PM Modi ISRO Visit: ಬಾಹ್ಯಾಕಾಶದಲ್ಲಿ ಇಸ್ರೋ ಪರಾಕ್ರಮ ಮೆರೆಇದ್ದು, ಚಂದ್ರನ ದಕ್ಷಿಣ ಧ್ರುವ ತಲುಪಿದ ಮೊದಲ ದೇಶವೆಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ. ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ.
ನವದೆಹಲಿ: ಭಾರತದ ಚಂದ್ರಯಾನ-3 ಯೋಜನೆ ಯಶಸ್ವಿಯಾಗಿದೆ. ಇಸ್ರೋ ವಿಜ್ಞಾನಿಗಳ ಈ ಸಾಧನೆಯನ್ನು ಇಡೀ ಜಗತ್ತೇ ಮೆಚ್ಚಿಕೊಂಡಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿ ವಿಕ್ರಮ್ ಲ್ಯಾಂಡರ್ ಸಾಫ್ಟ್ ಲ್ಯಾಂಡ್ ಆಗಿದ್ದರಿಂದ ಇಡೀ ದೇಶದ ಜನರೇ ಸಂಭ್ರಮಿಸಿದ್ದಾರೆ. ಈ ಮೂಲಕ ಬಾಹ್ಯಾಕಾಶದಲ್ಲಿ ಇಸ್ರೋ ಪರಾಕ್ರಮ ಮೆರೆಇದ್ದು, ಚಂದ್ರನ ದಕ್ಷಿಣ ಧ್ರುವ ತಲುಪಿದ ಮೊದಲ ದೇಶವೆಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ. ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. ಪ್ರಧಾನಿ ಮೋದಿ ಸಹ ಬೆಂಗಳೂರಿಗೆ ಆಗಮಿಸಿ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಶನಿವಾರ ಸಿಲಿಕಾನ್ ಸಿಟಿ ಬೆಂಗಳೂರಿಗೆ ಆಗಮಿಸಿದ್ದ ಪ್ರಧಾನಿ ಮೋದಿಯವರು ಪೀಣ್ಯದಲ್ಲಿರುವ ಇಸ್ರೋ ಕೇಂದ್ರ ಕಚೇರಿಗೆ ತೆರಳಿ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿದರು. ಇಸ್ರೋದ ಮಹತ್ತರ ಸಾಧನೆಯ ಬಗ್ಗೆ ಮನಸಾರೆ ಹಾಡಿಹೊಗಳಿದ ಪ್ರಧಾನಿ ಮೋದಿ ಚಂದ್ರಯಾನ-3ರ ಯಶಸ್ಸಿನಿಂದ ಖುಷಿಯ ಅಲೆಯಲ್ಲಿ ತೇಲಾಡಿದರು.
ಇಸ್ರೋ ಕೇಂದ್ರ ಕಚೇರಿಗೆ ಭೇಟಿ ನೀಡಿದ ಬಳಿಕ ಪ್ರಧಾನಿ ಮೋದಿ ರೋಡ್ ಶೋ ನಡೆಸಿದರು. ಈ ವೇಳೆ ರಸ್ತೆಯ ಇಕ್ಕೆಲಗಳಲ್ಲಿ ನಿಂತಿದ್ದ ಬೆಂಗಳೂರಿನ ಜನರು ಪ್ರಧಾನಿ ಮೋದಿಗೆ ಜೈಕಾರ ಹಾಕಿದರು. ತ್ರಿವರ್ಣ ಧ್ವಜಗಳನ್ನು ಹಿಡಿದು ಇಸ್ರೋದ ಸಾಧನೆಗೆ ಬಹುಪರಾಕ್ ಹೇಳಿದರು.
ಪ್ರಧಾನಿ ಮೋದಿ ರೋಡ್ ಶೋ ವೇಳೆ ಬಿಜೆಪಿ ನಾಯಕರು ಸಹ ಭಾಗವಹಿಸಿದ್ದರು. ಮಾಜಿ ಸಚಿವರಾದ ಆರ್.ಅಶೊಕ್, ಮುನಿರತ್ನ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸೇರಿದಂತೆ ಹಲವಾರು ಬಿಜೆಪಿ ನಾಯಕರು ಸಾಮಾನ್ಯ ಜನರಂತೆ ರಸ್ತೆಬದಿ ನಿಂತು ಮೋದಿಯವರ ರೋಡ್ ಶೋ ವೀಕ್ಷಿಸಿದರು.
ಪ್ರಧಾನಿ ಮೋದಿಯವರ ರೋಡ್ ಶೋ ಸಂದರ್ಭದಲ್ಲಿ ಜನಪದ ಧಾರ್ಮಿಕ ವೀರನೃತ್ಯವಾದ ವೀರಭದ್ರ ಕುಣಿತವು ಜನರ ಗಮನ ಸೆಳೆಯಿತು.
ಪ್ರಧಾನಿ ಮೋದಿಯವರ ರೋಡ್ ಶೋ ವೀಕ್ಷಿಸಲು ಅಪಾರ ಪ್ರಮಾಣದ ಜನರು ನೆರೆದಿದ್ದರು. ರಸ್ತೆಬದಿ ನಿಂತುಕೊಂಡಿದ್ದ ಬೆಂಗಳೂರಿನ ಜನರು ಮೋದಿಗೆ ಜೈಕಾರ ಹಾಕಿದರು.