ಕೆಲವೊಂದು ಮನೆ ಮದ್ದುಗಳನ್ನು ಬಳಸುವ ಮೂಲಕ ಬಿಳಿ ಕೂದಲಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬಹುದು.
ಬೆಂಗಳೂರು : ಮಾಲಿನ್ಯ, ಜೀವನಶೈಲಿ ಮತ್ತಿತರ ಕಾರಣಗಳಿಂದಾಗಿ ಚಿಕ್ಕವಯಸ್ಸಿನಲ್ಲೇ ತಲೆಗೂದಲು ಬಿಳಿಯಾಗುವುದು ಇತ್ತೀಚೆಗೆ ಸಾಮಾನ್ಯವಾಗಿ ಬಹುತೇಕರು ಎದುರಿಸುತ್ತಿರುವ ಸಮಸ್ಯೆ. ಈ ಸಮಸ್ಯೆಯನ್ನು ತಪ್ಪಿಸಿ ನಿಮ್ಮ ಕೂದಲನ್ನು ಕಪ್ಪು ಮತ್ತು ದಪ್ಪವಾಗಿಡಲು,ಕೆಲವು ಮನೆ ಮದ್ದುಗಳನ್ನು ಬಳಸಬಹುದು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಕೂದಲು ಬಿಳಿಯಾಯಿತು ಎಂದ ಕೂಡಲೇ ಮಾರುಕಟ್ಟೆಯಲ್ಲಿ ಸಿಗುವ ಹೇರ್ ಕಲರ್, ಡೈ ಬಳಸಬೇಕಿಲ್ಲ.ಇದು ದುಬಾರಿ ಎನಿಸುವುದರ ಜೊತೆ ಕೂದಲಿನ ಸಮಸ್ಯೆಗೆ ತಾತ್ಕಾಲಿಕ ಪರಿಹಾರ ಅಷ್ಟೇ.ಅಲ್ಲದೆ ಅಡ್ಡ ಪರಿಣಾಮಗಳ ಅಪಾಯ ಕೂಡಾ ಕಾಡುವುದು.
ಇದರ ಬದಲಿಗೆ ಕೆಲವೊಂದು ಮನೆ ಮದ್ದುಗಳನ್ನು ಬಳಸುವ ಮೂಲಕ ಬಿಳಿ ಕೂದಲಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬಹುದು.
ಬಿಳಿ ಕೂದಲನ್ನು ಬೇರಿನಿಂದಲೇ ಕಪ್ಪಾಗಿಸುವ ಕೆಲಸವನ್ನು ತೆಂಗಿನ ಎಣ್ಣೆ ಪರಿಣಾಮಕಾರಿಯಾಗಿ ಮಾಡುತ್ತದೆ. ತೆಂಗಿನೆಣ್ಣೆಯಲ್ಲಿರುವ ಆಂಟಿ-ಆಕ್ಸಿಡೆಂಟ್ಗಳು, ಮತ್ತು ಮೆಲನಿನ್ ಕೂದಲಿಗೆ ಗಾಢ ಬಣ್ಣವನ್ನು ನೀಡುತ್ತದೆ.
ಇನ್ನು ಬಿಳಿ ಕೂದಲನ್ನು ಕಪ್ಪಾಗಿಸಲು ನಿಂಬೆ ರಸ ಕೂಡಾ ಬೆಸ್ಟ್ ಮನೆಮದ್ದು. ಇದು ಕೇವಲ ಬಿಳಿಕೂದಲು ಮಾತ್ರವಲ್ಲ ತಲೆಹೊಟ್ಟು ಸಮಸ್ಯೆಗೂ ಶೀಘ್ರವೇ ಪರಿಹಾರವನ್ನು ನೀಡುತ್ತದೆ.
ನಿಂಬೆರಸವನ್ನು ತೆಂಗಿನ ಎಣ್ಣೆಯೊಂದಿಗೆ ಬೆರೆಸಿ ಕೂದಲಿಗೆ ಹಚ್ಚಿದರೆ ಕೂದಲು ಕಪ್ಪಾಗುವುದರ ಜೊತೆಗೆ ಸ್ಟ್ರಾಂಗ್ ಆಗುತ್ತದೆ.
ತೆಂಗಿನೆಣ್ಣೆ ಮತ್ತು ನಿಂಬೆ ರಸವನ್ನು ಸಮಾ ಪ್ರಮಾಣದಲ್ಲಿ ತೆಗೆದುಕೊಳ್ಳಬೇಕು. ಈ ಮಿಶ್ರಣವನ್ನು ಕೂದಲು ಮತ್ತು ನೆತ್ತಿಯ ಮೇಲೆ ಹಚ್ಚಿ ಮಸಾಜ್ ಮಾಡಿ. ಸುಮಾರು 1 ಗಂಟೆಯ ನಂತರ, ಸೌಮ್ಯವಾದ ಶಾಂಪೂ ಬಳಸಿ ಕೂದಲನ್ನು ತೊಳೆಯಿರಿ.
ತೆಂಗಿನ ಎಣ್ಣೆ ಮತ್ತು ನಿಂಬೆರಸವನ್ನು ಕೂದಲಿಗೆ ಹಚ್ಚುವುದರಿಂದ ತಲೆಹೊಟ್ಟು, ತುರಿಕೆ ಸಮಸ್ಯೆ ಕೂಡಾ ದೂರವಾಗುವುದು.ಇದು ಕೂದಲನ್ನು ಬೇರಿನಿಂದಲೇ ಸದೃಢಗೊಳಿಸುತ್ತದೆ.ಇದರಿಂದ ಕೂದಲು ಉದುರುವುದು ನಿಲ್ಲುತ್ತದೆ.
ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ.ಈ ಮಾಹಿತಿಯ ಹೊಣೆಯನ್ನು ಜೀ ಕನ್ನಡ ನ್ಯೂಸ್ ಹೇಳಿಕೊಳ್ಳುವುದಿಲ್ಲ.