Cluster Beans Health Benefits: ಚವಳಿಕಾಯಿ ವಿಟಮಿನ್ ‘C’, ವಿಟಮಿನ್ ‘K’ ಮತ್ತು ಕ್ಯಾಲ್ಸಿಯಂ, ಮೆಗ್ನೀಸಿಯಮ್ ಮತ್ತು ಪೊಟ್ಯಾಸಿಯಮ್‌ನಂತಹ ಹಲವಾರು ಖನಿಜಗಳಲ್ಲಿ ಸಮೃದ್ಧವಾಗಿವೆ. ಆದ್ದರಿಂದ ಇದನ್ನು ನಿಮ್ಮ ಆಹಾರದಲ್ಲಿ ಸೇರಿಸುವುದರಿಂದ ನೀವು ಅನೇಕ ಪ್ರಯೋಜನಗಳನ್ನು ಪಡೆಯಬಹುದು.
ನವದೆಹಲಿ: ಮಾರುಕಟ್ಟೆಯಲ್ಲಿ ವಿವಿಧ ರೀತಿಯ ತರಕಾರಿಗಳನ್ನು ನೀವು ಕಾಣಬಹುದು. ಚವಳಿಕಾಯಿಯನ್ನು ಗೋರಿಕಾಯಿ ಅಂತಲೂ ಕೂಡ ಕರೆಯುತ್ತಾರೆ. ನೋಡಲು ಬೀನ್ಸ್ನಂತೆ ಕಂಡರೂ ಇದರ ರುಚಿಯಲ್ಲಿ ಸ್ವಲ್ಪ ಕಹಿ ಇರುತ್ತದೆ. ಇದು ದೇಹ ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ. ದೇಹದ ಬೊಜ್ಜಿನ ಸಮಸ್ಯೆಗೆ ಇದರು ಪರಿಣಾಮಕಾರಿ. ಹೆಚ್ಚುತ್ತಿರುವ ತೂಕವನ್ನು ನಿಯಂತ್ರಣದಲ್ಲಿಡಲು ಇದು ನೆರವಾಗುತ್ತದೆ. ಚವಳಿಕಾಯಿ ಸೇವನೆಯಿಂದ ದೊರೆಯುವ ಅದ್ಭುತ ಆರೋಗ್ಯ ಪ್ರಯೋಜನಗಳ ಮಾಹಿತಿ ಇಲ್ಲಿದೆ ನೋಡಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಇಂಗ್ಲಿಷ್‌ನಲ್ಲಿ ಕ್ಲಸ್ಟರ್ ಬೀನ್ಸ್ ಎಂದೂ ಕರೆಯಲ್ಪಡುವ ಚವಳಿಕಾಯಿ ಹಲವಾರು ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ. ಇದು ಕಡಿಮೆ ಪ್ರಮಾಣದ ಕ್ಯಾಲೊರಿಗಳನ್ನು ಹೊಂದಿರುತ್ತದೆ, ಇದು ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಪ್ರಯೋಜನಕಾರಿಯಾಗಿದೆ.
ಚವಳಿಕಾಯಿ ವಿಟಮಿನ್ ‘ಸಿ’, ವಿಟಮಿನ್ ‘ಕೆ’ ಮತ್ತು ಕ್ಯಾಲ್ಸಿಯಂ, ಮೆಗ್ನೀಸಿಯಮ್ ಮತ್ತು ಪೊಟ್ಯಾಸಿಯಮ್‌ನಂತಹ ಹಲವಾರು ಖನಿಜಗಳಲ್ಲಿ ಸಮೃದ್ಧವಾಗಿವೆ. ಆದ್ದರಿಂದ ಇದನ್ನು ನಿಮ್ಮ ಆಹಾರದಲ್ಲಿ ಸೇರಿಸುವುದರಿಂದ ನೀವು ಅನೇಕ ಪ್ರಯೋಜನಗಳನ್ನು ಪಡೆಯಬಹುದು.
ನಮ್ಮ ದೇಹವು ಸೋಂಕು ಮತ್ತು ದೌರ್ಬಲ್ಯದ ವಿರುದ್ಧ ಹೋರಾಡಲು ಸಹಾಯ ಮಾಡುವ ರೋಗನಿರೋಧಕ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಚವಳಿಕಾಯಿ ಪ್ರಯೋಜನಕಾರಿಯಾಗಿದೆ. ನಿಯಮಿತವಾಗಿ ಈ ತರಕಾರಿ ಸೇವನೆಯಿಂದ ನೀವು ಹಲವಾರು ಆರೋಗ್ಯಕರ ಪ್ರಯೋಜನ ಪಡೆಯಬಹುದು.
ಚವಳಿಕಾಯಿಯಲ್ಲಿರುವ ಫೈಬರ್ ಮತ್ತು ಪೊಟ್ಯಾಸಿಯಮ್ ರಕ್ತದೊತ್ತಡವನ್ನು ನಿಯಂತ್ರಿಸಲು ಮತ್ತು ಹೃದಯ ಸಂಬಂಧಿ ಕಾಯಿಲೆಗಳನ್ನು ಕಡಿಮೆ ಮಾಡಲು ಪ್ರಯೋಜನಕಾರಿಯಾಗಿದೆ. ಹೃದ್ರೋಗಿಗಳಿಗೆ ಅಥವಾ ಬಿಪಿ ಸಮಸ್ಯೆ ಇರುವವರಿಗೆ ಈ ತರಕಾರಿ ಪ್ರಯೋಜನಕಾರಿ.
ಚವಳಿಕಾಯಿಯಲ್ಲಿರುವ ಫೈಬರ್ ಸಕ್ಕರೆ ಮಟ್ಟವನ್ನು ಸ್ಥಿರವಾಗಿಡಲು ಸಹಾಯ ಮಾಡುತ್ತದೆ. ನಿಮ್ಮ ಮನೆಯಲ್ಲಿ ಡಯಾಬಿಟಿಕ್ ಪೇಷಂಟ್ ಇದ್ದರೆ ಖಂಡಿತವಾಗಿ ಅವರಿಗೆ ಈ ತರಕಾರಿ ತಿನ್ನಿಸಿ.