7th Pay Commission DA arrears update : ಕೇಂದ್ರ ಸರ್ಕಾರಿ ನೌಕರರಿಗೆ ಮತ್ತೊಂದು ಸಂತಸದ ಸುದ್ದಿ. ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಎರಡು ದೊಡ್ಡ ಉಡುಗೊರೆ ನೀಡಲು ಸರ್ಕಾರ ಸಜ್ಜಾಗಿದೆ.
7th Pay Commission arrears distribution timeline : ಇತ್ತೀಚೆಗಷ್ಟೇ ಬಿಡುಗಡೆಯಾದ ಎಐಸಿಪಿಐ ಅಂಕಿಅಂಶಗಳ ಆಧಾರದ ಮೇಲೆ ತುಟ್ಟಿಭತ್ಯೆಯಲ್ಲಿ ಶೇ.4ರಷ್ಟು ಹೆಚ್ಚಳವಾಗಲಿದೆ. ಎರಡನೆಯದಾಗಿ, ಕೆಲವೇ ದಿನಗಳಲ್ಲಿ, ಕೇಂದ್ರ ಸರ್ಕಾರವು 18 ತಿಂಗಳ ಡಿಎ ಬಾಕಿಯ ಬಗ್ಗೆ ಪ್ರಮುಖ ಘೋಷಣೆಯನ್ನು ಮಾಡಲಿದೆ ಎಂದು ಮೂಲಗಳು ತಿಳಿಸಿವೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಕೇಂದ್ರ ಸರ್ಕಾರಿ ನೌಕರರಿಗೆ ಶೇ 4ರಷ್ಟು ತುಟ್ಟಿಭತ್ಯೆ ಹೆಚ್ಚಳವಾಗಲಿದೆ.ಇದರಿಂದ ಒಂದು ಕೋಟಿಗೂ ಹೆಚ್ಚು ನೌಕರರು ಮತ್ತು ಪಿಂಚಣಿದಾರರಿಗೆ ಭಾರೀ ಪರಿಹಾರ ದೊರೆಯಲಿದೆ.
ಇತ್ತೀಚೆಗೆ ಬಿಡುಗಡೆಯಾದ ಎಐಸಿಪಿಐ ಸೂಚ್ಯಂಕ ಸಂಖ್ಯೆಗಳು ತುಟ್ಟಿಭತ್ಯೆಯಲ್ಲಿ ಶೇಕಡಾ ನಾಲ್ಕರಷ್ಟು ಏರಿಕೆಯನ್ನು ಸೂಚಿಸಿವೆ. ಪ್ರಸ್ತುತ, ನೌಕರರು ಶೇಕಡಾ 46 ರಷ್ಟು ಡಿಎ ಪಡೆಯುತ್ತಿದ್ದಾರೆ
ತುಟ್ಟಿಭತ್ಯೆಯಲ್ಲಿ ಆಗುವ ಶೇಕಡಾ ನಾಲ್ಕು ಹೆಚ್ಚಳವು ನೌಕರರ ಒಟ್ಟು ತುಟ್ಟಿ ಭತ್ಯೆಯನ್ನು ಶೇಕಡಾ 50ಕ್ಕೆ ಹೆಚ್ಚಿಸುತ್ತದೆ
ಇದಲ್ಲದೆ, ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ ಸ್ಥಗಿತಗೊಂಡಿದ್ದ 18 ತಿಂಗಳ ಡಿಎ ಬಾಕಿಯನ್ನು ಸರ್ಕಾರ ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ. ಅದಕ್ಕಾಗಿ ಅಧಿಸೂಚನೆಯನ್ನು ಹೊರಡಿಸಲಿದೆ ಎಂದು ಮೂಲಗಳು ಹೇಳುತ್ತವೆ.
ಕರೋನಾ ಸಾಂಕ್ರಾಮಿಕ ಸಮಯದಲ್ಲಿ ಜನವರಿ 1, 2020 ರಿಂದ ಜೂನ್ 30, 2021 ರವರೆಗಿನ ತುಟ್ಟಿಭತ್ಯೆಯನ್ನು ತಡೆಹಿಡಿಯಲಾಗಿತ್ತು. ನಂತರ ಪರಿಸ್ಥಿತಿ ಸ್ವಲ್ಪ ಸುಧಾರಿಸಿದ ನಂತರ ತುಟ್ಟಿಭತ್ಯೆಯನ್ನು ಮತ್ತೆ ಆರಂಭಿಸಲಾಯಿತು.
ಆದರೆ, ಸ್ಥಗಿತಗೊಳಿಸಿದ್ದ 18 ತಿಂಗಳ ಮೊತ್ತವನ್ನು ಇನ್ನೂ ನೌಕರರಿಗೆ ಪಾವತಿಸಿಲ್ಲ. ಸರ್ಕಾರ ಈಗ ಆ ಬಾಕಿ ಡಿಎಯನ್ನು ಬಿಡುಗಡೆ ಮಾಡಬಹುದು ಎನ್ನಲಾಗಿದೆ.
ಆದರೆ, ಈ ಬಗ್ಗೆ ಸರ್ಕಾರ ಇನ್ನೂ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿಲ್ಲ.