ಚಿತ್ರದುರ್ಗ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇಂದು ಚಿತ್ರದುರ್ಗದ ಮುರುಘಾಮಠಕ್ಕೆ ಭೇಟಿ ನೀಡಿ ಮುರುಘಾಶರಣರು ಸೇರಿದಂತೆ ಹಲವು ಮಠಾಧೀಶರ ಆಶೀರ್ವಾದ ಪಡೆದರು. ಈ ವೇಳೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಮತ್ತಿತರ ನಾಯಕರು ಉಪಸ್ಥಿತರಿದ್ದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಚಿತ್ರದುರ್ಗದ ಮುರುಘಾ ಮಠಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಭೇಟಿ ನೀಡಿದರು. ಶಿವಮೂರ್ತಿ ಮುರುಘಾ ಶರಣರ ಆಶೀರ್ವಾದ ಪಡೆದು ಮಾಠಾಧೀಶರೊಂದಿಗೆ ಸಂವಾದ ನಡೆಸಿದರು.
ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ 20ಕ್ಕೂ ಹೆಚ್ಚು ಮಠಾಧೀಶರು ಸಂವಾದದಲ್ಲಿ ಪಾಲ್ಗೊಂಡಿದ್ದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಸೇರಿ ಹಲವು ಕಾಂಗ್ರೆಸ್ ಮುಖಂಡರು ಈ ವೇಳೆ ಉಪಸ್ಥಿತರಿದ್ದರು.
ರಾಹುಲ್ ಗಾಂಧಿಯವರು ಹುಬ್ಬಳ್ಳಿಯಿಂದ ರಸ್ತೆ ಮಾರ್ಗವಾಗಿ ಚಿತ್ರದುರ್ಗಕ್ಕೆ ಆಗಮಿಸಿದರು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ನಾಯಕನಿಗೆ ಅದ್ದೂರಿ ಸ್ವಾಗತ ಕೋರಿದರು.
ಮಾಜಿ ಸಿಎಂ ಸಿದ್ದರಾಮಯ್ಯನವರ 75ನೇ ಹುಟ್ಟುಹಬ್ಬದ ಪ್ರಯುಕ್ತ ಇಂದು ದಾವಣಗೆರೆಯಲ್ಲಿ ಆಯೋಜಿಸಿರುವ ‘ಸಿದ್ದರಾಮೋತ್ಸವ ಅಮೃತ ಮಹೋತ್ಸವ’ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಪಾಲ್ಗೊಂಡು ನಂತರ ದೆಹಲಿಗೆ ಪ್ರಯಾಣ ಬೆಳಸಲಿದ್ದಾರೆ.