುರಿತು ಸ್ಪಷ್ಟವಾಗಿ ತಿಳಿಯೋಣ..
ಮಧುಮೇಹ ಇರುವವರಿಗೆ, ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ದೊಡ್ಡ ಹೋರಾಟ. ಮಧುಮೇಹಿಗಳು ಆಹಾರದ ಬಗ್ಗೆ ಹೆಚ್ಚಿನ ಗಮನ ನೀಡಬೇಕಾಗುತ್ತದೆ. ಆಹಾರ ಸೇವನೆಯಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ರಕ್ತದಲ್ಲಿನ ಸಕ್ಕರೆ ಪ್ರಮಾಣ ಹೆಚ್ಚಾಗಬಹುದು.
ಮಧುಮೇಹಿಗಳು ಕಡಿಮೆ ಕೊಬ್ಬಿನ ಆಹಾರವನ್ನು ಮಾತ್ರ ಸೇವಿಸಬೇಕು. ರಕ್ತದಲ್ಲಿನ ಸಕ್ಕರೆಯ ಏರಿಕೆಯನ್ನು ನಿಯಂತ್ರಿಸಲು ಕಡಿಮೆ ಕೊಬ್ಬಿನಾಂಶ ಮತ್ತು ಹೆಚ್ಚಿನ ಫೈಬರ್ ಹೊಂದಿರುವ ಸಮತೋಲಿತ ಆಹಾರವನ್ನು ಸೇವಿಸಲು ಶಿಫಾರಸು ಮಾಡುತ್ತಾರೆ.
ಹೆಚ್ಚಿನ ಜನರು ತಮ್ಮ ದೈನಂದಿನ ಆಹಾರದ ಭಾಗವಾಗಿ ಹಾಲು ಕುಡಿಯುತ್ತಾರೆ. ಹಾಲು ಕ್ಯಾಲ್ಸಿಯಂ, ಪ್ರೋಟೀನ್ ಮತ್ತು ವಿಟಮಿನ್ ಡಿ ಯಲ್ಲಿ ಸಮೃದ್ಧವಾಗಿದೆ ಮತ್ತು ಮೂಳೆಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ ಅಂತ ತಜ್ಞರು ಹೇಳುತ್ತಾರೆ. ಆದರೆ, ಹಾಲು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಕೊಬ್ಬನ್ನು ಹೊಂದಿದೆ ಎಂದು ನಂಬಲಾಗಿದೆ.
ಅಧಿಕ ರಕ್ತದ ಸಕ್ಕರೆ ಮಟ್ಟವನ್ನು ಹೊಂದಿರುವ ರೋಗಿಗಳು ಹಾಲು ಕುಡಿಯಬಹುದೇ ಎನ್ನುವ ಅನುಮಾನ ಎಲ್ಲರಲ್ಲಿದೆ.. ಹಾಲಿನಲ್ಲಿ ಕೊಬ್ಬಿನಾಂಶ ಹೆಚ್ಚಾಗಿರುತ್ತದೆ. ಇದು ಮಧುಮೇಹವನ್ನು ಉಂಟುಮಾಡುತ್ತದೆ ಇಲ್ಲವೇ ಉಲ್ಬಣಗೊಳಿಸುತ್ತದೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ.
ಹೆಚ್ಚುವರಿ ಕೊಬ್ಬು ಹಾನಿಕಾರಕ, ಮಧುಮೇಹಿಗಳಿಗೆ ಸಮಸ್ಯೆಗಳನ್ನು ಉಂಟುಮಾಡಬಹುದು. ಅನೇಕ ಮಧುಮೇಹಿಗಳು ಮೂಳೆ ಮುರಿತದ ಸಮಸ್ಯೆಗೆ ಗುರಿಯಾಗುತ್ತಾರೆ. ಆದ್ದರಿಂದ ಕ್ಯಾಲ್ಸಿಯಂನಲ್ಲಿ ಸಮೃದ್ಧವಾಗಿರುವ ಆಹಾರವನ್ನು ಸೇವಿಸುವುದು ಉತ್ತಮ. ಇದಕ್ಕೆ ಇರುವ ಏಕೈಕ ಮಾರ್ಗವೆಂದರೆ ಪ್ರತಿದಿನ ಹಾಲು ಕುಡಿಯುವುದು.
ಮಧುಮೇಹಿಗಳಿಗೆ ಪ್ರೋಟೀನ್ ಬಹಳ ಮುಖ್ಯ ಏಕೆಂದರೆ ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಪ್ರೋಟೀನ್ ಭರಿತ ಹಾಲು ಒಂಬತ್ತು ಅಗತ್ಯ ಅಮೈನೋ ಆಮ್ಲಗಳನ್ನು ಹೊಂದಿರುತ್ತದೆ. ಆದ್ದರಿಂದ ವೈದ್ಯರು ನಿಮ್ಮ ಊಟ ಅಥವಾ ತಿಂಡಿಯ ಜೊತೆ ಹಾಲು ಸೇವಿಸಲು ಶಿಫಾರಸು ಮಾಡುತ್ತಾರೆ.
ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಆಹಾರದಲ್ಲಿ ಕ್ಯಾಲ್ಸಿಯಂ ಭರಿತ ಹಾಲನ್ನು ಸೇರಿಸಬಹುದು. ಕಾರ್ಬೋಹೈಡ್ರೇಟ್ಗಳಲ್ಲಿ ಕಡಿಮೆ ಇರುವ ಹಾಲನ್ನು ಕುಡಿಯಲು ವೈದ್ಯರು ಶಿಫಾರಸು ಮಾಡುತ್ತಾರೆ. ಸಂಪೂರ್ಣ ಹಾಲಿನಲ್ಲಿ ಸ್ಯಾಚುರೇಟೆಡ್ ಕೊಬ್ಬಿನಂಶ ಹೆಚ್ಚಿರುತ್ತದೆ, ಇದು ಹೃದ್ರೋಗ ಸಮಸ್ಯೆಗಳಿಗೆ ಕಾರಣವಾಗಬಹುದು, ಆದ್ದರಿಂದ ಕಡಿಮೆ ಕೊಬ್ಬಿನ ಅಥವಾ ಕೆನೆರಹಿತ ಹಾಲು ಸೇವನೆ ಉತ್ತಮ..