ವಿಮಾನದಲ್ಲಿ ಮಕ್ಕಳ ಪ್ರಯಾಣದ ನಿಯಮ ಏನು ಗೊತ್ತಾ? ಯಾವ ವಯಸ್ಸಿನಲ್ಲಿ ಮಕ್ಕಳು ವಿಮಾನದಲ್ಲಿ ಏಕಾಂಗಿಯಾಗಿ ಪ್ರಯಾಣಿಸಬಹುದು? ಈ ಎಲ್ಲಾ ಮಾಹಿತಿ ಇಲ್ಲಿದೆ.
ಬೆಂಗಳೂರು : ರಷ್ಯಾ-ಉಕ್ರೇನ್ ಯುದ್ಧದ ಸಮಯದಲ್ಲಿ, 11 ವರ್ಷ ವಯಸ್ಸಿನ ಮಗುವೊಂದು 1000 ಕಿಲೋಮೀಟರ್‌ಗಳಿಗಿಂತ ಹೆಚ್ಚು ಪ್ರಯಾಣಿಸಿದೆ. ನಂತರ ವಿಮಾನದ ಮೂಲಕ ಏಕಾಂಗಿಯಾಗಿ ಸ್ಲೋವಾಕಿಯಾ ತಲುಪಿದೆ. ಈ ಮಗುವಿನ ಚಿತ್ರಗಳು ಸಾಕಷ್ಟು ವೈರಲ್ ಆಗಿತ್ತು. ಆದರೆ ವಿಮಾನದಲ್ಲಿ ಮಕ್ಕಳ ಪ್ರಯಾಣದ ನಿಯಮ ಏನು ಗೊತ್ತಾ? ಯಾವ ವಯಸ್ಸಿನಲ್ಲಿ ಮಕ್ಕಳು ವಿಮಾನದಲ್ಲಿ ಏಕಾಂಗಿಯಾಗಿ ಪ್ರಯಾಣಿಸಬಹುದು? ಈ ಎಲ್ಲಾ ಮಾಹಿತಿ ಇಲ್ಲಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
ಮಕ್ಕಳ ಪ್ರಯಾಣಕ್ಕೆ ಸಂಬಂಧಿಸಿದಂತೆ ವಿಮಾನಯಾನ ಸಂಸ್ಥೆಗಳು ಹಲವು ಮಾರ್ಗಸೂಚಿಗಳನ್ನು ಮಾಡಿದೆ. ಸಾಮಾನ್ಯವಾಗಿ, 5 ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳು ವಿಮಾನಗಳಲ್ಲಿ ಒಂಟಿಯಾಗಿ ಪ್ರಯಾಣಿಸಬಹುದು. ಆದರೂ, ಈ ಬಗ್ಗೆ ವಿವಿಧ ವಿಮಾನಯಾನ ಸಂಸ್ಥೆಗಳು ತಮ್ಮದೇ ಆದ ನಿಯಮಗಳನ್ನು ಹೊಂದಿವೆ. ಆದರೆ ಸರಾಸರಿ 5 ವರ್ಷದ ಮಕ್ಕಳಿಗೆ ವಿಮಾನದಲ್ಲಿ ಏಕಾಂಗಿಯಾಗಿ ಪ್ರಯಾಣಿಸಲು ಅವಕಾಶವಿದೆ.
ಏರ್ ಇಂಡಿಯಾದ ವೆಬ್‌ಸೈಟ್ ಪ್ರಕಾರ, 5 ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳು ದೇಶೀಯ ವಿಮಾನಗಳಲ್ಲಿ ಏಕಾಂಗಿಯಾಗಿ ಪ್ರಯಾಣಿಸಬಹುದು. 12 ವರ್ಷ ವಯಸ್ಸಿನವರೆಗೆ ಏಕಾಂಗಿಯಾಗಿ ಪ್ರಯಾಣಿಸುವ ಮಕ್ಕಳನ್ನು ಸಾಮಾನ್ಯವಾಗಿ Unaccompanied Minors ಎಂದು ಪರಿಗಣಿಸಲಾಗುತ್ತದೆ. ಅವರಿಗೆ ಏರ್ ಇಂಡಿಯಾ ವಿಶೇಷ ಸೌಲಭ್ಯ ಕಲ್ಪಿಸಿದೆ.
ಏರ್ ಇಂಡಿಯಾದ ಪ್ರಕಾರ, ವಿಮಾನಯಾನ ಸಂಸ್ಥೆಯು ತನ್ನ ವಿಮಾನಗಳಲ್ಲಿ ಮಕ್ಕಳಿಗೆ ಪ್ರಯಾಣಿಸಲು ಅವಕಾಶ ನೀಡುತ್ತದೆ. ಟ್ರಾನ್ಸಿಟ್ ಪಾಯಿಂಟ್‌ನಲ್ಲಿ ಇಂಟರ್‌ಲೈನ್ ಪ್ರಯಾಣವನ್ನು ಸೇರಿಸಿದಾಗ, ಮಕ್ಕಳನ್ನು ಮಾತ್ರ ಪ್ರಯಾಣಿಸಲು ಅನುಮತಿಸಲಾಗುವುದಿಲ್ಲ.
ಇದಲ್ಲದೆ, 7 ದಿನಗಳಿಗಿಂತ ಹೆಚ್ಚಿನ ವಯಸ್ಸಿನ ಮಕ್ಕಳಿಗೆ ವಿಮಾನದಲ್ಲಿ ಪ್ರಯಾಣಿಸಲು ಅವಕಾಶವಿದೆ. 7 ತಿಂಗಳಿಂದ 2 ವರ್ಷಗಳವರೆಗಿನ ಮಕ್ಕಳನ್ನು ಶಿಶು ವಿಭಾಗದಲ್ಲಿ ಇರಿಸಲಾಗುತ್ತದೆ. ಅಂತಹ ಮಕ್ಕಳಿಗೆ ಪ್ರತ್ಯೇಕ ಸೀಟು ನೀಡುವುದಿಲ್ಲ. ಈ ಮಕ್ಕಳನ್ನು ವಿಮಾನದಲ್ಲಿ ಕರೆದೊಯ್ಯಲು, ಅವರ ಜನ್ಮ ಪ್ರಮಾಣಪತ್ರವನ್ನು ತೋರಿಸುವುದು ಕಡ್ಡಾಯವಾಗಿದೆ.