Diabetes home remedy: ಮಧುಮೇಹಿಗಳು ಖಾಲಿ ಹೊಟ್ಟೆಯಲ್ಲಿ ಬೆಳಗಿನ ಜಾವ ಕೆಲವು ಆಹಾರಗಳನ್ನು ತಿಂದರೆ ಅದು ದಿನವಿಡೀ ರಕ್ತದಲ್ಲಿನ ಸಕ್ಕರೆಯ ಮಟ್ಟ ಏರುಪೇರಾಗದಂತೆ ತಡೆಯುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಬೆಳಗೆದ್ದು ಮೊದಲು ಸೇವಿಸುವ ಆಹಾರ ನಮ್ಮ ಆರೋಗ್ಯದ ಮೇಲೆ ಹಲವಾರು ಪರಿಣಾಮಗಳನ್ನು ಬೀರುತ್ತದೆ.
ಅದಕ್ಕಾಗಿಯೇ ಬೆಳಗೆದ್ದಾಗ ಆರೋಗ್ಯಕರ ಆಹಾರವನ್ನೇ ಮೊದಲು ಸೇವಿಸಬೇಕು. ಕೆಲವು ಆಹಾರಗಳನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಿದಾಗ ಅದರ ಪ್ರಯೋಜನ ದುಪ್ಪಟ್ಟಾಗುತ್ತದೆ.
ಕರಿಬೇವಿನ ಎಲೆ ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಕರಿಬೇವಿನ ಎಲೆಗಳ ಸೇವನೆಯು ಕೊಲೆಸ್ಟ್ರಾಲ್ ಮತ್ತು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಖನಿಜಗಳು, ಕ್ಯಾಲ್ಸಿಯಂ, ರಂಜಕ, ಫೈಬರ್, ಕಾರ್ಬೋಹೈಡ್ರೇಟ್, ಮೆಗ್ನೀಸಿಯಮ್ ಮತ್ತು ಕಬ್ಬಿಣದಂತಹ ಪೋಷಕಾಂಶಗಳನ್ನು ಕರಿಬೇವಿನ ಎಲೆಯಲ್ಲಿದ್ದು, ದೇಹವನ್ನು ಆರೋಗ್ಯಕರವಾಗಿರಿಸುತ್ತದೆ.
ರಕ್ತದಲ್ಲಿನ ಸಕ್ಕರೆಯ ಪ್ರಮಾಣವು ಅಧಿಕವಾಗಿದ್ದರೆ, ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕೆಲವು ಕರಿಬೇವಿನ ಎಲೆಗಳನ್ನು ಅಗಿಯಿರಿ.
ಕರಿಬೇವಿನ ಎಲೆಗಳ ಸೇವನೆಯು ಇನ್ಸುಲಿನ್ ಮಟ್ಟವನ್ನು ಸುಧಾರಿಸುತ್ತದೆ. ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಿಸುತ್ತದೆ.
ಮಧುಮೇಹಿಗಳು ಬೇವಿನ ಸೊಪ್ಪನ್ನು ಸೇವಿಸಬೇಕು. ಪ್ರತಿದಿನ 5-6 ಬೇವಿನ ಎಲೆಗಳನ್ನು ಅಗಿಯುತ್ತಿದ್ದರೆ ಬ್ಲಡ್ ಶುಗರ್ ನಿಯಂತ್ರಣದಲ್ಲಿರುತ್ತದೆ.
ಪೇರಲ ಎಲೆಗಳನ್ನು ಪ್ರತಿದಿನ ಸೇವಿಸುವುದರಿಂದ ಮಧುಮೇಹವನ್ನು ನಿಯಂತ್ರಣದಲ್ಲಿಡುತ್ತದೆ. ಇದರಲ್ಲಿರುವ ಫೀನಾಲಿಕ್ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಗಮನಿಸಿ: ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆ ತೆಗೆದುಕೊಳ್ಳಿ. zee kannada news ಇದನ್ನು ಖಚಿತಪಡಿಸುವುದಿಲ್ಲ.