ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಂಭ್ರಮದ ಚಾಲನೆ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ಅಗ್ರ ಪೂಜೆ ಸಲ್ಲಿಸುವ ಮೂಲಕ ಸಾಂಪ್ರದಾಯಿಕವಾಗಿ ಚಾಲನೆ ನೀಡಲಾಯಿತು.ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ಸಾಂಪ್ರದಾಯಕವಾಗಿ ದಸರಾ ಉದ್ಘಾಟಿಸಿದರು.

 

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಇಂಧನ‌ ಸಚಿವ‌ ಶ್ರೀ ಕೆ.ಜೆ.ಜಾರ್ಜ್, ಪಶುಸಂಗೋಪನಾ ಮತ್ತು ರೇಷ್ಮೆ ಸಚಿವ ಶ್ರೀ ಕೆ.ವೆಂಕಟೇಶ್, ಆಹಾರ ನಾಗರಿಕ ಫೂರೈಕೆ ಸಚಿವ ಶ್ರೀ ಕೆ.ಎಚ್. ಮುನಿಯಪ್ಪ, ಸಂಸದ ಶ್ರೀ ಪ್ರತಾಪ್ ಸಿಂಹ, ಶಾಸಕರುಗಳಾದ ಶ್ರೀ ತನ್ವೀರ್ ಸೇಠ್, ಶ್ರೀ ಜಿ.ಟಿ.ದೇವೇಗೌಡ, ಶ್ರೀ ಎ.ಆರ್.ಕೃಷ್ಣಮೂರ್ತಿ, ಶ್ರೀ ಟಿ.ಎಸ್.ಶ್ರೀವತ್ಸ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

1 /6

2 /6

3 /6

4 /6

5 /6

6 /6