Photos: ಚಂಡ್ರಕಿ ಗ್ರಾಮದ ಪ್ರಾಥಮಿಕ ಶಾಲೆಯಲ್ಲಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಾಸ್ತವ್ಯ

ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಶುಕ್ರವಾರ ಯಾದಗರಿ ಜಿಲ್ಲೆಯ ಗುರುಮಿಟ್ಕಲ್ ತಾಲೂಕಿನ ಚಂಡ್ರಕಿ ಗ್ರಾಮದ ಪ್ರಾಥಮಿಕ ಶಾಲೆಯಲ್ಲಿ ವಾಸ್ತವ್ಯ ಮಾಡಿದರು.

ಈ ಚಿತ್ರದಲ್ಲಿ, ರಾಜ್ಯದ ಮುಖ್ಯಮಂತ್ರಿಯೊಬ್ಬರು ಸಾಮಾನ್ಯ ಮನುಷ್ಯನಂತೆ ನೆಲದ ಮೇಲೆ ಹಾಸಿಗೆ ಮೇಲೆ ಮಲಗಿರುವುದನ್ನು ನೀವು ನೋಡಬಹುದು. 

1 /6

ಗ್ರಾಮ ವಾಸ್ತವ್ಯದ ಕಾರ್ಯಕ್ರಮ ಮೂಲಕ ಶುಕ್ರವಾರ ಎಲ್ಲಾ ಸಾರ್ವಜನಿಕರ ಅರ್ಜಿಗಳನ್ನು ಸ್ವೀಕರಿಸಿದ ಬಳಿಕ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಯಾದಗರಿ ಜಿಲ್ಲೆಯ ಗುರುಮಿಟ್ಕಲ್ ತಾಲೂಕಿನ ಚಂಡ್ರಕಿ ಗ್ರಾಮದ ಪ್ರಾಥಮಿಕ ಶಾಲೆಯಲ್ಲಿ ವಾಸ್ತವ್ಯ ಮಾಡಿದರು. 

2 /6

ಈ ಮೊದಲೇ ತಿಳಿಸಿದಂತೆ ಯಾರ ಮನೆಯಲ್ಲೂ ವಾಸ್ತವ್ಯ ಹೂಡದ ಸಿಎಂ ಕುಮಾರಸ್ವಾಮಿ, ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನೆಲದ ಮೇಲೆಯೇ ಹಾಸಿಗೆ ಹಾಸಿ ಮಲಗಿದರು.  

3 /6

ಸಚಿವರುಗಳಾದ ರಾಜಶೇಖರ ಪಾಟೀಲ, ಬಂಡೆಪ್ಪ ಕಾಶಂಪೂರ, ವೆಂಕಟರಾವ ನಾಡಗೌಡ, ಸಾ.ರಾ. ಮಹೇಶ್, ಶಾಸಕ ನಾಗನಗೌಡ ಕಂದಕೂರ ಮುಖ್ಯಮಂತ್ರಿಗಳ ಜೊತೆಗಿದ್ದರು.  

4 /6

ಜಲಧಾರೆ ಯೋಜನೆಯಡಿ ನದಿಯ ಮೂಲದ ನೀರನ್ನು ಯಾದಗಿರಿ ಜಿಲ್ಲೆಯ ನಾಲ್ಕೂ ವಿಧಾನಸಭಾ ಕ್ಷೇತ್ರಗಳ ಪ್ರತಿ ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರು ಪೂರೈಸಲು 1 ಸಾವಿರ ಕೋಟಿ ರೂ.ನೀಡಲಾಗುವುದು ಎಂದು ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದರು.

5 /6

ಗ್ರಾಮ ವಾಸ್ತವ್ಯದ ನಿಮ್ಮತ್ತ ಚಂಡ್ರಕಿ ಗ್ರಾಮದಲ್ಲಿ ತಂಗಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಜನತಾ ದರ್ಶನಕ್ಕಾಗಿ ಮಧ್ಯಾಹ್ನದ ಭೋಜನವನ್ನೂ ತೊರೆದು ಕಾರ್ಯನಿರ್ಹಿಸಿದರು. ಜನತಾದರ್ಶನದಲ್ಲಿ ನಿರತರಾದ ಮುಖ್ಯಮಂತ್ರಿಗಳು ಸಾರ್ವಜನಿಕರು ದೊಡ್ಡ ಸಂಖ್ಯೆಯಲ್ಲಿ ನೆರೆದಿದ್ದನ್ನು ಕಂಡು, ತಾವು ಎಲ್ಲಿಯೂ ಹೋಗುವುದಿಲ್ಲ ರಾತ್ರಿ 8 ಗಂಟೆಯಾದರೂ ಸರಿ ನಿಮ್ಮ ಮನವಿಗಳನ್ನು ಸ್ವೀಕರಿಸುತ್ತೇನೆ, ಆತುರ ಪಡಬೇಡಿ ಎಂದು ಮನವಿ ಮಾಡಿದರು. ವೇದಿಕೆಯಿಂದ ಕದಲದೇ ಮಧ್ಯಾಹ್ನದ ಭೋಜನವನ್ನೂ ಸ್ವೀಕರಿಸದೇ ಜನತಾ ದರ್ಶನ ನಡೆಸಿದರು.

6 /6

ಚಂಡರಕಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಜನತಾ ದರ್ಶನಕ್ಕೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಗ್ರಾಮದತ್ತ ಜನಸಾಗರವೇ ಹರಿದು ಬರುತ್ತಿತ್ತು. ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಲು ಸುಮಾರು 15 ಕೌಂಟರುಗಳನ್ನು ಸ್ಥಾಪಿಸಲಾಗಿತ್ತು. ಮಹಿಳೆಯರು, ವಿಕಲಚೇತನರಿಗೆ ಪ್ರತ್ಯೇಕ ಕೌಂಟರುಗಳ ವ್ಯವಸ್ಥೆ ಕೂಡ ಮಾಡಲಾಗಿತ್ತು.