ಈ ಆಹಾರಗಳನ್ನು ಸೇವಿಸುವ ಮೂಲಕ ಕೂದಲು ಉದುರುವಿಕೆಯನ್ನು ತೊಡೆದುಹಾಕಬಹುದು.
ಬೆಂಗಳೂರು : ಬದಲಾಗುತ್ತಿರುವ ಜೀವನಶೈಲಿಯಿಂದಾಗಿ, ಜನರು ಕೂದಲಿನ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಕೂದಲಿನ ಮುಖ್ಯ ಸಮಸ್ಯೆ ಕೂದಲು ಉದುರುವಿಕೆ. ಕೂದಲು ಉದುರುವುದನ್ನು ತಡೆಯಲು, ಜನರು ಅನೇಕ ಮಾರುಕಟ್ಟೆಗಳಿಂದ ನಾನಾ ರೀತಿಯ ಉತ್ಪನ್ನಗಳನ್ನು ಖರೀದಿಸುತ್ತಾರೆ. ಈ ಉತ್ಪನ್ನಗಳು ಅನೇಕ ಅಡ್ಡ ಪರಿಣಾಮಗಳನ್ನು ಹೊಂದಿವೆ. ಆದರೆ ಈ ಆಹಾರಗಳನ್ನು ಸೇವಿಸುವ ಮೂಲಕ ಕೂದಲು ಉದುರುವಿಕೆಯನ್ನು ತೊಡೆದುಹಾಕಬಹುದು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಕೂದಲು ಉದುರುವಿಕೆಯಿಂದ ಬಳಲುತ್ತಿರುವವರು ತಮ್ಮ ಆಹಾರದಲ್ಲಿ ಮೆಂತ್ಯೆಯನ್ನು ಸೇರಿಸಿಕೊಳ್ಳಬೇಕು. ಮೆಂತ್ಯೆ ಬೀಜಗಳನ್ನು ತರಕಾರಿಗಳು ಮತ್ತು ದ್ವಿದಳ ಧಾನ್ಯಗಳಿಗೆ ಸೇರಿಸಬಹುದು. ಮೆಂತ್ಯೆ ಬೀಜಗಳು ಇನ್ಸುಲಿನ್ ಸೂಕ್ಷ್ಮತೆಯನ್ನು ಹೆಚ್ಚಿಸುತ್ತದೆ ಮತ್ತು ಕೂದಲು ಉದುರುವಿಕೆಯನ್ನು ತಡೆಯುತ್ತದೆ.
ಕೂದಲು ಉದುರುವುದನ್ನು ತಡೆಯಲು ನೆಲ್ಲಿಕಾಯಿ ಬೆಸ್ಟ್ ಮನೆ ಮದ್ದು. ನೆಲ್ಲಿಕಾಯಿಯನ್ನು ಬೇಯಿಸಿ ತಿನ್ನಬಹುದು. ಅಥವಾ ಹಸಿ ನೆಲ್ಲಿಕಾಯಿಯನ್ನು ತಿನ್ನಬಹುದು. ಇದು ತೂಕವನ್ನು ಕಡಿಮೆ ಮಾಡಲು ತುಂಬಾ ಪರಿಣಾಮಕಾರಿಯಾಗಿದೆ.
ನುಗ್ಗೆ ಸೊಪ್ಪಿನ ಪುಡಿ ಕೂದಲು ಉದುರುವುದನ್ನು ತಡೆಯುತ್ತದೆ. ನುಗ್ಗೆ ಸೊಪ್ಪಿನ ಪುಡಿಯಲ್ಲಿರುವ ಪೋಷಕಾಂಶಗಳು ಕೂದಲಿಗೆ ತುಂಬಾ ಸಹಕಾರಿ. ಕೂದಲಿನ ಸಮಸ್ಯೆಯಿಂದ ಮುಕ್ತಿ ಹೊಂದಲು ನುಗ್ಗೆ ಸೊಪ್ಪಿನ ಪುಡಿಯನ್ನು ಸೇವಿಸಬೇಕು.
ಕೂದಲಿನ ಹಾನಿಯನ್ನು ಕಡಿಮೆ ಮಾಡಲು ಜಾಯಿಕಾಯಿ ತುಂಬಾ ಸಹಕಾರಿ. ದಪ್ಪ, ಕಪ್ಪು ಮತ್ತು ಹೊಳೆಯುವ ಕೂದಲನ್ನು ಪಡೆಯಲು, ಪ್ರತಿದಿನ ಜಾಯಿಕಾಯಿಯನ್ನು ಸೇವಿಸಬೇಕು.
ಒಣ ಹಣ್ಣುಗಳಲ್ಲಿ, ಆಕ್ರೋಟ್ ಕೂದಲಿಗೆ ತುಂಬಾ ಪ್ರಯೋಜನಕಾರಿಯಾಗಿದೆ. ಪ್ರತಿನಿತ್ಯ ವಾಲ್ ನಟ್ಸ್ ತಿನ್ನುವುದರಿಂದ ಕೂದಲು ದಟ್ಟವಾಗಿ ಬೆಳೆಯುವುದು ಮಾತ್ರವಲ್ಲ ಕಪ್ಪಾಗುತ್ತದೆ. ಇದರಲ್ಲಿ ಒಮೆಗಾ 3 ಫ್ಯಾಟಿ ಆಸಿಡ್ ಇದ್ದು ಕೂದಲು ಉದುರುವುದನ್ನು ತಡೆಯುತ್ತದೆ.